ಬೆಂಗಳೂರು: ಕೋಗಿಲು ಲೇಔಟ್ ಬಳಿ ಇತ್ತೀಚೆಗೆ ಮನೆ ತೆರವು ಕಾರ್ಯಾಚರಣೆ ನಡೆದಿತ್ತು. ಆ ಸಂಬಂಧ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪ್ರತಿಕ್ರಿಯೆ ನೀಡಿದ್ದರು. ಪಿಣರಾಯಿ ವಿಜಯನ್ ಹಿರಿಯ ನಾಯಕರು. ಅವರು ಸ್ಥಳೀಯ ವಿಚಾರಗಳನ್ನು, ಸತ್ಯ ಸಂಗತಿಯನ್ನು ತಿಳಿಯದೇ ಮಾತನಾಡುವುದು ಸರಿಯಲ್ಲ ಎಂದು ಕರ್ನಾಟಕದ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಕೋಗಿಲು ಲೇಔಟ್ ಬಳಿ ಕೆಲವು ಜನರು ಬಿಬಿಎಂಪಿಗೆ ಸೇರಿದ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಮನೆಗಳನ್ನ ನಿರ್ಮಿಸಿಕೊಂಡಿದ್ದರು. ಈ ಜಾಗವನ್ನು ಕಸದ ವಿಲೇವಾರಿಗೆ ಮೀಸಲಿಟ್ಟ ಐದು ಎಕರೆ ಪ್ರದೇಶವಾಗಿದ್ದು, ಅಕ್ರಮ ಒತ್ತುವರಿಯನ್ನು ಕಾನೂನು ಬದ್ಧವಾಗಿ ತೆರವುಗೊಳಿಸಲಾಗಿದೆ. ಯಾರನ್ನೂ ಮನೆ ಕಳೆದುಕೊಳ್ಳುವಂತೆ ಮಾಡಿಲ್ಲ. ಮನೆ ಕಳೆದುಕೊಂಡವರಿಗೆ ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ಮನೆ ಹಂಚಿಕೆ ಮಾಡಲಾಗುತ್ತಿದೆ. ನಾವೂ ಬುಲ್ಡೋಜರ್ ರಾಜಕಾರಣವನ್ನು ಪಾಲಿಸುವುದಿಲ್ಲ. ಕಾನೂನು ಬದ್ಧ ಪ್ರಕ್ರಿಯೆಯಲ್ಲಿಯೇ ತೆರವು ಕಾರ್ಯ ನಡೆದಿದೆ. ಪಿಣರಾಯಿ ವಿಜಯನ್ ಅವರ ಬುಲ್ಡೋಜರ್ ರಾಜ್ ಆರೋಪ ತಳ್ಳಿ ಹಾಕಿರುವ ಡಿಕೆಶಿ, ಮನೆ ಇಲ್ಲದವರಿಗೆ ರಾಜೀವ್ ಗಾಂಧಿ ವಸತಿ ನಿಗಮದಿಂದ ಮನೆ ಹಂಚಿಕೆ ಮಾಡಲಾಗುತ್ತಿದೆ. ಅಕ್ರಮವಾಗಿ ವಾಸಿಸುತ್ತಿದ್ದವರು ಮುಸ್ಲಿಮರು ಎಂಬ ಪ್ರಶ್ನೆ ಬರಲ್ಲ ಎಂದಿದ್ದಾರೆ.
ಈ ವಿಷಯವನ್ನು ನಮ್ಮ ಪಕ್ಷದ ನಾಯಕರಿಗೂ ತಿಳಿಸಲಾಗಿದೆ. ಇಲ್ಲಿನ ಸ್ಥಿತಿಗತಿಗಳನ್ನು ಅರಿಯದೇ ಆರೋಪ ಮಾಡುವುದು ಸರಿಯಲ್ಲ. ಸರ್ಕಾರಿ ಜಾಗವನ್ನು ಒತ್ತುವರಿ ಮಾಡಲು ಯಾರಿಗೂ ಅವಕಾಶ ನೀಡುವುದಿಲ್ಲ. ಚುನಾವಣೆ ಹತ್ತಿರವಾಗುತ್ತಿದ್ದಂತೆ ಇಂತಹ ಪ್ರತಿಕ್ರಿಯೆ ಮೂಡಿ ಬಂದಿರುವುದು ರಾಜಕೀಯ ಗಿಮಿಕ್ ಆಗಿರಬಹುದು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಸರ್ಕಾರದ ಜಾಗದಲ್ಲಿ ಅಕ್ರಮ ಸ್ಲಂ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ ಎಂದು ಪಿಣರಾಯಿ ವಿಜಯನ್ ಹೇಳಿಕೆಗೆ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






