ಬೆಂಗಳೂರು: ಶಾಸಕ ಎಸ್ ಆರ್ ವಿಶ್ವನಾಥ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ರಾಜಾನುಕುಂಟೆ ಪೊಲೀಸ್ ಠಾಣೆಗೆ ಹೋಗಿ ವಿಚಾರಣೆ ಎದುರಿಸಿ ಬಂದಿದ್ದಾರೆ. ಸ್ಚೆಕ್ ಗೆ ಸಂಬಂಧಿಸಿದ ತಮ್ಮಲ್ಲಿದ್ದ ಆಧಾರಗಳನ್ನೆಲ್ಲಾ ನೀಡಿದ್ದಾರೆ.
ವಿಚಾರಣೆ ಬಳಿಕ ಮಾತನಾಡಿದ ಶಾಸಕ ವಿಶ್ವನಾಥ್, ಈ ಪ್ರಕರಣವನ್ನು ಇಲ್ಲಿಗೆ ಬಿಡುವ ಮಾತೇ ಇಲ್ಲ. ಪೊಲೀಸರು ದಾಖಲೆಗಳನ್ನ ತೆಗೆದುಕೊಂಡಿದ್ದಾರೆ. ಸರಿಯಾದ ರೀತಿಯಲ್ಲಿ ತನಿಖೆ ನಡೆಯಬೇಕು. ಪೆನ್ ಡ್ರೈವ್ ಕೂಡ ಕೊಟ್ಟಿದ್ದೇನೆ. ಮೊದಲಿಗೆ ಪೆನ್ ಡ್ರೈವ್ ನೋಡಿದಾಗ ಅದರಲ್ಲಿ ಏನೇನೊ ವ್ಯವಹಾರವಿತ್ತು. ಹೀಗಾಗಿ ಸುಪಾರಿ ವಿಚಾರ ಮಾತ್ರ ಎಡಿಟ್ ಮಾಡಿ ವಿಡಿಯೋ ನೀಡಿದ್ದೆ. ಆದ್ರೆ ಈಗ ರಾ ಫುಟೇಜನ್ನೆ ಪೊಲೀಸರಿಗೆ ನೀಡಿದ್ದೇನೆ ಎಂದಿದ್ದಾರೆ.
ಆಡಿಯೋ ಕೇಳಿದ ಮೇಲೆಯೇ ಗೊತ್ತಾಗಿದ್ದು, ಏನೂ ಗೊತ್ತಿಲ್ಲದೇ ದೂರು ಕೊಡಲು ಸಾಧ್ಯವಿಲ್ಲ. ಮೊನ್ನೆ ರಾತ್ರಿ ವಿಡಿಯೋ ಸಿಕ್ಕಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುವ ಕುರಿತಂತೆ ಚರ್ಚೆ ಮಾಡೋಣ ಎಂದು ಸಿಎಂ ಕೂಡಾ ಹೇಳಿದ್ದಾರೆ ಎಂದು ಶಾಸಕ ವಿಶ್ವನಾಥ್ ಹೇಳಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…