Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಾಂಗ್ರೆಸ್‌ನಲ್ಲಿ ಅಶಿಸ್ತಿಗೆ ಜಾಗವಿಲ್ಲ, ಜೂ.21 ರ ಬಿ.ಕೆ.ಹರಿಪ್ರಸಾದ್ ಪದಗ್ರಹಣಕ್ಕೆ ಸಜ್ಜಾಗಿ: ಮುರುಳಿಧರ ಹಾಲಪ್ಪ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜೂನ್‌. 15 : ಕಾಂಗ್ರೆಸ್ ಪಕ್ಷ ಗಟ್ಟಿಯಾಗಿದೆ. ಇನ್ನು ಬಲವಾಗಬೇಕು. ಅಶಿಸ್ತಿಗೆ ಇಲ್ಲಿ ಜಾಗವಿಲ್ಲ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಮುರುಳಿಧರ ಹಾಲಪ್ಪ ಕಾರ್ಯಕರ್ತರು ಹಾಗೂ ಮುಖಂಡರುಗಳಿಗೆ ಎಚ್ಚರಿಕೆ ನೀಡಿದರು.

 

ಜೂ.21 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಪದಗ್ರಹಣ ಸಮಾರಂಭಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ಕರೆಯಲಾಗಿದ್ದ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿದರು.

 

ಪೂರ್ವಭಾವಿ ಸಭೆಗೆ ಬಾರದಿದ್ದವರಲ್ಲಿ ಜವಾಬ್ದಾರಿಯಿಲ್ಲ ಎಂದರ್ಥವಾಗುತ್ತದೆ. ಸಹಸ್ರಾರು ಮಂದಿ ಪಕ್ಷದಲ್ಲಿ ಜವಾಬ್ದಾರಿ ಹೊರಲು ಸಿದ್ದರಿದ್ದಾರೆ. ಇಪ್ಪತ್ತು ದಿನಗಳ ಹಿಂದೆ ಕೆ.ಪಿ.ಸಿ.ಸಿ. ಕಚೇರಿಯಲ್ಲಿ ಕರೆಯಲಾಗಿದ್ದ ಸಭೆಗೆ ಗೈರಾದ ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಯನ್ನು ಹುದ್ದೆಯಿಂದ ತೆಗೆದು ಹಾಕಲಾಯಿತು. ಮುಂಬರುವ ಎಲ್ಲಾ ಚುನಾವಣೆಯಲ್ಲೂ ಪಕ್ಷದ ಗೆಲುವಿಗೆ ಕಾರ್ಯಕರ್ತರು ಸಿದ್ದರಾಗಿದ್ದಾರೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆ.ಪಿ.ಸಿ.ಸಿ. ನೂತನ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್‍ಗೆ ಭರವಸೆ ನೀಡಬೇಕಿದೆ ಎಂದರು.

ಕೇಂದ್ರ ಚುನಾವಣಾ ಆಯೋಗ ಮತದಾರರ ಮತಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಗೆ ಮುಂದಾಗಿರುವುದನ್ನು ಕಾರ್ಯಕರ್ತರು ಲಘುವಾಗಿ ತೆಗೆದುಕೊಳ್ಳಬಾರದು. ಅರ್ಹ ಮತದಾರರು ಮತ ಪಟ್ಟಿಯಿಂದ ಹೊರ ಹೋಗದಂತೆ ಎಚ್ಚರ ವಹಿಸುವ ಹೊಣೆಗಾರಿಕೆ ನಿಮ್ಮ ಮೇಲಿದೆ. ನಿಮ್ಮ ನಿಮ್ಮ ಬ್ಲಾಕ್, ಬೂತ್ ಮಟ್ಟಗಳಲ್ಲಿ ಗಟ್ಟಿಯಾಗಿ ನಿಲ್ಲಬೇಕು ಎಂದು ಕರೆ ನೀಡಿದರು.

 

ಮಾಜಿ ಸಚಿವ ಹೆಚ್.ಆಂಜನೇಯ ಮಾತನಾಡಿ ಸಂಘಟನಾ ಚತುರ ಅನೇಕ ರಾಜ್ಯಗಳ ಉಸ್ತುವಾರಿಯಾಗಿದ್ದ ಬಿ.ಕೆ.ಹರಿಪ್ರಸಾದ್‍ರವರನ್ನು ಹೈಕಮಾಂಡ್ ಕೆಪಿಸಿಸಿ. ಅಧ್ಯಕ್ಷರನ್ನಾಗಿ ನೇಮಿಸಿರುವುದರಿಂದ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿದೆ. ಜೂ.21 ರಂದು ಅವರ ಪದಗ್ರಹಣ ಸಮಾರಂಭದಲ್ಲಿ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಹಾಗೂ ಮುಖಂಡರುಗಳು ಪಾಲ್ಗೊಳ್ಳಬೇಕು. ಪಕ್ಷಕ್ಕೆ ದುಡಿದ ಎಲ್ಲರಿಗೂ ಸ್ಥಾನಮಾನಗಳು ಸಿಗುತ್ತದೆ. ಮುಂಬರುವ ಎಲ್ಲಾ ಚುನಾವಣೆಗಳಲ್ಲಿಯೂ ಪಕ್ಷವನ್ನು ಗೆಲ್ಲಿಸಬೇಕು. ಪಂಚ ಗ್ಯಾರೆಂಟಿಯಿಂದ ರಾಜ್ಯ ಹಸಿವು ಬಡತನ ಮುಕ್ತವಾಗಿದೆ. ಎಸ್‍ಐಆರ್. ನಿಂದ ಒಬ್ಬ ಮತದಾರನು ಪಟ್ಟಿಯಿಂದ ಹೊರಗುಳಿಯಬಾರದು. ನೈಜ ಮತದಾರರ ಹಕ್ಕು ಕಾಪಾಡಬೇಕಿದೆ ಎಂದರು.

 

ಕರ್ನಾಟಕ ರಾಜ್ಯ ಆದಿಜಾಂಬವ ಅಭಿವೃದ್ದಿ ನಿಮಗದ ಅಧ್ಯಕ್ಷ ಜಿ.ಎಸ್.ಮಂಜುನಾಥ್ ಮಾತನಾಡುತ್ತ ಎಸ್‍ಐಆರ್. ಬಗ್ಗೆ ಮೊದಲು ಜಿಲ್ಲೆಯ ಎಲ್ಲಾ ಶಾಸಕರು ತಿಳಿದುಕೊಂಡು ಕಾರ್ಯಕರ್ತರಲ್ಲಿ ಜಾಗೃತಿ ಮೂಡಿಸಬೇಕು. ಬಿಜೆಪಿ. ಆರ್.ಎಸ್.ಎಸ್.ನವರು ಕಾಂಗ್ರೆಸ್ ಶಾಸಕರುಗಳನ್ನು ಗುರಿಯಾಗಿಸಿಕೊಂಡು ಮತದಾರರ ಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆ ಮೂಲಕ ಕಾಂಗ್ರೆಸ್ ಮತಗಳನ್ನು ಪಟ್ಟಿಯಿಂದ ಡಿಲಿಟ್ ಮಾಡಲು ಹೊರಟಿದ್ದಾರೆ. ಈಗಾಗಲೆ ಪಶ್ಚಿಮ ಬಂಗಾಳ, ಬಿಹಾರದಲ್ಲಿ ಲಕ್ಷಾಂತರ ಮತಗಳು ಪಟ್ಟಿಯಿಂದ ಹೊರತೆಗೆಯಲಾಗಿದೆ. ಎಸ್‍ಐಆರ್.ನ್ನು ಗಂಭೀರವಾಗಿ ತೆಗೆದುಕೊಳ್ಳುವಂತೆ ಸಲಹೆ ನೀಡಿದರು.

 

ಜಿಲ್ಲೆಯ ಎಲ್ಲಾ ಶಾಸಕರುಗಳು ಜವಾಬ್ದಾರಿ ವಹಿಸಿಕೊಂಡರೆ ಬಿ.ಕೆ.ಹರಿಪ್ರಸಾದ್‍ರವರ ಪದಗ್ರಹಣಕ್ಕೆ ಜಿಲ್ಲೆಯಿಂದ ಲಕ್ಷಾಂತರ ಕಾರ್ಯಕರ್ತರು ಬೇಕಾದರೂ ಭಾಗವಹಿಸುತ್ತಾರೆ. ಕೇಂದ್ರ ಚುನಾವಣಾ ಆಯೋಗದ ಮೂಲಕ ಎಸ್‍ಐಆರ್.ಗೆ ಬಿಜೆಪಿ. ಆರ್.ಎಸ್.ಎಸ್. ಕೈಹಾಕಿದೆ. ಇದರ ವಿರುದ್ದ ಪ್ರತಿಯೊಬ್ಬರು ಜಾಗೃತರಾಗಿರಬೇಕೆಂದು ಮನವಿ ಮಾಡಿದರು.

 

ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಮಾತನಾಡಿ ಜೂ.21 ರಂದು ಕೆ.ಪಿ.ಸಿ.ಸಿ. ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿರುವ ಬಿ.ಕೆ.ಹರಿಪ್ರಸಾದ್‍ರವರಿಗೆ ವಿರೋಧಿಗಳ ಟೀಕೆಗೆ ಉತ್ತರ ಕೊಡುವ ಧೈರ್ಯವಿದೆ. ಎಲ್ಲಾ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದರೆ ಒಂದೊಂದು ಕ್ಷೇತ್ರದಿಂದ ಎರಡು ಸಾವಿರ ಮಂದಿಯಾದರೂ ಪಾಲ್ಗೊಳ್ಳಬಹುದು. ಅದಕ್ಕೆ ಬೇಕಾದ ವಾಹನಗಳ ಸೌಲಭ್ಯ ಒದಗಿಸುವುದಾಗಿ ಭರವಸೆ ನೀಡಿದರು.

 

ಕೆಪಿಸಿಸಿ. ಉಪಾಧ್ಯಕ್ಷ ಆರ್.ಮಂಜುನಾಥ್ ಮಾತನಾಡುತ್ತ ಪಕ್ಷದ ಮುಖಂಡರು, ಕಾರ್ಯಕರ್ತರು ಬಿ.ಕೆ.ಹರಿಪ್ರಸಾದ್‍ರವರ ಪದಗ್ರಹಣ ಸಮಾರಂಭಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ತೆರಳಬೇಕು. ಕಾರ್ಯಕರ್ತರಲ್ಲಿ ಹುರುಪು ಮೂಡಿದೆ. ಐವತ್ತು ವರ್ಷಗಳಿಂದಲೂ ಪಕ್ಷ ಕಟ್ಟುವ ಕೆಲಸದಲ್ಲಿ ತೊಡಗಿರುವ ಡಿ.ಕೆ.ಶಿವಕುಮಾರ್‍ರವರ ಹೋರಾಟವನ್ನು ಗುರುತಿಸಿ ಪಕ್ಷದ ವರಿಷ್ಟರು ಮುಖ್ಯಮಂತ್ರಿಯನ್ನಾಗಿಸಿದ್ದಾರೆ. ಯಾವುದೇ ಕಾರಣಕ್ಕೂ ಕಾರ್ಯಕರ್ತರನ್ನು ಕೈಬಿಡಲ್ಲ ಎಂದರು.

 

ಕುಶಲ ಕರ್ಮಿ ವಿಭಾಗದ ಅಧ್ಯಕ್ಷ ಆರ್.ಪ್ರಸನ್ನಕುಮಾರ್, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಇವರುಗಳು ಮಾತನಾಡಿದರು.
ಕೆಪಿಸಿಸಿ. ಪ್ರಧಾನ ಕಾರ್ಯದರ್ಶಿ ಹನುಮಲಿ ಷಣ್ಮುಖಪ್ಪ, ಮಾಜಿ ಎಂಎಲ್‍ಸಿ. ಜಯಮ್ಮ ಬಾಲರಾಜ್, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕೆ.ಎಂ.ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ, ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸೈಯದ್ ಖುದ್ದೂಸ್, ಪರಿಶಿಷ್ಟ ವರ್ಗ ವಿಭಾಗದ ಅಧ್ಯಕ್ಷ ಮಂಜುನಾಥ್, ಕಾನೂನು ವಿಭಾಗದ ಅಧ್ಯಕ್ಷ, ಡಿ.ಸುದರ್ಶನ್, ಜಿಲ್ಲಾ ಉಸ್ತುವಾರಿ ಸಚಿವ ದಿ. ಡಿ.ಸುಧಾಕರ್‍ರವರ ಪುತ್ರ ಸುಹಾಸ್ ಇನ್ನು ಅನೇಕರು ವೇದಿಕೆಯಲ್ಲಿದ್ದರು. ವಿವಿಧ ಮುಂಚೂಣಿ ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಪೂರ್ವಭಾವಿ ಸಭೆಯಲ್ಲಿ ಹಾಜರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now