Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ನನ್ನ ವಿರುದ್ಧ ಷಡ್ಯಂತ್ರ ನಡೆದಿದೆ..ಸಿಎಂ ರಾಜೀನಾಮೆಗೆ ಸೂಚಿಸಿದ್ದಾರೆ : ಭೋವಿ ನಿಗಮದ ಅಧ್ಯಕ್ಷ ರವಿಕುಮಾರ್

---Advertisement---

 

ಶಿವಮೊಗ್ಗ: ಭೋವಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಕಳೆದ ವರ್ಷ ಅಂದ್ರೆ 2024ರ ಆಗಸ್ಟ್ ನಲ್ಲಿ ಬೆಂಗಳೂರಿನಲ್ಲಿರುವ ನಿಗಮದ ಕಚೇರಿ ಮೇಲೆ ಸಿಐಡಿ ದಾಳಿ ನಡೆಸಿತ್ತು. 2021-22ನೇ ಸಾಲಿನಲ್ಲಿ ಉದ್ಯಮಿಗಳಿಗೆ ಸಾಲ ನೀಡುವಾಗ ಅಕ್ರಮ ನಡೆದಿತ್ತು.

ಲಕ್ಷಾಂತರ ರೂಪಾಯಿ ಸಾಲ ಕೊಡಿಸುವ ಆಮಿಷವೊಡ್ಡಿ ಸಾರ್ವಜನಿಕ ದಾಖಲೆ ದುರ್ಬಳಕೆ ಜೊತೆಗೆ 10 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ ಆರೋಪದ ಆಧಾರದಲ್ಲಿ ಸಿಐಡಿ ದಾಳಿ ನಡೆದಿತ್ತು. ಆ ವಿಚಾರದಲ್ಲಿ ತನಿಖೆಯೂ ನಡೆಯುತ್ತಿದೆ. ಇದೀಗ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ್ ಮೇಲೆಯೇ ಆರೋಪ ಕೇಳಿ ಬಂದಿದೆ. ಈ ಸಂಬಂಧ ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಅಧ್ಯಕ್ಷರಿಗೆ ರಾಜೀನಾಮೆ ನೀಡುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ರಾಜೀನಾಮೆ ನೀಡುವ ವಿಚಾರಕ್ಕೆ ರವಿಕುಮಾರ್ ಪ್ರತಿಕ್ರಿಯೆ ನೀಡಿದ್ದು, ಇದು ನನ್ನ ವಿರುದ್ಧ ಮಾಡಿರುವ ಷಡ್ಯಂತ್ರ ಎಂದಿರುವ ರವಿಕುಮಾರ್, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ನಿರ್ಧಾರಕ್ಕೆ ಬದ್ಧ ಎಂದಿದ್ದಾರೆ. ಅಲ್ಲದೆ, ಎಐ ತಂತ್ರಜ್ಞಾನ ಬಳಕೆ ಮಾಡಿ ಕೆಲ ಸಂಗತಿಗಳನ್ನು ತಿರುಚಿದ್ದಾರೆ. ನಿಗಮದಲ್ಲಿ ಎಲ್ಲಾ ಕೆಲಸಗಳನ್ನು ಪಾರದರ್ಶಕವಾಗಿ ಮಾಡಿದ್ದೇನೆ. ಅದಕ್ಕಾಗಿ ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ಆಗಲಿ ಎಂದು ಆಗ್ರಹಿಸಿದ್ದಾರೆ. ಜೊತೆಗೆ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆಗೆ ಸೂಚನೆ ನೀಡಿರುವ ಬಗ್ಗೆಯೂ ಮಾತನಾಡಿದ್ದಾರೆ. ಸೂಚನೆ ನೀಡಿದ್ದಾರೆಂದು ತಿಳಿಸಿದ್ದಾರೆ. ಆದರೆ ರಾಜೀನಾಮೆ ಕೊಡ್ತಾರಾ ಹೇಗೆ ಎಂಬುದನ್ನ ನೋಡಬೇಕಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...