ಅವರಿಗೆ ಶಕ್ತಿ ಇರಬಹುದು, ನಮಗೆ ಇಲ್ಲ : ಡಿಕೆ ಶಿವಕುಮಾರ್..!

suddionenews
1 Min Read

ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ ನೀಡಿದ ಹೇಳಿಕೆ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ನಾನು ಕಲ್ಲು ಬಂಡೆ, ಎಲ್ಲವನ್ನು ಹೊತ್ತಿದ್ದೇನೆ. ಬಿಜೆಪಿ ಮತ್ತು ಜೆಡಿಎಸ್ ನಿಂದ ಸಾಕಷ್ಟು ಕುತಂತ್ರ ನಡೆಯುತ್ತಿದೆ. ನನಗೆ ಇದೆಲ್ಲವು ಗೊತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕುಮಾರಸ್ವಾಮಿ ಅವರು ಬಹಳ ಹಿರಿಯರು, ಬುದ್ಧಿವಂತರು ಹಾಗೂ ಸಾಹಿತಿಗಳಿದ್ದಾರೆ. ನಮ್ಮ ಪಕ್ಷಕ್ಕೆ ತನ್ನದೇ ಆದ ಇತಿಹಾಸವಿದೆ. ಕುಮಾರಸ್ವಾಮಿ ಅವರ ಟ್ವೀಟ್ ಟೀಕೆಗೆ ನಾವು ಉತ್ತರ ನೀಡಬೇಕಾಗುತ್ತದೆ. ಅವರಿಗೆ ರಾಜಕಾರಣದಲ್ಲಿ ಬಹಳ ಅನಭವವಿದೆ. ಅವರಿಗೆ ಹೋರಾಟದ ಕುಟುಂಬದ ಹಿನ್ನೆಲೆಯಿದೆ.

ಅವರು ಚಲನಚಿತ್ರ ನಿರ್ದೇಶಕರು ಹಾಗೂ ನಿರ್ಮಾಪಕರೂ ಆಗಿದ್ದಾರೆ. ಅವರಿಗೆ ಯಾವ ಸಮಯದಲ್ಲಿ ಏನು ಹೇಳಬೇಕು ಅನ್ನೋದು ಗೊತ್ತಿದೆ. ರಾಜಕೀಯದಲ್ಲಿ ಗೆಲವು, ಸೋಲು ಸಹಜ. ಅದರಿಂದ ಅನುಭವ ಬರುತ್ತದೆ. ಅವರು ಟೀಕೆ ಮಾಡಲಿ. ಆದರೆ ಆಶ್ಚರ್ಯ ಎಂದರೆ, ಚನ್ನಪಟ್ಟಣದಲ್ಲಿ ಫೈರಿಂಗ್ ಆಯ್ತು ಎಂದು ಎಸ್.ಎಂ. ಕೃಷ್ಣ ಅವರ ಸರ್ಕಾರದ ವಿರುದ್ಧ ಪಾದಯಾತ್ರೆ ಮಾಡಿದರು. ಗಂಗಾಧರಮೂರ್ತಿ ಕೊಲೆ ಪ್ರಕರಣ ಸಂಬಂಧ ಪಾದಯಾತ್ರೆ ಮಾಡಿದರು. ತಲೆ ಮೇಲೆ ಸೀಮೆ ಎಣ್ಣೆ ಡಬ್ಬ ಇಟ್ಟುಕೊಂಡು ಪ್ರತಿಭಟನೆ ಮಾಡಿದ್ದಾರೆ. ಅದೇ ರೀತಿ ಕಾಂಗ್ರೆಸ್ ಪಕ್ಷ ಕೂಡ ಪಾದಯಾತ್ರೆ ಮಾಡುತ್ತಿದೆ ಎಂದರು.

Share This Article
Leave a Comment

Leave a Reply

Your email address will not be published. Required fields are marked *