ಬೆಂಗಳೂರು: ಕಳೆದ 20 ವರ್ಷಗಳಿಂದ ತಿರುಪತಿಗೆ ನಂದಿನಿ ತುಪ್ಪವನ್ನು ಕಳುಹಿಸಿ ಕೊಡಲಾಗುತ್ತಿತ್ತು. ಆದ್ರೆ ಆ ಟೆಂಡರ್ ಕ್ಯಾನ್ಸಲ್ ಮಾಡಲು ಸರ್ಕಾರ ನಿರ್ಧರಿಸಿದೆ. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಈ ವಿಚಾರವಾಗಿ ಮಾತನಾಡಿದ್ದಾರೆ. ನಾವೂ ಕೇಳುವ ದರವನ್ನು ನೀಡುವುದಾದರೆ ತುಪ್ಪ ಪೂರೈಸಲು ಸಿದ್ಧ ಎಂದಿದ್ದಾರೆ.
ತಿರುಪತಿಗೆ 6 ತಿಂಗಳಿಗೆ 14 ಲಕ್ಷ ಕೆಜಿಯಷ್ಟು ತುಪ್ಪವನ್ನು ನೀಡಲಾಗುತ್ತಿತ್ತು. ಅದುವರೆ ರಿಯಾಯಿತಿ ದರದಲ್ಲಿ. ಈಗ ಹಾಲಿನ ದರ ಹೆಚ್ಚಳವಾಗಿದೆ. ಮೊದಲಿನ ಹಾಗೇ ರಿಯಾಯಿತಿ ದರದಲ್ಲಿ ತುಪ್ಪ ಪೂರೈಕೆ ಕಷ್ಟ ಎಂದೇ ಸರ್ಕಾರ ಅಭಿಪ್ರಾಯಪಟ್ಟಿದೆ.
ಇನ್ನು ಇದೇ ವಿಚಾರವಾಗಿ ನಳೀನ್ ಕುಮಾರ್ ಕಟೀಲ್ ವ್ಯಂಗ್ಯ ಮಾಡಿದ್ದರು. ದೇವಸ್ಥಾನ ಹಾಗೂ ಹಿಂದೂಗಳ ಶ್ರದ್ಧೆ, ಭಕ್ತಿಯ ವಿಚಾರದಲ್ಲಿ ಕಾಂಗ್ರೆಸ್ ಅಸಡ್ಡೆ ತೋರುವ ಕಾಂಗ್ರೆಸ್ ನೀತಿಯಿಂದಾಗಿ ತಿರುಪತಿಗೆ ಲಡ್ಡು ಪೂರೈಕೆ ಸ್ಥಗಿತಗೊಂಡಿದೆ ಎಂದಿದ್ದರು. ಅದಕ್ಕೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಆಂಧ್ರಪ್ರದೇಶದ ತಿರುಪತಿಗೆ ನಂದಿನಿ ತುಪ್ಪದ ಪೂರೈಕೆ ಸ್ಥಗಿತಗೊಂಡಿರುವುದು ನಿನ್ನೆ, ಮೊನ್ನೆಯದಲ್ಲ. ಬಿಜೆಪಿ ಸರ್ಕಾರ ಇದ್ದಾಗಲೇ ತುಪ್ಪ ಪೂರೈಕೆಯನ್ನು ಸ್ಥಗಿತಗೊಳಿಸಲಾಗಿತ್ತು ಎಂದು ತಿರುಗೇಟು ನೀಡಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…