
ಚಿತ್ರದುರ್ಗ, (ಫೆ.11) : ಮೊಳಕಾಲ್ಮೂರು ಕ್ಷೇತ್ರದ ಕಾರ್ಯಕರ್ತರ ಮತ್ತು ಅಭಿಮಾನಿಗಳು 2023 ರ ಚುನಾವಣೆಯಲ್ಲಿಯೂ ಕೂಡಾ ಇಲ್ಲಿಯೇ ಸ್ಪರ್ಧಿಸಬೇಕೆಂದು ಒತ್ತಾಯಿಸುತ್ತಿದ್ದಾರೆ.

ಆದರೆ ಇಲ್ಲಿನ ಸ್ಥಳೀಯರಿಗೆ ಅವಕಾಶ ನೀಡಬೇಕೆಂಬ ಕಾರಣದಿಂದ ಈ ಬಾರಿ ಬಳ್ಳಾರಿ ಜಿಲ್ಲೆಯಲ್ಲಿ ಸ್ಪರ್ಧಿಸುವುದಾಗಿ ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದರು.
ಮೊಳಕಾಲ್ಮುರಿನಲ್ಲಿ ಶನಿವಾರ ನೂತನ ಬಸ್ ನಿಲ್ದಾಣ ನಿರ್ಮಾಣಕ್ಕೆ ಶಂಕು ಸ್ಥಾಪನೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಡಿ.ಕೆ. ಶಿವಕುಮಾರ್ ಅವರು ಸಚಿವ ರಾಮುಲು ಅವರು ಮೊಳಕಾಲ್ಮೂರಿನಲ್ಲಿ ಅಭಿವೃದ್ಧಿ ಮಾಡಿದ್ದರೆ ಹಿಂದೇಟು ಹಾಕುತ್ತಿರುವುದು ಏಕೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ನಾನು ಈ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ.
ಮೊಳಕಾಲ್ಮೂರು ಕ್ಷೇತ್ರ ದೂರವಾಗಿದ್ದು, ಈ ಭಾಗದಲ್ಲಿ ಹಳ್ಳಿಗಳು ಹೆಚ್ಚಾಗಿವೆ. ಮತ್ತು ನಾನು ಎಲ್ಲಾ ಕಡೆ ಹೋಗಲು ಸಾಧ್ಯವಾಗಲ್ಲ.
ಅಷ್ಟೇ ಅಲ್ಲದೇ ಈ ಬಾರಿ ಇಲ್ಲಿನ ಸ್ಥಳೀಯರಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ನಾನು ಬಳ್ಳಾರಿ ಜಿಲ್ಲೆಯಿಂದ ಸ್ಪರ್ಧಿಸುತ್ತೇನೆ. ಜಿಲ್ಲೆಯ ಯಾವ ಕ್ಷೇತ್ರ ಎಂಬುದನ್ನು ಮುಂದಿನ ದಿನಗಳಲ್ಲಿ ಖಚಿತವಾದ ಮಾಹಿತಿ ನೀಡುತ್ತೇನೆ ಎಂದು ಹೇಳಿದರು.
GIPHY App Key not set. Please check settings