ಬೆಂಗಳೂರು: ಕಡೆಗೂ ಗೃಹಲಕ್ಷ್ಮೀ ಯೋಜನೆಯ ಅರ್ಜಿ ಸಲ್ಲಿಕೆಗೆ ದಿನಾಂಕ ನಿಗಧಿಯಾಗಿದೆ. ಇಷ್ಟು ದಿನ ಶಕ್ತಿ ಯೋಜನೆಯ ಲಾಭ ಪಡೆಯುತ್ತಿದ್ದ ಮಹಿಲಕೆಯರಿಗೆ ಈಗ ಗೃಹಲಕ್ಷ್ಮೀಯ ಲಾಭವೂ ಸಿಗಲಿದೆ.
ಈ ಸಂಬಂಧ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ. ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಯಾವುದೇ ರೀತಿಯ ಶುಲ್ಕ ಇರುವುದಿಲ್ಲ. ಶುಲ್ಕ ಕೇಳಿದ್ದು ಗೊತ್ತಾದರೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.
ಇನ್ನು ಅರ್ಜಿ ಸಲ್ಲಿಕೆಗೆ ಪಡಿತರ ಚೀಟಿ ಸಂಖ್ಯೆ, ಆಧಾರ್ ಕಾರ್ಡ್ ಸಂಖ್ಯೆ, ಬ್ಯಾಂಕ್ ಖಾತೆಯ ಪಾಸ್ ಬುಕ್ ಬೇಕಾಗುತ್ತದೆ. ಆಧಾರ್ ಜೋಡಣೆಯಾಗಿರುವ ಖಾತೆಗೆ ಡಿಬಿಟಿ ಮೂಲಕ ಹಣ ಜಮೆಯಾಗುತ್ತದೆ. ಖಾತೆಗೆ ಹಣ ಜಮೆಯಾದಾಗ ಮೊಬೈಲ್ ಸಂಖ್ಯೆಗೆ ಎಸ್ಎಂಎಸ್ ಹೋಗಲಿದೆ. ಮನೆ ಯಜಮಾನಿಗೆ ಗೃಹಲಕ್ಷ್ಮಿ ಯೋಜನೆಯಲ್ಲಿ ಎರಡು ಸಾವಿರ ರೂಪಾಯಿ ನೀಡಲಾಗುತ್ತದೆ.
ಈ ಅರ್ಜಿಯನ್ನು ಕರ್ನಾಟಕ ಒನ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರದಲ್ಲಿ ಸಲ್ಲಿಕೆ ಮಾಡಬಹುದು. 1.28 ಕೋಟಿ ಕುಟುಂಬಕ್ಕೆ ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆಯಲಿದೆ. ಗೊಂದಲ ಇದ್ದರೆ 814500500 ಮೊಬೈಲ್ ಗೆ ಕರೆ ಮಾಡಿ. ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಯಾವ ಶುಲ್ಕವು ಇರುವುದಿಲ್ಲ. ಯಾರಾದರೂ ಶುಲ್ಕ ಪಡೆದರೆ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಇನ್ನು ಗೃಹಲಕ್ಷ್ಮಿಗೆ ಜುಲೈ 17 ಅಥವಾ 19 ರಿಂದ ಅರ್ಜಿ ಸಲ್ಲಿಕೆ ಆರಂಭವಾಗುತ್ತದೆ.