ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ಭಾರೀ ಪ್ರಮಾಣ ಇದೀಗ ಬಹಿರಂಗವಾಗಿದೆ. ಸಂಡೂರು ವಿಧಾನಸಭಾ ಕ್ಷೇತ್ರದ ಸದಸ್ಯರಾದ ಅನ್ನಪೂರ್ಣ ಈ. ಅವರ ಪ್ರಶ್ನೆಗೆ ಸರ್ಕಾರ ನೀಡಿದ ಉತ್ತರದ ಪ್ರಕಾರ, ರಾಜ್ಯದ 45 ಇಲಾಖೆಗಳಲ್ಲೂ ಒಟ್ಟು 2,84,881 ಹುದ್ದೆಗಳು ಖಾಲಿ ಇರುವುದಾಗಿ ತಿಳಿದುಬಂದಿದೆ.
ಇದಲ್ಲದೆ, 96,844 ಹುದ್ದೆಗಳು ಗುತ್ತಿಗೆ ಅಥವಾ ಹೊರಗುತ್ತಿಗೆ ಆಧಾರದ ಮೇಲೆ ಭರ್ತಿಯಾಗಿದ್ದು, ಇನ್ನೂ 1,88,037 ಹುದ್ದೆಗಳು ನಿವ್ವಳವಾಗಿ ಖಾಲಿ ಉಳಿದಿವೆ. ಇದರಿಂದ ಸರ್ಕಾರಿ ವ್ಯವಸ್ಥೆಯಲ್ಲಿ ಮಾನವ ಸಂಪನ್ಮೂಲದ ಕೊರತೆ ಸ್ಪಷ್ಟವಾಗುತ್ತಿದೆ.
ಖಾಲಿ ಹುದ್ದೆಗಳ ಸಂಖ್ಯೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮುಂಚೂಣಿಯಲ್ಲಿದ್ದು, ಇಲ್ಲಿ 79,694 ಹುದ್ದೆಗಳು ಖಾಲಿ ಇರುವುದಾಗಿ ತಿಳಿದುಬಂದಿದೆ. ನಂತರ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ 37,572, ಒಳಾಡಳಿತ (ಪೊಲೀಸ್) ಇಲಾಖೆಯಲ್ಲಿ 28,188 ಹಾಗೂ ಉನ್ನತ ಶಿಕ್ಷಣ ಇಲಾಖೆಯಲ್ಲಿ 13,599 ಹುದ್ದೆಗಳು ಖಾಲಿ ಇವೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ 10,504 ಹುದ್ದೆಗಳು ಖಾಲಿಯಾಗಿದ್ದು, ಕಂದಾಯ ಇಲಾಖೆಯಲ್ಲಿ ಗಣಕೀಕರಣದ ಕಾರಣದಿಂದ ನಿವ್ವಳ ಹುದ್ದೆಗಳಲ್ಲಿ ವ್ಯತ್ಯಾಸ ಕಂಡುಬಂದಿದೆ.
ಹುದ್ದೆಗಳ ವರ್ಗೀಕರಣವನ್ನು ಗಮನಿಸಿದರೆ, ‘ಸಿ’ ವೃಂದದ ಹುದ್ದೆಗಳೇ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಖಾಲಿ ಇವೆ. A ವೃಂದದಲ್ಲಿ 16,171, B ವೃಂದದಲ್ಲಿ 17,180, C ವೃಂದದಲ್ಲಿ 1,72,190 ಮತ್ತು D ವೃಂದದಲ್ಲಿ 79,340 ಹುದ್ದೆಗಳು ಖಾಲಿಯಾಗಿರುವುದು ಸರ್ಕಾರದ ಅಂಕಿ-ಅಂಶಗಳಿಂದ ಬಹಿರಂಗವಾಗಿದೆ.
ಈ ಅಂಕಿ-ಅಂಶಗಳು ರಾಜ್ಯದಲ್ಲಿ ಉದ್ಯೋಗಾವಕಾಶಗಳ ಅಗತ್ಯತೆ ಮತ್ತು ನೇಮಕಾತಿ ಪ್ರಕ್ರಿಯೆಯನ್ನು ವೇಗಗೊಳಿಸುವ ಅಗತ್ಯವನ್ನು ಸೂಚಿಸುತ್ತವೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.



















