ಬೆಂಗಳೂರು: ಮೌಂಡಸ್ ಚಂಡಮಾರುತ ಈಗ ತಾನೇ ತಗ್ಗಿದೆ. ಐದು ದಿನಗಳ ಕಾಲ ಬೆಂಬಿಡದೆ ಸುರಿದ ಮಳೆಯಿಂದ ಈಗಷ್ಟೇ ಮುಕ್ತಿ ಸಿಕ್ಕಿದೆ. ಆದರೆ ಮತ್ತೆ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ
ದಕ್ಷಿಣ ಒಳನಾಡಿನಲ್ಲಿ ಮಳೆ ಸುರಿಯಲಿದ್ದು, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಒಂಭತ್ತು ಜಿಲ್ಲೆಗಳಿಗೆ ಮಳೆಯಾಗಲಿದೆ. ಇಂದು ಬೆಳಗ್ಗೆಯಿಂದ ಮಪೊಡ ಕವಿದ ವಾತಾವರಣವಿದೆ. ಮಳೆಯಾಗುವ ಸಾಧ್ಯತೆಯೂ ಇದೆ. ಇಂದು ಹಾಗೂ ನಾಳೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೊಡಗು, ಕೋಲಾರ, ಮೈಸೂರು, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆಯಿದೆ. ಕೊನೆಯ 2 ದಿನ ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.