ಬ್ಯಾನರ್ ಗಲಾಟೆ ನೆಪದಲ್ಲಿ ನನ್ನನ್ನು ಕೊಲೆಗೆ ಸ್ಕೆಚ್ : ಜನಾರ್ಧನ ರೆಡ್ಡಿ

1 Min Read

 

ಬಳ್ಳಾರಿ: ನಿನ್ನೆ ರಾತ್ರಿ ಬ್ಯಾನರ್ ವಿಚಾರಕ್ಕೆ ನಗರದ ಅವಂಬಾವಿ ಏರಿಯಾದಲ್ಲಿರುವ ಶಾಸಕ ಜನಾರ್ಧನ ರೆಡ್ಡಿ ಮನೆ ಮುಂದೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ನಾಳೆ (ಜ.3) ವಾಲ್ಮೀಕಿ ಪುತ್ಥಳಿ ಅನಾವರಣ ಹಿನ್ನಲೆ ಬ್ಯಾನರ್ ಅಳವಡಿಕೆ ಮಾಡಲಾಗುತ್ತಿತ್ತು. ಒಂದು ಗುಂಪು ಜನಾರ್ದನ ರೆಡ್ಡಿ ಮನೆ ಮುಂದೆ ಬ್ಯಾನರ್ ಕಟ್ಟುತ್ತಿದ್ದರು. ಅಲ್ಲಿಗೆ ಧಾವಿಸಿದ ಮತ್ತೊಂದು ಗುಂಪು ಏಕಾಏಕಿ ಗಲಾಟೆ ಮಾಡಿದೆ. ಈ ವೇಳೆ ಗಾಳಿಯಲ್ಲಿ ಗುಂಡಿನ ದಾಳಿಯನ್ನು ನಡೆಸಲಾಗಿದೆ. ಈ ಬಗ್ಗೆ ಜನಾರ್ದನ ರೆಡ್ಡಿ ಅವರು ನನ್ನ ಹತ್ಯೆಗೆ ಸ್ಕೆಚ್ ಹಾಕಲಾಗಿದೆ ಎಂದು ಆರೋಪಿಸಿದ್ದಾರೆ.

ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಜನಾರ್ದನ ರೆಡ್ಡಿ ಅವರು, ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹಾಗೂ ಆಪ್ತ ಸತೀಶ್ ರೆಡ್ಡಿ ಹಾಗೂ ಭರತ್ ರೆಡ್ಡಿ ತಂದೆ ನಾರಾ ಸೂರ್ಯನಾರಾಯಣ ರೆಡ್ಡಿಯಿಂದ ನನ್ನ ಹತ್ಯೆಗೆ ಸಂಚು ನಡೆದಿದೆ ಎಂದು ಶಾಸಕ ಜನಾರ್ಧನ ರೆಡ್ಡಿ ಆರೋಪಿಸಿದ್ದಾರೆ.

ಬ್ಯಾನರ್ ಗಲಾಟೆ ನೆಪದಲ್ಲಿ ನಮ್ಮ ನಿವಾಸದ ಮುಂದೆ ಗನ್ ಮ್ಯಾನ್‌ಗಳಿಂದ ಗುಂಡಿನ ದಾಳಿಯಾಗಿದೆ. ನಾನು ಗಂಗಾವತಿಯಿಂದ ಕಾರಿನಲ್ಲಿ ಬಂದು ಇಳಿಯುತ್ತಿದ್ದಂತೆ ಗುಂಡಿನ‌ ದಾಳಿ ಆರಂಭಿಸಿದ್ದಾರೆ. ಗನ್ ಮ್ಯಾನ್‌ಗಳು ನಾಲ್ಕಾರು ರೌಂಡ್ ಪೈರ್ ಮಾಡಿದ್ದಾರೆ. ಪುತ್ಥಳಿ ಪ್ರತಿಷ್ಟಾಪನೆ ಹೆಸರಲ್ಲಿಊರಿಗೆ ಬೆಂಕಿ ಹಚ್ಚಲು ಹೊರಟಿದ್ದಾರೆ. ಕೊಲೆಗೆಡುಕರನ್ನ ಹಿಂದಿಟ್ಟುಕೊಂಡು ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಕಲ್ಲು ತೂರಾಟದ ಬೆನ್ನಲ್ಲೇ ಶ್ರೀರಾಮು ಕೂಡ ರೆಡ್ಡಿ ಅವರ ಮನೆಗೆ ಆಗಮಿಸಿದ್ದಾರೆ. ಹಾಗೇ ರೆಡ್ಡಿ ಬೆಂಬಲಿಗರು ಆಗಮಿಸಿದ್ದಾರೆ.

Share This Article
Enable Notifications OK No thanks