Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದೊರೆ ಮಾಡಿದ್ದಕ್ಕೆ ದಂಡ ಇಲ್ಲ : ಡಿಕೆಶಿ ಬಗ್ಗೆ ಕೆ.ಎನ್.ರಾಜಣ್ಣ ಹೇಳಿದ್ದೇನು..?

---Advertisement---

ತುಮಕೂರು: ರಾಜ್ಯ ಕಾಂಗ್ರೆಸ್ ನಲ್ಲಿ ಮತ್ತೊಂದು ಚರ್ಚೆ ಶುರಿವಾಗಿದೆ. ಅದುವೆ ಸಿದ್ದರಾಮಯ್ಯ ಅವರ ಬೆಂಬಲಿಗರೇ ಟಾರ್ಗೆಟ್ ಆಗಿದ್ದು ಯಾಕೆ ಅನ್ನೋದು. ಸದ್ಯದ ಬೆಳವಣಿಗೆಯನ್ನ ಗಮನಿಸಿದರೆ ಸಿದ್ದರಾಮಯ್ಯ ಅವರ ಆಪ್ತರೇ ಕಿಕ್ ಔಟ್ ಆಗಿರೋದು. ರಾಜಣ್ಣ ಆಯ್ತು, ಈಗ ನಜೀರ್, ಜಬ್ಬರ್ ಕೂಡ ತಲೆದಂಡವಾಯ್ತು‌. ಇದರ ನಡುವೆ ಕೆಎನ್ ರಾಜಣ್ಣ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹಾಗೂ ಸದ್ಗುರು ಭೇಟಿ ಬಗ್ಗೆಯೂ ಮಾತನ್ನಾಡಿದ್ದಾರೆ.

ಕಾಂಗ್ರೆಸ್ ಪಕ್ಷ ಅಂದ್ರೆ ಶಿಸ್ತು ಪಕ್ಷ. ಶಿಸ್ತು ಜಾರಿ ಮಾಡುವಾಗ, ಸದ್ಗುರು, ರಾಹುಲ್ ಗಾಂಧಿ ಅವರ ಬಗ್ಗೆ ಮಾತನ್ನಾಡಿದ್ದರು. ರಾಹುಲ್ ಗಾಂಧಿ ಅಂದ್ರೆ ನಂಗೊತ್ತಿಲ್ಲ ಅಂದ್ರು. ಅವರ ಜೊತೆಯಲ್ಲಿಯೇ ಹೋಗಿ, ಕೂತ್ಕೊಂಡ್ರೆ ಶಿಸ್ತು ಮೀರಿದಂಗೆ ಆಗಲ್ವಾ. ದೊರೆ ಮಾಡಿದ್ದಕ್ಕೆ ದಂಡ ಇಲ್ಲ ಎಂಬ ಮಾತು ಇದೆ. ವೇದಗಳು ಸುಳ್ಳಾದರೂ ಗಾದೆಗಳು ಸುಳ್ಳಾಗುವುದಿಲ್ಲ. ಈಗ ಅದೇ ರೀತಿ ನಡೀತಾ ಇದೆ, ನಡೀಲಿ ಮುಂದೆ ನೋಡೋಣಾ ಎಂದಿದ್ದಾರೆ.

ವೋಟ್ ಚೋರಿ ವಿಚಾರದಲ್ಲಿ ನಮ್ಮವರದ್ದೇ ತಪ್ಪಿದೆ ಎಂಬ ಮಾತನ್ನ ಹೇಳಿದ್ದಂತ ರಾಜಣ್ಣ ಅವರನ್ನ ಸಂಪುಟದಿಂದಾನೇ ವಜಾ‌ಮಾಡಿದ್ದರು. ಅದರಿಂದ ನೊಂದಿರುವಂತ ರಾಜಣ್ಣ ಅವರು ಈ ಸಂಬಂಧ ಪ್ರಶ್ನೆಯನ್ನ ಕೇಳ್ತಿದ್ದಾರೆ. ಸದ್ಗುರು ಅವರು ರಾಹುಲ್ ಗಾಂಧಿ ಅವರ ಬಗ್ಗೆ ಮಾತನ್ನಾಡಿದ್ದವರು ಅಂಥವರ ಜೊತೆಗೆ ವೇದಿಕೆ ಹಂಚಿಕೊಳ್ಳಬಹುದಾ..? ಆರ್ ಎಸ್ ಎಸ್ ಗೀತೆಯನ್ನ ಹಾಡಿದ್ದರು. ಅವರ ವಿರುದ್ಧ ಯಾಕೆ ಯಾವುದೇ ಕ್ರಮ ಆಗಿಲ್ಲ ಎಂಬ ಪ್ರಶ್ನೆ ಅವರದ್ದು. ದೊರೆಗಳು ಏನೇ ಮಾಡಿದರು ನಡೆಯುತ್ತೆ ಎಂದು ಹೇಳುವ ಮೂಲಕ ಡಿಕೆಶಿಗೆ ತಿರುಗೇಟು ನೀಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಉದ್ಯೋಗ ಸೃಷ್ಟಿ ಹಾಗೂ ಕೌಶಲ್ಯಾಭಿವೃದ್ಧಿಗೆ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಕೈಗಾರಿಕಾ ಸಹಭಾಗಿತ್ವದ “ಹೈಪರ್-ಆಕ್ಟಿವ್ ಇನ್ನೋವೇಷನ್ ಹಬ್”ಗಳ ನಿರ್ಮಾಣ ಅತ್ಯಗತ್ಯ

ತೆಳ್ಳಗಿದ್ದರೆ ಮಾತ್ರ ಫಿಟ್ ಎಂದರ್ಥವಲ್ಲ: ನಿಜವಾದ ಫಿಟ್‌ನೆಸ್‌ನ ಗುರುತುಗಳೇನು? ತಜ್ಞರ ಸಲಹೆ ಇಲ್ಲಿದೆ

ಕೂದಲು ಉದುರುವಿಕೆ ತಡೆದು, ದಟ್ಟವಾಗಿ ಬೆಳೆಯಲು ಈ ‘ಸೂಪರ್‌ಫುಡ್‌’ಗಳನ್ನು ನಿಮ್ಮ ಆಹಾರದಲ್ಲಿ ತಪ್ಪದೇ ಸೇರಿಸಿ!

ಚಿತ್ರದುರ್ಗ : ಮೊಳಕಾಲ್ಮೂರಿನಲ್ಲಿ ಭೀಕರ ರಸ್ತೆ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು!

ಮೊಬೈಲ್‌-ಸ್ಕ್ರೀನ್‌ಗೆ ಬ್ರೇಕ್ ನೀಡಿ: ಮಾನಸಿಕ ಆರೋಗ್ಯ ಕಾಪಾಡಲು ‘ಡಿಜಿಟಲ್ ಡಿಟಾಕ್ಸ್’ ಏಕೆ ಮುಖ್ಯ?

ನೀತಿ ಕಥೆ: ನಂಬಿಕೆದ್ರೋಹಕ್ಕೆ ಕ್ಷಮೆಯಿಲ್ಲ (ಯುವರಾಜ ಮತ್ತು ಕರಡಿಯ ಕಥೆ)