ಮೈಸೂರು: ಇಂದು ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರದ ಸಭೆಯ ಬಳಿಕ ಸಿಎಂ ಸಿದ್ದರಾಮಯ್ಯ ಮಾತನಾಡಿ, ದೇವಸ್ಥಾನದಲ್ಲಿ ಬರುವ ನಿವ್ವಳ ಆದಾಯದ ಬಗ್ಗೆ ತಿಳಿಸಿದರು.
ಪ್ರಾಧಿಕಾರದಲ್ಲಿ ಒಟ್ಟು 169.22 ಕೋಟಿ ¯ಭ್ಯವಿದ್ದು, ದೇವಾಲಯದ ಉಳಿತಾಯ ಖಾತೆಯಲ್ಲಿ 20.24 ಕೋಟಿ ರೂ.ಗಳು ಲಭ್ಯವಿದೆ. 2023-24 ರಲ್ಲಿ 49.64 ಕೋಟಿ ರೂ.ಗಳ ಆದಾಯ 28.18 ಕೋಟಿ ನಿವ್ವಳ ಆದಾಯ ಬಂದಿದೆ. ಜುಲೈ ಕೊನೆಯವರೆಗೆ 17.4 ಕೋಟಿ ಆದಾಯ ಬಂದಿದ್ದು, 6.97 ಕೋಟಿ ವೆಚ್ಚವಾಗಿದೆ. ಪ್ರತಿ ವರ್ಷ ಆದಾಯ ಹೆಚ್ಚಾಗುತ್ತಿದೆ. ಅಂದರೆ ಭೇಟಿ ನೀಡುವ ಭಕ್ತಾದಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಚಾಮುಂಡಿ ಬೆಟ್ಟದಲ್ಲಿರುವ ದೇವಿಕೆರೆ, ನಂದಿ ಪ್ರತಿಮೆ ಅಭಿವೃದ್ಧಿಗೆ ತೀರ್ಮಾನ ಮಾಡಲಾಗಿದೆ. ಶಾಸಕರು ಹಾಗೂ ಸಚಿವರು ವ್ಯಕ್ತ ಮಾಡಿರುವ ಅಭಿಪ್ರಾಯಗಳನ್ನು ಗಮನದಲ್ಲಿಟ್ಟುಕೊಂಡು ಪ್ರಾಧಿಕಾರ ಕೆಲಸ ಮಾಡುತ್ತದೆ ಎಂದು ತಿಳಿಸಿದರು.
ಇದೆ ವೇಳೆ, ಬೆಟ್ಟಕ್ಕೆ ಬರುವ ಮೆಟ್ಟಿಲುಗಳನ್ನು ಅಭಿವೃದ್ಧಿಪಡಿಲಾಗುವುದು ಎಂದ ಮುಖ್ಯಮಂತ್ರಿಗಳು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡುವವರಿಗೆ ಯಾವುದೇ ವಸ್ತ್ರ ಸಂಹಿತೆಯನ್ನು ಜಾರಿ ಮಾಡಿಲ್ಲ. ಎಲ್ಲಾ ಜಾತಿ , ಧರ್ಮದವರು ದೇವಸ್ಥಾನಕ್ಕೆ ಬರಬಹುದು ಎಂದರು.
ದೇವಾಲಯಗಳಲ್ಲಿ ಅಗತ್ಯವಿರುವೆಡೆ ಸಿಸಿಟಿವಿ ಅಳವಡಿಸಬೇಕೆಂದು ತೀರ್ಮಾನಿಸಿ, ಯೂನಿಯನ್ ಬ್ಯಾಂಕ್ ನವರು ಸಿಎಸ್ ಆರ್ ನಿಧಿಯಿಂದ ಸಿಸಿಟಿವಿಗಳನ್ನು ಅಳವಡಿಕೆಗೆ ಸಹಕಾರ ನೀಡಲಿದ್ದಾರೆ. ದೇವಸ್ಥಾನದ ಸುತ್ತಮುತ್ತಲಿನ ದೀಪದ ವ್ಯವಸ್ಥೆಗೊಳಿಸುವ ಜೊತೆಗೆ ಈ ಪ್ರದೇಶದಲ್ಲಿ ಅಪರಾಧಗಳನ್ನು ನಿಗ್ರಹಿಸಲು ಒಂದು ಟಾಸ್ಕ್ ಫೋರ್ಸ್ ನ್ನು ರಚನೆ ಮಾಡಲಾಗುವುದು ಎಂದರು.