Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಫೆ.05 ರಂದು ಕುಂದೂರು ಗೊಲ್ಲರಹಟ್ಟಿಯಲ್ಲಿ ತಿಮ್ಮಪ್ಪ ಸ್ವಾಮೀಜಿ ಪೀಠಾರೋಹಣ ಮತ್ತು ಅಂಬಾದೇವಿ‌ಬ್ರಹ್ಮರಥೋತ್ಸವ

Facebook
Twitter
Telegram
WhatsApp

ಚಿತ್ರದುರ್ಗ :ಜಿಲ್ಲೆಯ ಹೊಸದುರ್ಗ ತಾಲ್ಲೂಕು ಬಾಗೂರು ಸಮೀಪದ ಕುಂದೂರು ಗೊಲ್ಲರಹಟ್ಟಿಯ ಗೋವರ್ಧನಗಿರಿ ಜಗದಾಂಬ ಮಹಾಸಂಸ್ಥಾನ ಮಠದಲ್ಲಿ ಫೆಬ್ರವರಿ 05 ರಂದು 10ನೇ ವರ್ಷದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ ಜರುಗಲಿದೆ.

ಮಹಾಸಂಸ್ಥಾನ ಮಠದ ತಿಮ್ಮಪ್ಪ ಸ್ವಾಮೀಜಿ ನೇತೃತ್ವದಲ್ಲಿ ಜಾತ್ರಾ ಮಹೋತ್ಸವ ಕಾರ್ಯಗಳು ನಡೆಯಲಿದೆ. ಭಾನುವಾರ ಭಾರತ ಹುಣ್ಣಿಮೆ ದಿನದಂದು ಬೆಳಿಗ್ಗೆ 10.30ರಿಂದ ತಿಮ್ಮಪ್ಪ ಸ್ವಾಮೀಜಿಯವರ ಗೋವರ್ಧಗಿರಿ ಸಿಂಹಾಸನ ಪೀಠಾರೋಹಣ ನಡೆಯಲಿದ್ದು, ನಂತರ ಸಂಜೆ 5ಕ್ಕೆ ಅಂಭಾದೇವಿ ಬ್ರಹ್ಮರಥೋತ್ಸವ ಜರುಗಲಿದೆ.

ರಥೋತ್ಸವದ ನಂತರ  ಗೋವರ್ಧನಗಿರಿ ಧರ್ಮದ ಬಾವುಟ ಹರಾಜು ಹಾಕಲಾಗುವುದು.

ಫೆ.6 ರಂದು ಸಂಜೆ 4.30ಕ್ಕೆ ಕುಂಭೋತ್ಸವ ಆಚರಣೆಯೊಂದಿಗೆ ಜಾತ್ರೆ ಕೊನೆಗೊಳ್ಳಲಿದೆ. ಆಗಮಿಸುವ ಭಕ್ತರಿಗೆ ಅನ್ನಸಂತರ್ಪಣೆ ಆಯೋಜಿಸಲಾಗಿದೆ ಎಂದು
ಅಂಭಾದೇವಿಯ ದೇವಸ್ಥಾನ ಕಟ್ಟಡ ಕಾರ್ಯ ಆರಂಭವಾಗಿದ್ದು, ಸರ್ವ ಭಕ್ತರು ಕಟ್ಟಡ ನಿರ್ಮಾಣಕ್ಕೆ ತನು ಮನ ಧನ ಸಹಾಯದೊಂದಿಗೆ ಜಾತ್ರೆಯಲ್ಲಿ ಪಾಲ್ಗೊಳ್ಳಬೇಕು ಎಂದು ಸಂಸ್ಥಾನ ಮಠದ ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಜಿಲ್ಲೆಯಲ್ಲಿ 664.91 ಹೆಕ್ಟೇರ್ ಕೃಷಿ ಬೆಳೆ ನಾಶ

ಚಿತ್ರದುರ್ಗ.24: ಜಿಲ್ಲೆಯಲ್ಲಿ ಅಕ್ಟೋಬರ್ ಮಾಹೆಯಲ್ಲಿ ಬಿದ್ದಂತಹ ಹೆಚ್ಚಿನ ಮಳೆಯಿಂದಾಗಿ ಬೆಳೆಹಾನಿಯಾಗಿದ್ದು, ಜಿಲ್ಲೆಯಾದ್ಯಂತ 664.91 ಹೆಕ್ಟೇರ್‍ಗಳಷ್ಟು ಪ್ರದೇಶದಲ್ಲಿ ಬೆಳೆಹಾನಿಯಾಗಿರುವುದಾಗಿ ಸರ್ಕಾರಕ್ಕೆ ವರದಿ ಮಾಡಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ 2024-25ನೇ ಸಾಲಿನ

ಮಲೇರಿಯಾ, ಡೆಂಗಿ ನಿಯಂತ್ರಣ ಎಲ್ಲರ ಜವಾಬ್ದಾರಿ : ಡಿಹೆಚ್ಒ ಡಾ. ರೇಣು ಪ್ರಸಾದ್

  ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 24 : ಮಲೇರಿಯಾ, ಡೆಂಗಿ ಜ್ವರ ನಿಯಂತ್ರಣಕ್ಕೆ ಸಮುದಾಯದ ಸಹಕಾರ ಪ್ರಮುಖವಾದ್ದು ಡೆಂಗಿ ನಿಯಂತ್ರಣ ನಮ್ಮ ನಿಮ್ಮೆಲ್ಲರ ಜವಾಬ್ದಾರಿ. ಕ್ಷೇತ್ರ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿ 2025 ಕ್ಕೆ ಮಲೇರಿಯ

ಜಾನುವಾರುಗಳಿಗೆ ತಪ್ಪದೇ ಲಸಿಕೆ ಹಾಕಿಸಿ : ಜಿ.ಪಂ.ಸಿಇಓ ಎಸ್.ಜೆ.ಸೋಮಶೇಖರ್ ಕರೆ

ಚಿತ್ರದುರ್ಗ.‌ಅ.24: ಸಾಂಕ್ರಾಮಿಕ ಕಾಲುಬಾಯಿ ರೋಗ ಹರಡದಂತೆ ತಡೆಯಲು, ತಪ್ಪದೇ ರೈತರು ತಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸಬೇಕು ಎಂದು ಜಿ.ಪಂ.ಸಿಇಓ ಎಸ್.ಜೆ ಸೋಮಶೇಖರ್ ಕರೆ ನೀಡಿದರು. ಚಿತ್ರದುರ್ಗ ತಾಲ್ಲೂಕು ವಿಜಾಪುರ ಗ್ರಾಮದಲ್ಲಿ ಗುರುವಾರ, 6ನೇ ಸುತ್ತಿನ

error: Content is protected !!