Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ತೋಟಗಾರಿಕೆ ಜಾಗದಲ್ಲಿ ಜಿಲ್ಲಾಧಿಕಾರಿ ಕಚೇರಿ ಕಟ್ಟಿದರೆ ಉಗ್ರ ಹೋರಾಟ: ತಿಪ್ಪೇಸ್ವಾಮಿ ಎಚ್ಚರಿಕೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್.05 : ತೋಟಗಾರಿಕೆ ಇಲಾಖೆ ಜಾಗವನ್ನು ಜಿಲ್ಲಾಧಿಕಾರಿಗಳ ನೂತನ ಕಚೇರಿ ಕಟ್ಟಡ ನಿರ್ಮಾಣಕ್ಕೆ ನೀಡಲು ಸರ್ಕಾರ ಆದೇಶಿಸಿರುವುದನ್ನು ಹಿಂದಕ್ಕೆ ಪಡೆಯುವಂತೆ ಜಿಲ್ಲಾ ಹಾಪ್‍ಕಾಮ್ಸ್‍ನ ರಾಜ್ಯ ಪ್ರತಿನಿಧಿ ಎಸ್.ಎಂ.ಎಲ್.ತಿಪ್ಪೇಸ್ವಾಮಿ ಸರ್ಕಾರವನ್ನು ಒತ್ತಾಯಿಸಿದರು.

ಪತ್ರಕರ್ತರ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ತೋಟಗಾರಿಕೆ ಇಲಾಖೆಗೆ ಸೇರಿದ ಆರು ಎಕರೆ ಹತ್ತು ಗುಂಟೆ ಹಾಗೂ ಹಾಪ್‍ಕಾಮ್ಸ್‍ನ 20 ಗುಂಟೆ ಜಾಗದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ನಿರ್ಮಾಣ ಮಾಡುವುದರಿಂದ ರೈತರು, ಪರಿಸರ ಪ್ರೇಮಿಗಳು ತೊಂದರೆ ಅನುಭವಿಸಬೇಕಾಗುತ್ತದೆ. 2156 ಗಿಡ-ಮರಗಳು ಈ ಜಾಗದಲ್ಲಿದ್ದು, ಕಟ್ಟಡ ನಿರ್ಮಾಣ ಸಂದರ್ಭದಲ್ಲಿ ಎಲ್ಲವನ್ನು ನಾಶಪಡಿಸಬೇಕಾಗುತ್ತದೆ. ಯಾವುದೇ ಕಾರಣಕ್ಕೂ ಈ ಜಾಗದಲ್ಲಿ ಜಿಲ್ಲಾಧಿಕಾರಿ ಕಚೇರಿ ಕಟ್ಟುವುದು ಬೇಡ. ಕುಂಚಿಗನಹಾಳ್ ಬಳಿ ಜಿಲ್ಲಾಧಿಕಾರಿ ಕಚೇರಿಗೆ ಕಟ್ಟಡ ಕಟ್ಟಿ ಅರ್ಧಕ್ಕೆ ನಿಲ್ಲಿಸಲಾಗಿದೆ. ಶಿಲ್ಪಭವನ, ಪೊಲೀಸ್ ಕವಾಯತು ಮೈದಾನದ ಜಾಗವನ್ನು ನೂತನ ಡಿಸಿ.ಕಚೇರಿ ಕಟ್ಟಡಕ್ಕೆ ಪಡೆದುಕೊಳ್ಳಲಿ. ಅದನ್ನು ಬಿಟ್ಟು ತೋಟಗಾರಿಕೆ ಇಲಾಖೆ ಜಾಗದ ಮೇಲೆ ಸರ್ಕಾರಕ್ಕೇಕೆ ಕಣ್ಣು ಎಂದು ಪ್ರಶ್ನಿಸಿದರು.?
ರೈತರಿಗೆ ಬೀಜ, ಗೊಬ್ಬರ, ಕೃಷಿ ಪರಿಕರಗಳ ವಿತರಣೆಗಾಗಿಯೇ ಮೀಸಲಿದ್ದ, ಹಾಪ್‍ಕಾಮ್ಸ್ ಕಟ್ಟಡವನ್ನು ಕೆಡವುವುದು ಬೇಡ. ಒಂದು ವೇಳೆ ಇದೆ ಜಾಗದಲ್ಲಿ ಜಿಲ್ಲಾಧಿಕಾರಿ ಕಚೇರಿ ಆರಂಭಿಸಿದರೆ ಉಗ್ರವಾದ ಹೋರಾಟ ನಡೆಸಲಾಗುವುದೆಂದು ಎಸ್.ಎಲ್.ಎಂ.ತಿಪ್ಪೇಸ್ವಾಮಿ ಎಚ್ಚರಿಸಿದರು.

 

ಟಾರ್ಗೆಟ್ ಟೆನ್ ಥೌಸೆಂಡ್‍ನ ಸಿದ್ದರಾಜು ಮಾತನಾಡಿ ಬಯಲುಸೀಮೆ ಚಿತ್ರದುರ್ಗದಲ್ಲಿ ಗಿಡಗಳನ್ನು ನೆಟ್ಟು ದೊಡ್ಡ ಮರವನ್ನಾಗಿ ಬೆಳೆಸುವುದು ತುಂಬಾ ಕಷ್ಟ. 2015 ರಿಂದ ಇಲ್ಲಿಯವರೆಗೂ ನಲವತ್ತು ಸಾವಿರ ಗಿಡಗಳನ್ನು ನೆಟ್ಟಿದ್ದೇವೆ. ಗಿಡ-ಮರಗಳನ್ನು ಕಡಿದರೆ ಉಸಿರಾಟಕ್ಕೆ ಶುದ್ದ ಗಾಳಿ ಇಲ್ಲದಂತಾಗಿ ಸಕಲ ಜೀವರಾಶಿಗಳು ತೊಂದರೆ ಅನುಭವಿಸಬೇಕಾಗುತ್ತದೆ. ಕುಂಚಿಗನಹಾಳ್ ಸಮೀಪವೆ ಜಿಲ್ಲಾಧಿಕಾರಿ ನೂತನ ಕಚೇರಿ ಆರಂಭಿಸಿದರೆ ಚಿತ್ರದುರ್ಗ ವಿಸ್ತರಣೆಯಾಗಿ ಅಭಿವೃದ್ದಿಯಾಗುತ್ತದೆ. ತೋಟಗಾರಿಕೆ ಇಲಾಖೆ ಜಾಗದಲ್ಲಿ ನೂತನ ಕಚೇರಿ ನಿರ್ಮಾಣವಾಗುವುದು ಬೇಡ ಎಂದರು.

ಹಾಪ್‍ಕಾಮ್ಸ್‍ನ ಜಿಲ್ಲಾಧ್ಯಕ್ಷ ಶಂಕರಮೂರ್ತಿ, ಉಪಾಧ್ಯಕ್ಷ ಅರುಣ್, ನಿರ್ದೇಶಕರುಗಳಾದ ಕೆಂಚವೀರಪ್ಪ, ಚಂದ್ರಶೇಖರ್, ರೈತ ಮುಖಂಡ ಸೂರಪ್ಪ, ಸತ್ಯನಾರಾಯಣರೆಡ್ಡಿ ಮುರಳಿ, ನಾಗರಾಜ್‍ಬೇದ್ರೆ ಇವರುಗಳು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now