Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆಗೆ ಚೀಲದಲ್ಲಿ ಹಣ ತರ್ತಾರೆ ಆ ಸಚಿವರು : ಬಿವೈ ವಿಜಯೇಂದ್ರ ಆಕ್ರೋಶ

---Advertisement---

ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಗೆ ವೇದಿಕೆ ಸಿದ್ಧವಾಗಿದೆ. ಏಪ್ರಿಲ್ 9ರಂದು ಚುನಾವಣೆ ನಡೆಯಲಿದ್ದು, ಮೇ 4ಕ್ಕೆ ಫಲಿತಾಂಶ ಹೊರ ಬೀಳಲಿದೆ. ಬಿಜೆಪಿ ಹಾಗೂ ಕಾಂಗ್ರೆಸ್ ಈ ಎರಡು ಕ್ಷೇತ್ರಕ್ಕೆ ದೊಡ್ಡ ಪೈಪೋಟಿಯನ್ನೇ ನಡೆಸುತ್ತಿವೆ. ಎರಡು ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿಯೇ ಗೆಲ್ಲುತ್ತದೆ ಎಂಬ ಆತ್ಮವಿಶ್ವಾಸವನ್ನ ಇಟ್ಟುಕೊಂಡಿದ್ದಾರೆ. ಇದರ ನಡುವೆ ದಾವಣಗೆರೆ ಕ್ಷೇತ್ರದ ಬಗ್ಗೆ ಬಿವೈ ವಿಜಯೇಂದ್ರ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ದಾವಣಗೆರೆಯಲ್ಲು ಸೂಟ್ ಕೇಸ್ ನಲ್ಲಿ ಹಣ ತರುವುದಿಲ್ಲ. ಬದಲಿಗೆ ಸಚಿವರೊಬ್ಬರು ಗೋಣಿಚೀಲದಲ್ಲಿ ಹಣ ತಂದು ಕೂರುತ್ತಾರೆ. ಅಲ್ಲಿನ ರಾಜಕೀಯದಲ್ಲಿ ಏನೆಲ್ಲಾ ನಡೆಯುತ್ತಿದೆ ಎಂಬುದು ನನಗೆ ತಿಳಿದಿದೆ. ರಾಜ್ಯದ ಜನ ಕಾಂಗ್ರೆಸ್ ನಿಂದ ಬೇಸತ್ತಿದ್ದಾರೆ. ಇದು ಬಡವರು ಮತ್ತು ದೀನದಲಿತರ ವಿರೋಧಿ ಸರ್ಕಾರವಾಗಿದೆ. ಸದ್ಯದ ರಾಜಕೀಯ ವಾತಾವರಣ ನೋಡಿದರೆ ಬಿಜೆಪಿ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ದಾವಣಗೆರೆ ಹಾಗೂ ಬಾಗಲಕೋಟೆಯಲ್ಲಿ ಈ ಬಾರಿ ಕಮಲದ ಹೂ ಅರಳುವುದನ್ನು ಯಾರೂ ತಡೆಯುವುದಕ್ಕೆ ಸಾಧ್ಯವಿಲ್ಲ. ಈ ಹಿಂದೆ ಸಿರಾ ಹಾಗೂ ಕೆ.ಆರ್.ಪೇಟೆ ಕ್ಷೇತ್ರಗಳಲ್ಲಿ ಕಾಂಗ್ರೆದ್ ಕುತಂತ್ರ ಮಾಡಿತ್ತು. ಮತದಾನದ ಕೊನೆಯ ದಿನದವರೆಗೂ ಕಾರ್ಯಕರ್ತರು ಎಚ್ಚರಿಕೆಯಿಂದ ಕೆಲಸ ಮಾಡಬೇಕು. ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರ ಆಶೀರ್ವಾದ ಪಡೆದು ಬಂದಿದ್ದೇನೆ. ಅವರೆಂದು ಇಟ್ಟ ಹೆಜ್ಜೆಯಿಂದ ಹಿಂದೆ ಸರಿದವರಲ್ಲ. ಪಕ್ಷದ ಗುರಿ ಸಾಧನೆಗೆ ದಿಟ್ಟ ಹೆಜ್ಜೆ ಇಡಲಾಗುತ್ತಿದೆ. ಬಾಗಲಕೋಟೆ ಕ್ಷೇತ್ರದಲ್ಲಿ ಸಣ್ಣ ಪುಟ್ಟ ಗೊಂದಲಗಳನ್ನು ಬಗೆಹರಿಸಲಾಗುವುದು. ಎಲ್ಲಾ ನಾಯಕರು ಒಟ್ಟಾಗಿ ಕೆಲಸ ಮಾಡಿ, ಬಿಜೆಪಿ ಅಭ್ಯರ್ಥಿ ಚರಂತಿ ಮಠರನ್ನ ಗೆಲ್ಲಿಸಬೇಕು ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now