Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸರ್ಕಾರದಲ್ಲಿ ಭಿನ್ನಾಭಿಪ್ರಾಯ ಇಲ್ಲ : ಹೊಸದುರ್ಗದಲ್ಲಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿಕೆ

---Advertisement---

ಸುದ್ದಿಒನ್, ಹೊಸದುರ್ಗ, ಜನವರಿ. 17 :  ಸರ್ಕಾರ ಹಾಗೂ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ಹೊಸದುರ್ಗ ತಾಲ್ಲೂಕಿನ ಶ್ರೀರಾಂಪುರ ಹೋಬಳಿಯ ಮಲ್ಲಿಹಳ್ಳಿ ಗ್ರಾಮದ ಕೃಷಿಕ ಪ್ರಭುಲಿಂಗಪ್ಪ ಹಾಗೂ ಮಹೇಶ್ ಅವರ ಸಿರಿಧಾನ್ಯ ರೈತರ ಒಕ್ಕಲು ಕಣ ಹಾಗೂ ಕ್ಷೇತ್ರಕ್ಕೆ ಶುಕ್ರವಾರ ಭೇಟಿ ನೀಡಿದ ಅವರು ರೈತರೊಂದಿಗೆ ಸಂವಾದ ನಡೆಸಿ, ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಉಪಮುಖ್ಯಮಂತ್ರಿ ಸೇರಿದಂತೆ ಎಲ್ಲಾ ಸಚಿವರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. 5 ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿ ಮಾಡಲಾಗಿದೆ. ಒಂದುವರೆ ವರ್ಷಗಳ ಆಡಳಿತ ನೀಡಲಾಗಿದೆ.

ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲಾಗಿದೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಅಪರಾಧಗಳ ಸಂಖ್ಯೆ ಇಳಿಮುಖವಾಗಿದೆ. ಕೆಲ ಅಹಿತಕರ ಘಟನೆಗಳು ನಡೆದಿವೆ. ಸರ್ಕಾರ ಇವುಗಳನ್ನು ಗಂಭೀರವಾಗಿ ಪರಿಗಣಿಸಿದೆ. ಆರೋಪಿಗಳನ್ನು ಬಂಧಿಸಿ ಕಾನೂನು ಪ್ರಕ್ರಿಯೆಗೆ ಒಳಪಡಿಸಲಾಗುವುದು. ಯಾರೇ ತಪ್ಪು ಮಾಡಿದರು ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳುವುದಾಗಿ ಸಚಿವ ಚಲುವರಾಯಸ್ವಾಮಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.

ಈ ವೇಳೆ ಶಾಸಕ ಬಿ‌.ಜಿ.ಗೋವಿಂದಪ್ಪ, ಶಾಸಕ ಟಿ.ರಘುಮೂರ್ತಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ ಸೇರಿದಂತೆ ಸ್ಥಳೀಯ ಮುಖಂಡರು, ರೈತರು ಅಧಿಕಾರಿಗಳು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...