ಬೆಂಗಳೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ಪ್ರಣಾವನಂದ ಸ್ವಾಮೀಜಿ ಗಂಭೀರ ಆರೋಪ ಮಾಡಿದ್ದಾರೆ. ಮಧು ಬಂಗಾರಪ್ಪ ಅವರಿಂದ ನನಗೆ ಜೀವ ಬೆದರಿಕೆ ಇದೆ ಎಂದು ಹೇಳಿದ್ದಾರೆ. ಮಧು ಬಂಗಾರಪ್ಪ ಅವರ ಬೆಂಬಲಿಗರು ನನಗೆ ಕರೆ ಮಾಡಿ, ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದಿದ್ದಾರೆ.
ಇನ್ನು ಇಂದು ಕಮಿಷನರ್ ಅವರನ್ನು ಭೇಟಿ ಮಾಡಿ, ಈ ಸಂಬಂಧ ದೂರು ನೀಡುವುದಾಗಿ ತಿಳಿಸಿದ್ದಾರೆ. ಹರಿಪ್ರಸಾದ್ ಅವರಿಗೆ ಸ್ಥಾನಮಾನ ನೀಡಿ ಅಂತ ಕೇಳುವುದರಲ್ಲಿ ತಪ್ಪೇನಿದೆ. ಅವರು ಹಿಂದುಳಿದ ವರ್ಗದವರು. ಅವರಿಗೆ ಸ್ಥಾನಮಾನ ಕೇಳುವುದು ತಪ್ಪಲ್ಲ. ಬೇರೆ ಸಮುದಾಯದವರಿಗಾಗಿ ಹೋರಾಟ ಮಾಡಿದರಲ್ಲಾ, ಆ ಸಮುದಾಯಕ್ಕೆ ಮಧು ಬಂಗಾರಪ್ಪ ಅವರ ಕೊಡುಗೆ ಏನು..? ಎಂದು ಪ್ರಶ್ನಿಸಿದ್ದಾರೆ.
ನಾನು ಸಮುದಾಯದ ಭೂಮಿ ಕೊಳ್ಳೆ ಹೊಡೆದಿಲ್ಲ. ಸೈಟ್ ಮಾಡಿ ಮಾರಾಟ ಮಾಡಿಲ್ಲ. ಬಿಕೆ ಹರಿಪ್ರಸಾದ್ ಕಳ್ಳತನ ಮಾಡಿದವರಲ್ಲ. ಈಡಿಗ ಸಮುದಾಯವನ್ನು ಸರ್ಕಾರವೇ ಹತ್ತಿಕ್ಕುತ್ತಿದೆ. ಸ್ವಾಮೀಜಿಗಳ ವಿರುದ್ಧ ಸಂಚು ನಡೆಯುತ್ತಿದೆ. ನನ್ನ ಡಿಎನ್ಎ ವಿಚಾರ ನಿಮಗೆ ಯಾಕೆ ಬೇಕು. ನಾನು ಸ್ವಾಮೀಜಿ ಅಲ್ಲ ಅಂತ ಹೇಳುವುದಕ್ಕೆ ಅವರು ಯಾರು..? ಸಮುದಾಯಕ್ಕೆ ಅನ್ಯಾಯವಾದರೆ ಅದಕ್ಕೆ ನೀವೆ ಹೊಣೆ. ನಿಮ್ಮ ಹಿನ್ನೆಲೆ ಏನು ಅಂತ ನಿಮಗೆ ಗೊತ್ತಿದೆಯಾ..? ಎಂದಿದ್ದಾರೆ.
ಈ ಆರೋಪದ ವಿಚಾರವಾಗಿ ಮಾತನಾಡಿರುವ ಸಚಿವ ಮಧು ಬಂಗಾರಪ್ಪ, ಪ್ರಣಾವನಾಂದ ಶ್ರೀಗಳು ಕಣ್ಣೀರು ಯಾಕೆ ಹಾಕಿರುವುದು..? ಅವರೇನು ತಪ್ಪು ಮಾಡಿದ್ದಾರಾ..? ಪ್ರಣವಾನಂದ ಶ್ರೀಗಳು ನಮ್ಮ ಸಮುದಾಯದವರೇ ಅಲ್ಲ. ಅವರೇನು ಈಡಿಗ ಸಮುದಾಯದವರಾ..? ಅವರ ಹಿನ್ನಲೆಯಲ್ಲಿ ಕೆದಕಿ ನಿಮಗೆ ಗೊತ್ತಾಗುತ್ತದೆ ಎಂದಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















