ವರದಿ ಮತ್ತು ಫೋಟೋ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಚಿತ್ರದುರ್ಗ, (ನ.19): ದೇಶದ ಐಕ್ಯತೆಗಾಗಿ ಗಾಂಧಿ ಕುಟುಂಬದ ತ್ಯಾಗ ಬಲಿದಾನವಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಹೇಳಿದರು.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ನಡೆದ ದೇಶದ ಮಾಜಿ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿರವರ ಜನ್ಮದಿನಾಚರಣೆಯನ್ನುದ್ದೇಶಿಸಿ ಮಾತನಾಡಿದ ಅವರು ಉಕ್ಕಿನ ಮಹಿಳೆ ಎಂದೆ ಪ್ರಖ್ಯಾತಿ ಪಡೆದಿದ್ದ ಇಂದಿರಾಗಾಂಧಿ ಮಹಿಳೆಯೂ ಅಧಿಕಾರದ ಚುಕ್ಕಾಣಿ ಹಿಡಿಯಬಹುದು ಎನ್ನುವುದನ್ನು ವಿಶ್ವಕ್ಕೆ ತೋರಿಸಿದರು.
ಬ್ಯಾಂಕ್‍ಗಳನ್ನು ರಾಷ್ಟ್ರೀಕರಣಗೊಳಿಸಿ ಉಳುವವನೆ ಭೂಮಿಯ ಒಡೆಯವ ಎನ್ನುವ ಕಾನೂನು ಜಾರಿಗೆ ತಂದಿದ್ದು, ಇಂದಿರಾಗಾಂದಿ. ಕಾಂಗ್ರೆಸ್ ದೇಶಕ್ಕೆ ಅನೇಕ ಕೊಡುಗೆಗಳನ್ನು ನೀಡಿರುವುದನ್ನು ಸಹಿಸಿಕೊಳ್ಳಲು ಆಗದ ಬಿಜೆಪಿ.ಯವರು ಇಲ್ಲ ಸಲ್ಲದ ಅಪಪ್ರಚಾರದಲ್ಲಿ ತೊಡಗಿದ್ದಾರೆ. ಹಾಗಾಗಿ ಕಾಂಗ್ರೆಸ್ ಸಾಧನೆಗಳನ್ನು ಪ್ರತಿ ಮನೆ ಮನೆಗೆ ಮುಟ್ಟಿಸುವ ಕೆಲಸವಾಗಬೇಕು ಎಂದು ಕಾರ್ಯಕರ್ತರಿಗೆ ಸೂಚಿಸಿದರು.
ರಾಹುಲ್‍ಗಾಂಧಿ ಭಾರತ್ ಜೋಡೋ ಐಕ್ಯತಾಯಾತ್ರೆಯಲ್ಲಿ ಅನೇಕ ಮಹಿಳೆಯರು ಇಂದಿರಾಗಾಂಧಿಯನ್ನು ನೆನಪು ಮಾಡಿಕೊಂಡಿದ್ದುಂಟು. ದೇಶದಲ್ಲಿ ತುರ್ತುಪರಿಸ್ಥಿತಿ ಹೇರುವ ಅವಶ್ಯಕತೆಯಿದ್ದುದರಿಂದ ಇಂದಿರಾಗಾಂಧಿ ದಿಟ್ಟ ನಿರ್ಧಾರ ಕೈಗೊಳ್ಳಬೇಕಾಯಿತು. ಕೇಂದ್ರ ಮತ್ತು ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಡಿಲಿಟ್ ಮಾಡುವ ಕುತಂತ್ರ ಬಿಜೆಪಿ.ಯಿಂದ ನಡೆಯುತ್ತಿರುವುದರ ವಿರುದ್ದ ನಮ್ಮ ಕಾರ್ಯಕರ್ತರು ಎಚ್ಚರಿಕೆ ವಹಿಸಿ ಮತದಾರರ ಪಟ್ಟಿಯಿಂದ ಯಾರದಾದರೂ ಹೆಸರು ಬಿಟ್ಟು ಹೋಗಿದ್ದರೆ ಮತ್ತೆ ಸೇರಿಸುವ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು.
ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಮುನಿರಾ ಎ.ಮಕಾಂದಾರ್ ಮಾತನಾಡಿ ಇಂದಿರಾಗಾಂಧಿ ದೇಶದ ಪ್ರಧಾನಿಯಾಗಿದ್ದಾಗಲೆ ಅಂಗರಕ್ಷಕರಿಂದ ಗುಂಡಿಗೆ ಬಲಿಯಾಗುತ್ತಾರೆ. ದೇಶಕ್ಕಾಗಿ ಅವರ ತ್ಯಾಗ ಬಲಿದಾನವಿದೆ. ಗಾಂಧಿ ಕುಟುಂಬಕ್ಕೆ ಅಧಿಕಾರ ಮುಖ್ಯವಲ್ಲ. ಬ್ಯಾಂಕ್ ರಾಷ್ಟ್ರೀಕರಣಗೊಳಿಸಿದ್ದರಿಂದ ಇಂದು ಬಡವನು ಕೂಡ ಬ್ಯಾಂಕ್‍ನಲ್ಲಿ ವ್ಯವಹರಿಸುವಂತ ಅವಕಾಶ ಕಲ್ಪಿಸಿಕೊಟ್ಟಿರುವುದು ಇಂದಿರಾಗಾಂಧಿ ಎಂದು ಹೇಳಿಕೊಳ್ಳಲು ಹೆಮ್ಮಯಾಗುತ್ತದೆ ಎಂದರು.
ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕೆ.ಪಾಪಯ್ಯ, ವಿಧಾನಪರಿಷತ್ ಮಾಜಿ ಸದಸ್ಯೆ ಜಯಮ್ಮ ಬಾಲರಾಜ್, ಹಿರಿಯ ಉಪಾಧ್ಯಕ್ಷ ಎನ್.ಬಿ.ಟಿ.ಜಮೀರ್ ಇವರುಗಳು ಮಾತನಾಡಿದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಡಿ.ಎನ್.ಮೈಲಾರಪ್ಪ, ಉಪಾಧ್ಯಕ್ಷೆ ನಜ್ಮತಾಜ್, ಮೋಕ್ಷರುದ್ರಸ್ವಾಮಿ, ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷ ಜಯಣ್ಣ, ಅಸಂಘಟಿತ ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಮೋಹನ್ ಪೂಜಾರಿ, ಸೈಯದ್‍ವಲಿಖಾದ್ರಿ, ಸೇವಾದಳದ ಇಂದಿರಾ ಇನ್ನು ಮೊದಲಾದವರು ಇಂದಿರಾಗಾಂಧಿ ಜನ್ಮದಿನಾಚರಣೆಯಲ್ಲಿ ಭಾಗವಹಿಸಿದ್ದರು.