ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಜಾತ್ರೆಗಳು ನಡೆಯುತ್ತಿವೆ. ಈ ಜಾತ್ರೆಯಲ್ಲಿ ಮುಸ್ಲಿಂ ಸಮುದಾಯದವರು ಅಂಗಡಿಗಳನ್ನು ಹಾಕದಂತೆ ನಿಷೇಧ ಹೇರಲಾಗುತ್ತಿದೆ. ಇದಕ್ಕೆ ಮುಸ್ಲಿಂ ಸಮುದಾಯದವರು ಅಸಮಾಧಾನ ಹೊರ ಹಾಕಿದ್ದಾರೆ.
ವಿಧಾನಸಭೆಯಲ್ಲೂ ಈ ಬಗ್ಗೆ ಚರ್ಚೆಗೆ ಬಂದಿದೆ. ಹಿಂದೂಯೇತರರಿಗೆ ನಿರ್ಬಂಧ ಹೇರಿರುವ ಬಗ್ಗೆ ಚರ್ಚೆ ನಡೆಸಲಾಗಿದೆ. ಈ ವೇಳೆ ವಿಧಾನಸಭೆಯಲ್ಲಿ ಶಾಸಕ ರಿಜ್ವಾನ್ ಅರ್ಷದ್ ಮಾತನಾಡಿದ್ದು, ಇದು ಮುಂದಿನ ಪೀಳಿಗೆಗೆ ಒಳ್ಳೆಯದ್ದಲ್ಲ ಎಂದಿದ್ದಾರೆ.
ಒಂದು ವರ್ಗದ ವ್ಯಾಪಾರಿಗಳಿಗೆ ನಿರ್ಬಂಧ ಹಾಕಿದ್ದಾರೆ. ಇದು ಸಮಾಜಕ್ಕೆ ಆಘಾತಕಾರಿಯಾಗಿದೆ. ಇತಿಹಾಸ ಗೊತ್ತಿಲ್ಲದವರು ಹೀಗೆ ಭಿತ್ತಿಪತ್ರ ಹಂಚುತ್ತಿದ್ದಾರೆ. ಒಂದು ಸಮುದಾಯಕ್ಕೆ ಬಹಿಷ್ಕಾರ ಹಾಕುವುದು ಸರಿಯಲ್ಲ. ಇದು ಮುಂದಿನ ಪೀಳೆಗೆಗೆ ಒಳ್ಳೆಯದಾಗುವುದಿಲ್ಲ. ನಮ್ಮ ಸಂವಿಧಾನಿಕ ಹಕ್ಕನ್ನು ನಮಗೆ ಕೊಡಿ ಎಂದು ವಿಧಾನಸಭೆಯಲ್ಲಿ ಶಾಸಕ ಅರ್ಷದ್ ಕೇಳಿದ್ದಾರೆ.