ಬೆಳಗಾವಿ: ಚುನಾವಣೆ ಹತ್ತಿರವಾಗುತ್ತಿದ್ದು, ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರದಲ್ಲಿ ತೊಡಗಿವೆ. ಈ ಮಧ್ಯೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸುದ್ದಿಗೋಷ್ಟಿ ನಡೆಸಿ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಬಿಜೆಪಿಯವರು ಹತಾಶರಾಗಿದ್ದಾರೆ. ಕಾಂಗ್ರೆಸ್ ನವರ 50 ಅಭ್ಯರ್ಥಿಗಳ ಮೇಲೆ ಐಟಿ ದಾಳಿ ನಡೆಸುವ ಸಾಧ್ಯತೆ ಇದೆ. ನಾನು ಕೂಡ ಅವರ ಹಿಟ್ ಲೀಸ್ಟ್ ನಲ್ಲಿ ಇದ್ದೇನೆ ಎಂದಿದ್ದಾರೆ.
ಚುನಾವಣೆಗೆ 10 ದಿನ ಬಾಕಿ ಇದೆ.ಈ ಬಾರಿ ಕಾಂಗ್ರೆಸ್ ಅಲೆ ಜೋರಾಗಿದೆ. ಈ ಸಂದರ್ಭದಲ್ಲಿ ಗೊಂದಲ ಉಂಟು ಮಾಡಲು ಯತ್ನ ನಡೆಯುತ್ತಿದೆ. ಹೀಗಾಗಿ ರಾಜ್ಯದ 50 ಅಭ್ಯರ್ಥಿಗಳ ಮೇಲೆ ಐಟಿ, ಲೋಕಾಯುಕ್ತ ದಾಳಿ ನಡೆಯಲಿದೆ. ನಮ್ಮ ಜಿಲ್ಲೆಯಲ್ಲಿ ಮೂವರ ಮೇಲೆ ಐಟಿ ದಾಳಿಗೆ ಈಗಾಗಲೇ ಸಿದ್ಧತೆ ನಡೆದಿದೆ. ಯಾರು ಎಂಬ ಹೆಸರನ್ನು ಶೀಘ್ರದಲ್ಲಿಯೇ ಬಿಡುಗಡೆ ಮಾಡಲಿದ್ದೇವೆ. ರಾಜ್ಯದ ಮತದಾರರು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಹುಮ್ಮಸ್ಸಿನಲ್ಲಿದ್ದಾರೆ.
ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಜನ ಭರವಸೆ ಇಟ್ಟುಕೊಂಡಿದ್ದಾರೆ. ಬೆಳಗಾವಿಯಲ್ಲೂ ಕಾಂಗ್ರೆಸ್ ಅತಿ ಹೆಚ್ಚು ಕ್ಷೇತ್ರದಲ್ಲಿ ಜಯಭೇರಿ ಬಾರಿಸಲಿದೆ. ಆದರೆ ಬಿಜೆಪಿ ವಾಮಮಾರ್ಗದಲ್ಲಿ ದಾಳಿ ನಡೆಸಲು ಯೋಜಿಸುತ್ತಿದೆ. ಇದು ಬಿಜೆಪಿಗೆ ತಿರುಗುಬಾಣವಾಗಲಿದೆ ಎಂದಿದ್ದಾರೆ.





GIPHY App Key not set. Please check settings