ಶಿವಮೊಗ್ಗ: ಬೆಳಗಾವಿಯಲ್ಲಿ ರಾಯಣ್ಣನ ಪ್ರತಿಮೆ ಧ್ವಂಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಡಿಗೇಡಿಗಳಿಗೆ ಶಿಕ್ಷೆಯಾಗಲೇ ಬೇಕೆಂದು ಎಲ್ಲರು ಒತ್ತಾಯಿಸುತ್ತಿದ್ದಾರೆ. ಇದೀಗ ಈ ಬಗ್ಗೆ ಮಾತನಾಡಿರುವ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ, ಅವರು ಯಾರೇ ಆದರೂ ಶಿಕ್ಷೆ ಆಗೇ ಆಗುತ್ತೆ ಎಂದಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಗಲಾಟೆಯಲ್ಲಿ ಯಾರೇ ಭಾಗಿಯಾಗಿದ್ದರು ಅವರಿಗೆ ಶಿಕ್ಷೆಯಾಗುತ್ತೆ. ಈ ಬಗ್ಗೆ ನಾಳೆ ವಿಧಾನ ಮಂಡಲದಲ್ಲಿ ಚರ್ಚೆಯಾಗುತ್ತೆ. ಈಗಾಗಲೇ ಈ ಘಟನೆಗೆ ಸಂಬಂಧಿಸಿದಂತೆ 23 ಜನರ ಬಂಧನವಾಗಿದೆ. ಅದರಲ್ಲಿ ತಪ್ಪಿತಸ್ಥರು ಯಾರೆಂದು ತಿಳಿದು ಅವರಿಗೆ ಶಿಕ್ಷೆ ನೀಡಲಾಗುತ್ತೆ ಎಂದಿದ್ದಾರೆ.
ಬೆಳಗಾವಿಯಲ್ಲಿ ಕಿಡಿಗೇಡಿಗಳು ರಾತ್ರೋ ರಾತ್ರಿ ರಾಯಣ್ಣನ ಪ್ರತಿಮೆ ಧ್ವಂಸಗೊಳಿಸಿ ವಿಕೃತಿ ಮೆರೆದಿದ್ದರು. ಈ ಘಟನೆಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ಕನ್ನಡ ಪರ ಸಂಘಟನೆಗಳು ಕೂಡ ಪ್ರತಿಭಟನೆ ನಡೆಸಿ, ಶಿಕ್ಷೆಗೆ ಒತ್ತಾಯಿಸಿದ್ದಾರೆ. ಈ ಹಿನ್ನೆಲೆ ಬೆಂಗಳೂರಿನಲ್ಲೂ ಭದ್ರತೆ ಒದಗಿಸಲಾಗಿದೆ. ಶಿವಾಜಿ ಪ್ರತಿಮೆಗಳಿಗೆ ಭದ್ರತೆ ಕಲ್ಪಿಸಲಾಗಿದೆ.