ಬೆಂಗಳೂರು: ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲೆ ಏನೇ ದೌರ್ಜನ್ಯ ಆದ್ರೂ ಕೂಡ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದಲ್ಲಿ ಕೇಸ್ ದಾಖಲಿಸಿದರೆ ಅವರಿಗೆ ನ್ಯಾಯ ಕೊಡಿಸುವ ಕೆಲಸವಾಗುತ್ತೆ. ಆದರೆ ಅಲ್ಲಿನೆ ಎಸ್ಸಿ/ಎಸ್ಟಿ ಸಮುದಾಯದವರಿಗೆ ಅನ್ಯಾಯವಾದರೆ ಕೇಳೋದು ಯಾರು. ಅಂಥದ್ದೊಂದು ಘಟನೆ ಡಿಸಿಆರ್ಸಿ ಅಧಿಕಾರಿಗಳಿಂದ ನಡೆದಿದೆ. ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದಲ್ಲಿಯೇ ಮೇಲ್ಜಾತಿ ಅಧಿಕಾರಿಗಳಿಂದ ದಲಿತ ಅಧಿಕಾರಿಗೆ ಕಿರುಕುಳ ಆರೋಪ ಕೇಳಿ ಬಂದಿದೆ.
ಪಶ್ಚಿಮ ವಲಯ DCRE ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀನಿವಾಸ್ ನೇರವಾಗಿ DCRE ಡಿಜಿ ಉಮೇಶ್ ಕುಮಾರ್ ಅವರಿಗೆ ದೂರು ಸಲ್ಲಿಕೆ ಮಾಡಿದ್ದಾರೆ. ಅಷ್ಟಲ್ಲದೆ ಈ ಬಗ್ಗೆ ಶ್ರೀನಿವಾಸ್ ವಿಡಿಯೋ ಕೂಡ ಮಾಡಿದ್ದು, ಮೇಲ್ವರ್ಗದ ಆರೋಪಿಗಳ ಪರವಾಗಿ ಕೆಲಸ ಮಾಡುವಂತೆ ಕಿರುಕುಳ ನೀಡಲಾಗ್ತಿದೆ. ಅಷ್ಟೇ ಅಲ್ಲದೆ ಈ ಬಗ್ಗೆ ಶ್ರೀನಿವಾಸ್ ವಿಡಿಯೋ ಕೂಡ ಮಾಡಿದ್ದಾರೆ.
ಮೇಲ್ವರ್ಗದ ಆರೋಪಿಗಳ ಪರವಾಗಿ ಕೆಲಸ ಮಾಡುವಂತೆ ಕಿರುಕುಳ ನೀಡಲಾಗ್ತಿದೆ. ಎಸ್ಪಿ ಕರಿಬಸನಗೌಡ ನಿರ್ದೇಶನದಂತೆ ಕೆಲ ಕೇಸ್ ಗಳಲ್ಲಿ ಮೇಲ್ಜಾತಿ ಆರೋಪಿಗಳ ಪರ ಅಂತಿಮ ವರದಿ ಸಲ್ಲಿಸಲು ಡಿವೈಎಸ್ಪಿ ಒತ್ತಡ ಹಾಕುತ್ತಿದ್ದರು. ಈ ವೇಳೆ ವಲಯ SP ಅವರಿಂದ ನಿರ್ದೇಶನ ಕೊಡಿಸುವಂತೆ ಹೇಳಿದ್ದ ಕಾರಣ ಅಂದಿನಿಂದ Dysp ಮತ್ತು SP ಕರಿಬಸನಗೌಡ ಕಿರುಕುಳ ನೀಡುತ್ತಿದ್ದಾರೆ. ದೂರುದಾರರಿಂದ ತನ್ನ ವಿರುದ್ಧ ಸುಳ್ಳು ಪಿಟಿಷನ್ ಪಡೆದು ತನಿಖೆ ಹೆಸರಲ್ಲಿ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಇನ್ನು ಕಳೆದ ತಿಂಗಳು ಶ್ರೀನಿವಾಸ್ರನ್ನ ವರ್ಗಾವಣೆ ಮಾಡಲಾಗಿತ್ತು. ಆದರೆ KATನಲ್ಲಿ ಅದಕ್ಕೆ ಅವರು ಸ್ಟೇ ತಂದಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.








