ದಾವಣಗೆರೆ: ಇತ್ತಿಚೆಗೆ ಸ್ವಪಕ್ಷದವರ ಮೇಲೆಯೇ ಎಂಪಿ ರೇಣುಕಾಚಾರ್ಯ ಅವರು ಆಕ್ರೋಶ ಹೊರ ಹಾಕುತ್ತಿದ್ದಾರೆ. ಬಿಎಸ್ ಯಡಿಯೂರಪ್ಪ ಅವರನ್ನು ಕಡೆಗಣಿಸಿದ್ದೇ ರೇಣುಕಾಚಾರ್ಯ ಅವರ ಆಕ್ರೋಶಕ್ಕೆ ಕಾರಣವಾಗಿದೆ. ಇಂದು ಕೂಡ ಸ್ವಪಕ್ಷದವರ ಮೇಲೆ ಆಕ್ರೋಶ ಹೊರ ಹಾಕಿದ್ದು, ನನ್ನ ಮೇಲೆ ತೂಗುಗತ್ತಿ ತೂಗುತ್ತಾ ಇದೆ. ಆದರೆ ನಾನು ಯಾವುದಕ್ಕೂ ಹೆದರುವುದಿಲ್ಲ. ನೋಟೀಸ್ ಗೆ ಉತ್ತರವನ್ನು ಕೊಡುವುದಿಲ್ಲ ಎಂದಿದ್ದಾರೆ.
ಮಾಜಿ ಶಾಸಕ ಟಿ ಗುರುಸಿದ್ಧನಗೌಡ ಅವರನ್ನು ಉಚ್ಛಾಟನೆ ಮಾಡಿದ ಕಾರಣ ಅವರ ನಿವಾಸಕ್ಕೆ ರೇಣುಕಾಚಾರ್ಯ ಭೇಟಿ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ಗ್ರಾಮಪಂಚಾಯತಿಯಲ್ಲೂ ಗೆಲ್ಲದವರಿಗೆ ಪಕ್ಷದ ಜವಬ್ದಾರಿ ನೀಡಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಕಡೆಗಣಿಸಿದ್ದೆ ಪಕ್ಷದ ಸೋಲಿಗೆ ಕಾರಣವಾಗಿದೆ. ಈಗ ಪಕ್ಷಕ್ಕೆ ಸಾಕಷ್ಟು ಡ್ಯಾಮೇಜ್ ಆದ ಮೇಲೆ ಮತ್ತೆ ಯಡಿಯೂರಪ್ಪ ಅವರನ್ನು ಮುಂದೆ ಬಿಟ್ಟಿದ್ದಾರೆ. ಆಡು ಮುಟ್ಟದ ಸೊಪ್ಪಿಲ್ಲ, ಬಿಎಸ್ ಯಡಿಯೂರಪ್ಪನೋಡದ ಹಳ್ಳಿಯಿಲ್ಲ ಎಂದಿದ್ದಾರೆ.
ನಾನು ಕೂಡ ಎಂಪಿ ಚುನಾವಣೆಯ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಕಾದು ನೋಡುತ್ತೇನೆ. ಟಿಕೆಟ್ ಸಿಗದೆ ಹೋದಲ್ಲಿ ಕಾರ್ಯಕರ್ತರ ಅಭಿಪ್ರಾಯ ಪಡೆದು ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ. ನನ್ನ ಹೋರಾಟ ಯಾರ ವಿರುದ್ಧವೂ ಕತ್ತಿ ಮಸೆಯೋಕೆ ಅಲ್ಲ. ಸಂಘಟನೆ ಉಳಿತುವುದಕ್ಕೆ ಕೆಲಸ ಮಾಡುತ್ತೇನೆ. ಮಾಡಾಳು ವಿರುಪಾಕ್ಷಪ್ಪ ಅವರನ್ನು ಭೇಟಿಯಾಗುತ್ತೇನೆ. ನನ್ನನ್ನು ರೆಬಲ್ ರೇಣುಕಾಚಾರ್ಯ ಎಂದು ಕರೆಯಲಿ. ನಾನು ಯಾವುದಕ್ಕೂ ತಲೆ ಕೆಡಿಸಿಕೊಳ್ಳುವುದಿಲ್ಲ. ಯಡಿಯೂರಪ್ಪ ಅವರ ವಿರುದ್ಧ ಮಾತನಾಡಿದವರ ಮೇಲೆಮೊದಲು ಕ್ರಮ ತೆಗೆದುಕೊಳ್ಳಲಿ. ಮಾಜಿ ಶಾಸಕ ಗುರುಸಿದ್ದನಗೌಡ ಅವರಿಗೆ ನೋಟೀಸ್ ನೀಡದೆ ಉಚ್ಛಾಟನೆ ಮಾಡಿದ್ದು ಸರಿಯಲ್ಲ ಎಂದಿದ್ದಾರೆ.
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…