ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಹೆಸರಿನಲ್ಲಿ ಪ್ರತಿ ವರ್ಷವೂ ಬಿಬಿಎಂಪಿ ಪ್ರಶಸ್ತಿಯನ್ನ ನೀಡುತ್ತದೆ. ಹಲವು ವಿಭಾಗದಲ್ಲಿ ಕೆಲಸ ಮಾಡಿದವರನ್ನು ಗುರುತಿಸಿ ಪ್ರಶಸ್ತಿಯನ್ನ ನೀಡಲಾಗುತ್ತದೆ. ಸಿನಿಮಾ, ಸಂಗೀತಾ, ಮಾಧ್ಯಮ, ಸಮಾನ ಸೇವೆ, ಸಾರ್ವಜನಿಕ ಆಡಳಿತ ಸೇರಿದಂತೆ ಹಲವು ವಿಭಾಗದ ಸಾಧಕರನ್ನು ಗುರುತಿಸಿ ಸನ್ಮಾನ ಮಾಡಲಾಗುತ್ತದೆ. ಈ ಬಾರಿ 52 ಸಾಧಕರು ಕೆಂಪೇಗೌಡ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಖ್ಯಾತ ಗಾಯಕಿ ಸಂಗೀತಾ ಕಟ್ಟಿ, ಹಿರಿಯ ಪತ್ರಕರ್ತ ದೀಪಕ್ ತಿಮ್ಮಯ್ಯ, ಸುಪ್ರೀಂ ಕೋರ್ಟ್ ವಕೀಲರಾದ ಶ್ಯಾಮ ಸುಂದರ್, ನ್ಯೂಸ್ ಫಸ್ಟ್ ಕ್ಯಾಮೆರಾಮನ್ ಅವಿರಾಜ್, ನಿವೃತ್ತ ಐಎಎಸ್ ಅಧಿಕಾರಿ ಬಿಎಸ್ ಪಾಟೀಲ್, ಸಿದ್ದಯ್ಯ ಸೇರಿದಂತೆ 52 ಸಾಧಕರನ್ನು ಈ ಬಾರಿ ಕೆಂಪೇಗೌಡ ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ.
ಈ 52 ಮಂದಿ ಆಯಾ ಕ್ಷೇತ್ರದಲ್ಲಿ ಸಾಧನೆ ಮಾಡಿದವರೆ ಆಗಿದ್ದಾರೆ. ನಾಳೆ ಸಂಜೆ 6 ಗಂಟೆಗೆ ಬಿಬಿಎಂಪಿ ಗಾಜಿನ ಮನೆಯಲ್ಲಿ ಪ್ರಶಸ್ತಿ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಕೆಂಪೇಗೌಡ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.





















