ಹಾಸನ: ಜಿಲ್ಲೆಯಲ್ಲಿ ಸಾಧನಾ ಸಮಾವೇಶವನ್ನು ಬಹಳ ದೊಡ್ಡಮಟ್ಟದಲ್ಲಿ ಮಾಡಲಾಗಿದೆ. ಇದೇ ವೇಳೆ ಹಾಸನಕ್ಕೂ ಮಂತ್ರಿ ಸ್ಥಾನ ಸಿಗುವ ಬಗ್ಗೆ ಸಿಎಂ ಸಿದ್ದರಾಮಯ್ಯ ಪರೋಕ್ಷವಾಗಿ ಹೇಳಿದ್ದಾರೆ. ಶಿವಲಿಂಗೇಗೌಡರ ರಾಜಕೀಯ ಭವಿಷ್ಯದ ಬಗ್ಗೆ ಮಾತನಾಡಿದ್ದು, ಮುಂದೆ ಮಂತ್ರಿಯಾಗುವ ಲಕ್ಷಣಗಳು ಕಾಣಿಸ್ತಾ ಇದಾವೆ.
ಇಂದಿನ ಸಮಾರಂಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಶಿವಲಿಂಗೇಗೌಡರಿಗೆ ರಾಜಕೀಯ ಭವಿಷ್ಯವಿದೆ. ಮಂತ್ರಿಯಾಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ. ಕ್ಷೇತ್ರದ ಜನರ ಆಶೀರ್ವಾದ ಅವರ ಮೇಲೆ ಗಟ್ಟಿಯಾಗಿದೆ. ಈ ಕಾರಣಕಗಕಾಗಿಯೇ ನಾಲ್ಕು ಬಾರಿ ಗೆದ್ದಿದ್ದಾರೆ. ಮುಂದೆಯೂ ಗೆದ್ದು ಬರುತ್ತಾರೆ. ಆದರೆ ಕೆಲವೊಂದು ರಾಜಕೀಯ ಬೆಳವಣಿಗೆಯನ್ನು ಬಹಿರಂಗವಾಗಿ ಚರ್ಚೆ ಮಾಡಲು ಸಾಧ್ಯವಿಲ್ಲ. 10 ಕೆರೆಗಳನ್ನು ತುಂಬಿಸುವ, ಕುಡಿಯುವ ನೀರು ಕೊಡುವ ಪುಣ್ಯದ ಕೆಲಸವನ್ನು ಶಿವಲಿಂಗೇಗೌಡರು ಮಾಡಿದ್ದಾರೆ ಎಂದು ಶಿವಲಿಂಗೇಗೌಡರನ್ನು ಹಾಡಿ ಕೊಂಡಾಡಿದ್ದಾರೆ. ಈ ಮೂಲಕ ಮುಂದೆ ಮಂತ್ರಿ ಮಾಡುವ ಭರವಸೆಯನ್ನು ನೀಡಿದ್ದಾರೆ.
ನಾವು ಜಾರಿಗೆ ತಂದ ಐದು ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ರಾಜ್ಯ ತಲಾ ಆದಾಯದಲ್ಲಿ ದೇಶದಲ್ಲಿಯೇ ನಂಬರ್ ಒನ್ ಆಗಿದೆ. ಬಿಜೆಪಿಯವರಿಗೆ ಆರ್ಥಿಕತೆ ಅರ್ಥವಾಗುವುದಿಲ್ಲ. ಕ್ಷೇತ್ರದ ಜನಪರ ಅಭಿವೃದ್ಧಿ ಕೆಲಸ ಮಾಡುವುದರಲ್ಲಿಯೇ ಇರಲಿ, ವಿಧಾನಸಭೆಯಲ್ಲಿ ಪಕ್ಷ ಮತ್ತು ಸರ್ಕಾರದ ಜನಪರ ಕಾರ್ಯಗಳನ್ನು ಸಮರ್ಥವಾಗಿ ಮಂಡಿಸುವುದರಲ್ಲೂ ಮುಂದಿದ್ದಾರೆ. ಇದು ನುಡಿದಂತೆ ನಡೆದ ನಮ್ಮ ಸರ್ಕಾರದ ಸಾಧನೆ ನಾವೂ ಅಭಿವೃದ್ಧಿ ಯೋಜನೆಗಳಿಗೆ 1.20 ಲಕ್ಷ ಕೋಟಿ ಖರ್ಚು ಮಾಡುವುದರ ಜೊತೆಗೆ ಗ್ಯಾರಂಟಿ ಯೋಜನೆಗಳಿಗೆ 56 ಸಾವಿರ ಕೋಟಿ ಜಣ ಖರ್ಚು ಮಾಡಿ, ಜನರ ಮನೆ ಬಾಗಿಲಿಗರ ಹೋಗಿ ಅಭಿವೃದ್ಧಿ ಕಾರ್ಯಗಳನ್ನು ತಲುಪಿಸಿದ್ದೇವೆ ಎಂದರು.











