ವಾಣಿವಿಲಾಸ ಸಾಗರ ಜಲಾಶಯದ ಸುರಕ್ಷತೆಯ ಬಗ್ಗೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ : ಸಚಿವ ಗೋವಿಂದ ಕಾರಜೋಳ

ಚಿತ್ರದುರ್ಗ : ಕೇಂದ್ರ ಮತ್ತು ರಾಜ್ಯ ಸರ್ಕಾರದ ತಜ್ಞರ ಸಮಿತಿಯು ಇಂದು (ಗುರುವಾರ) ಅಣೆಕಟ್ಟೆಗೆ ಭೇಟಿ ಕೊಟ್ಟಿದ್ದು ವಾಣಿವಿಲಾಸ ಸಾಗರ ಜಲಾಶಯದ ಅಣೆಕಟ್ಟೆಯನ್ನು ಸಮಗ್ರವಾಗಿ ಪರಿಶೀಲಿಸಿ, ಪರಿವೀಕ್ಷಿಸಿ ಅಣೆಕಟ್ಟೆಯ ಯಾವುದೇ ಭಾಗದಲ್ಲಿ ನೀರು ಸೋರುವಿಕೆ ಇಲ್ಲವೆಂದು ಹಾಗೂ ಅಣೆಕಟ್ಟೆಯ ಸುರಕ್ಷತೆಗೆ ಯಾವುದೇ ತೊಂದರೆ ಇಲ್ಲವೆಂದು ವರದಿ ನೀಡಿರುತ್ತಾರೆ.

ಕೇಂದ್ರ ಜಲ ಆಯೋಗದ ಶಿಫಾರಸ್ಸಿನಂತೆ ವಾಣಿವಿಲಾಸ ಸಾಗರ ಅಣೆಕಟ್ಟೆಯಲ್ಲಿ ಅತಿ ಹೆಚ್ಚು ಸಂಭವನೀಯ ಪ್ರವಾಹ ಪರಿಸ್ಥಿತಿ 35,000 ಕ್ಯೂಸೆಕ್ಸ್ ಇದ್ದು, ಪ್ರಸ್ತುತ ಅಣೆಕಟ್ಟೆಗೆ ಹರಿದು ಬರುತ್ತಿರುವ ನೀರು  ಸುಮಾರು 15 ಸಾವಿರ ಕ್ಯೂಸೆಕ್ಸ್ ಇದೆ.  ಅಷ್ಟೇ ಪ್ರಮಾಣದ ನೀರನ್ನು ಜಲಾಶಯದಿಂದ ಹೊರ ಬಿಡಲಾಗುತ್ತಿರುವುದರಿಂದ ಅಣೆಕಟ್ಟೆಯ ಗರಿಷ್ಠ ಮಟ್ಟ 142 ಅಡಿ  ಇರುವುದರಿಂದ ಪ್ರಸ್ತುತ ನೀರಿನ ಸಂಗ್ರಹಣೆ 135 ಅಡಿ ಇರುವುದರಿಂದ ಅಣೆಕಟ್ಟೆಗೆ ಯಾವುದೇ ತೊಂದರೆ ಇಲ್ಲ ಎಂದು ತಜ್ಞರು ತಿಳಿಸಿದ್ದಾರೆಂದು ಭದ್ರಾ ಮೇಲ್ದಂಡೆ ಯೋಜನಾ ವಲಯದ ಮುಖ್ಯ ಇಂಜಿನಿಯರ್ ವರದಿ ಸಲ್ಲಿಸಿರುತ್ತಾರೆ. ಈ ಹಿನ್ನೆಲೆಯಲ್ಲಿ ಜಲಾಶಯ ಕುರಿತು ಯಾವುದೇ ಆತಂಕಕ್ಕೆ ಕಾರಣವಿಲ್ಲ ಎಂದು
ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ತಿಳಿಸಿದ್ದಾರೆ.

suddionenews

Recent Posts

ಉದ್ಯೋಗ ವಾರ್ತೆ : ಚಿತ್ರದುರ್ಗದಲ್ಲಿ ಮಾರ್ಚ್ 01 ರಂದು ಬೃಹತ್ ಉದ್ಯೋಗ ಮೇಳ

ಚಿತ್ರದುರ್ಗ. ಫೆ.24:  ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…

2 hours ago

ಮಧ್ಯ ಕರ್ನಾಟಕದಲ್ಲಿಯೇ ಪ್ರಪ್ರಥಮ ENT ಲೇಸರ್ ಶಸ್ತ್ರಚಿಕಿತ್ಸಾ ಯಂತ್ರ ಲೋಕಾರ್ಪಣೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

2 hours ago

ಭದ್ರಾ ಮೇಲ್ದಂಡೆಗೆ ರಾಜ್ಯ ಬಜೆಟ್ ನಲ್ಲಿ ಐದು ಸಾವಿರ ಕೋಟಿ ಅನುದಾನಕ್ಕೆ ಹಕ್ಕೊತ್ತಾಯ

ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…

3 hours ago

ಶಾಲಾ ಪಠ್ಯದಲ್ಲಿ ಸಂಭಾಜಿ ಜೀವನ ಸೇರಿಸಲು ಒತ್ತಾಯ ; ಕಾರಣ ಏನು ಗೊತ್ತಾ..?

ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…

3 hours ago