ಕಣ್ಣಿನ ತೊಂದರೆ ಇರುವವರು ಜಿಲ್ಲಾಸ್ಪತ್ರೆಗೆ ಬನ್ನಿ : ಡಾ.ಪ್ರದೀಪ್

 

ಚಿತ್ರದುರ್ಗ. ಜ.03: ಶಾಸಕರ ಅನುದಾನದಲ್ಲಿ ರೂ.20 ಲಕ್ಷ ಹಿರಿಯ ನಾಗರಿಕರಿಗಾಗಿಯೇ ಮೀಸಲು ಇರಿಸಿರುವುದಾಗಿ ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ಹೇಳಿದರು.

ನಗರದ ಜಿಲ್ಲಾ ಬಾಲಭವನಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರೋಗ್ಯ ಇಲಾಖೆ, ಜಿಲ್ಲಾ ಅಂಧತ್ವ  ನಿಯಂತ್ರಣಾ ಕಾರ್ಯಕ್ರಮದ ವತಿಯಿಂದ ಹಮ್ಮಿಕೊಂಡಿದ್ದ “ಹಿರಿಯ ನಾಗರಿಕರಿಗೆ “ಉಚಿತ ನೇತ್ರ  ತಪಾಸಣಾ ಶಿಬಿರ” ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿ ಯಶಸ್ವಿ ವ್ಯಕ್ತಿಗಳ ಹಿಂದೆ ಅವರ ಪೋಷಕರ ತ್ಯಾಗ ಇದೆ.  ಮಕ್ಕಳ ಏಳಿಗೆಗಾಗಿ ಪೋಷಕರು ಯೌವ್ವನವನ್ನು ಮುಡುಪಾಗಿಡುತ್ತಾರೆ. ಆದರೆ ಬೆಳೆದು ದೊಡ್ಡವರಾದ ಮಕ್ಕಳು ವಯಸ್ಸಾದ ಪೋಷಕರನ್ನು ಎಷ್ಟರಮಟ್ಟಿಗೆ ನೋಡಿಕೊಳ್ಳುತ್ತಾರೆ ಎನ್ನುವುದು ಇಂದಿನ ಸಮಾಜದಲ್ಲಿ ಯಕ್ಷ ಪ್ರಶ್ನೆಯಾಗಿದೆ. ಹಿರಿಯ ನಾಗರಿಕರ ಆರೋಗ್ಯ ಮತ್ತು ಆರ್ಥಿಕ ಸ್ಥಿತಿ ಉತ್ತಮವಾಗಿರಬೇಕು. ಈ ದೃಷ್ಟಿಯಿಂದ ರಾಜ್ಯ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿ ಮಾಡಿದೆ. ಪ್ರತಿ ಜಿಲ್ಲೆಯಲ್ಲಿ 3 ವೃದ್ಧಾಶ್ರಮಗಳನ್ನು ಸ್ಥಾಪಿಸಲಾಗಿದೆ. ಹಿರಿಯರಿಗಾಗಿ 1090  ಸಹಾಯವಾಣಿ ತೆರಯಲಾಗಿದೆ. ಆರೋಗ್ಯ ಸಮಸ್ಯೆ ಹಾಗೂ ಕಾನೂನು ನೆರವು, ಆಪ್ತ ಸಮಾಲೋಚನೆ ಪಡೆಯಲು ಹಿರಿಯ ನಾಗರಿಕರು ಸಹಾಯವಾಣಿಗೆ ಕರೆ ಮಾಡಬಹುದಾಗಿದೆ. ಕೆ.ಎಸ್.ಆರ್.ಟಿ. ಬಸ್ ಪ್ರಯಾಣ ದರದಲ್ಲೂ ಹಿರಿಯ ನಾಗರಿಕರಿಗೆ ರಿಯಾಯಿತಿ ನೀಡಲಾಗಿದೆ. ಸಂಧ್ಯಾ ಸುರಕ್ಷಾ ಯೋಜನೆಯಡಿ 60 ರಿಂದ 65 ವರ್ಷದವರಿಗೆ ರೂ.800 ಹಾಗೂ 65 ವರ್ಷ ಮೇಲ್ಪಟ್ಟವರಿಗೆ ರೂ.1200 ನೀಡಲಾಗುತ್ತಿದೆ. ಇದರೊಂದಿಗೆ 2007ರಲ್ಲಿ ಹಿರಿಯ ನಾಗರಿಕರ ರಕ್ಷಣಾ ಕಾಯ್ದೆಯನ್ನು ಸಹ ಜಾರಿ ಮಾಡಲಾಗಿದೆ. ಪ್ರತಿ ಜಿಲ್ಲೆಯಲ್ಲೂ ಹಿರಿಯ ನಾಗರಿಕರ ಅವಹಾಲುಗಳನ್ನು ಆಲಿಸಲು ನ್ಯಾಯ ಮಂಡಳಿ ಸ್ಥಾಪಿಸಲಾಗಿದೆ ಎಂದರು.

 

ವಿಜ್ಞಾನ ಎಷ್ಟೇ ಮುಂದುವರೆದರೂ, ಇಂದಿಗೂ ಕೃತಕವಾಗಿ ಕಣ್ಣು ತಯಾರಿಸುವುದು ಸಾಧ್ಯವಾಗಿಲ್ಲ. ನಮ್ಮ ಕಣ್ಣುಗಳ ರಕ್ಷಣೆ ನಮ್ಮದೇ ಜವಾಬ್ದಾರಿಯಾಗಿದೆ. ಕೆ.ಸಿ.ವಿರೇಂದ್ರ ಪಪ್ಪಿ ಅಭಿಮಾನಿ ಬಳಗ ಹಾಗೂ ಶಂಕರ್ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ  ಕ್ಷೇತ್ರದ 10 ಪಂಚಾಯಿತಿಗಳಲ್ಲಿ ಹಿರಿಯ ನಾಗರಿಕರು ಸೇರಿದಂತೆ ಎಲ್ಲಾ ವರ್ಗದವರಿಗೆ ಉಚಿತ ಕಣ್ಣಿನ ತಪಾಸಣೆ ಶಿಬಿರ ನಡೆಸಲಾಗಿದೆ. 4830 ಜನರಿಗೆ ಉಚಿತ ಕಣ್ಣಿನ ತಪಾಸಣೆ ನಡೆಸಲಾಗಿದೆ. 213 ಜನರನ್ನು ಬೆಂಗಳೂರಿನ ಶಂಕರ್ ಕಣ್ಣಿನ ಆಸ್ಪತ್ರೆಗೆ ಕರೆದೊಯ್ಯುದು ಉಚಿತವಾಗಿ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ ಮಾಡಿಸಿ, ಸುರಕ್ಷಿತವಾಗಿ ಮರಳಿ ಅವರ ಮನೆಗಳಿಗೆ ತಲುಪಿಸಲಾಗಿದೆ. 861 ಜನರಿಗೆ ಉಚಿತ ಕನ್ನಡಕ ವಿತರಿಸಲಾಗಿದೆ.

ಮುಂದಿನ ದಿನಗಳಲ್ಲಿ ಉಳಿದ ಪಂಚಾಯಿತಿಗಳಲ್ಲಿಯೂ ಉಚಿತ ಕಣ್ಣಿನ ಶಿಬಿರ ಆಯೋಜಿಸಲಾಗುವುದು. ಇದರೊಂದಿಗೆ ಸರ್ಕಾರದ ವತಿಯಿಂದ ಆಯೋಜಿಸಲಾದ ಶಿಬಿರದಲ್ಲೂ ಕಣ್ಣಿನ ತಪಾಸಣೆ ಹಾಗೂ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆಯನ್ನು ಹಿರಿಯ ನಾಗರಿಕರು ಮಾಡಿಸಿಕೊಳ್ಳುವಂತೆ ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ಸಲಹೆ ನೀಡಿದರು.

ಜಿಲ್ಲಾಸ್ಪತ್ರೆಯ ನೇತ್ರ ತಜ್ಞ ಡಾ.ಪ್ರದೀಪ್ ಮಾತನಾಡಿ, ನೇತ್ರದಾನ ಮಹಾದಾನ ಎನ್ನುವುದಕ್ಕಿಂತಲೂ ದೃಷ್ಠಿದಾನ ಮಹಾದಾನ. ಪ್ರತಿಯೊಬ್ಬರು ದೃಷ್ಠಿದಾನ ಮಾಡಬಹುದು. ಕಣ್ಣಿನ ತೊಂದರೆ ಇರುವ ತಮ್ಮ ನೆರೆ-ಹೊರೆಯ ಹಿರಿಯ ನಾಗರಿಕರನ್ನು ನೇತ್ರ ತಪಾಸಣಾ ಶಿಬಿರಗಳಿಗೆ ಕರೆದುಕೊಂಡು ಬರುವ ಮೂಲಕ ತಾವು ಸಹ ದೃಷ್ಠಿದಾನ ಮಾಡಬಹುದು ಎಂದು ತಿಳಿಸಿದ ಅವರು, ಕಣ್ಣಿನ ತೊಂದರೆ ಇರುವವರು ಜಿಲ್ಲಾಸ್ಪತ್ರೆಗೆ ಬಂದು ತಪಾಸಣೆಗೆ ಒಳಗಾಗಿ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್, ಮುಪ್ಪು ಎನ್ನುವುದು ಪ್ರತಿಯೊಬ್ಬರ ಜೀವನದಲ್ಲಿ ಬರಲಿದೆ. ವಯಸ್ಸಾದಂತೆ ನಮ್ಮ ದೇಹವು ಅನೇಕ ಸಮಸ್ಯೆಗಳಿಗೆ ಒಳಗಾಗುತ್ತದೆ. ಅದರಲ್ಲಿ ಪ್ರಮುಖವಾಗಿ ಕಣ್ಣುಗಳು ಅತೀ ಅವಶ್ಯಕ. ಇಲಾಖೆ ವತಿಯಿಂದ ಇದೇ ಪ್ರಥಮ ಬಾರಿಗೆ ನೇತ್ರ ತಪಾಸಣೆ ಶಿಬಿರ ಏರ್ಪಡಿಸಿ, ಶಸ್ತ್ರಚಿಕಿತ್ಸೆಗೆ ಅವಕಾಶ ಕಲ್ಪಿಸಿದ್ದು, ಹಿರಿಯ ನಾಗರಿಕರ ಅನುಕೂಲಕ್ಕಾಗಿ ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿಯೂ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ ಎಂದರು.

 

ಮನೆಗೆ ಹಿರಿಯರು ಆಸ್ತಿ ಇದ್ದಂತೆ. ಹಿರಿಯ ನಾಗರಿಕರು ನಿಯಮಿತವಾಗಿ ಆರೋಗ್ಯ ತಪಾಸಣಾ ಮಾಡಿಕೊಂಡು ಪೌಷ್ಠಿಕಾಂಶ ಆಹಾರ ಸೇವಿಸುವ ಮೂಲಕ ಉತ್ತಮ ಆರೋಗ್ಯ ಕಾಪಾಡಿಕೊಂಡು ಧೀರ್ಘಾಯುಷ್ಯಗಳಾಗಿ ಬದುಕಬೇಕು ಎಂದು ಆಶಯವ್ಯಕ್ತಪಡಿಸಿದರು.

ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ಮಾತನಾಡಿ, 2024-25ನೇ ಸಾಲಿನಲ್ಲಿ ಹಿರಿಯ ನಾಗರಿಕರ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆಯ ವಿಶೇಷ ಅಭಿಯಾನ ಯೋಜನೆಯನ್ನು ಘೋಷಿಸಿದ್ದು, ಮಾರ್ಗಸೂಚಿಯನ್ವಯ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಮಂಜೂರಾತಿ ನೀಡಿ, ಸರ್ಕಾರ ಆದೇಶಿಸಿದೆ. ಅದರಂತೆ ಆರೋಗ್ಯ ಇಲಾಖೆಯೊಂದಿಗೆ ಸಮನ್ವಯಿಸಿ ಎಲ್ಲ ತಾಲ್ಲೂಕುಗಳಲ್ಲಿಯೂ ಹಿರಿಯ ನಾಗರಿಕರಿಗೆ ಪ್ರತಿ ವರ್ಷ 02 ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಶಿಬಿರಗಳನ್ನು ಆಯೋಜಿಸಬೇಕಾಗಿರುತ್ತದೆ. ಆದ್ದರಿಂದ ಪ್ರಥಮ ಹಂತದಲ್ಲಿ ಜಿಲ್ಲೆಯ ಆರು ತಾಲ್ಲೂಕುಗಳಲ್ಲಿ ಹಿರಿಯ ನಾಗರಿಕರಿಗೆ ಕಣ್ಣಿನ ಪೊರೆ ಚಿಕಿತ್ಸೆಗಾಗಿ ಪೂರ್ವಭಾವಿ ಶಿಬಿರಗಳನ್ನು ಇದೇ ಜ.03 ರಿಂದ 10  ರವರಗೆ ಆಯೋಜಿಸಲಾಗಿದೆ ಎಂದು ಹೇಳಿದರು.

 

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಾಪಯ್ಯ,  ಜಿಲ್ಲಾ ಅಂಧತ್ವ ನಿಯಂತ್ರಣಾಧಿಕಾರಿ ಡಾ.ನಾಗರಾಜ್, ತಾಲ್ಲೂಕು ಪಂಚಾಯಿತಿ ಇಒ ವೈ.ರವಿಕುಮಾರ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶ್ರೀನಿವಾಸಮೂರ್ತಿ, ನೇತ್ರ ಸಹಾಯಕ ಕೆ. ಸಿ. ರಾಮು ಸೇರಿದಂತೆ ಹಿರಿಯ ನಾಗರಿಕರು ಇದ್ದರು.

suddionenews

Recent Posts

ಯಾವ ವಯಸ್ಸಿನಿಂದ ಮಕ್ಕಳಿಗೆ ಚಹಾ ಅಥವಾ ಕಾಫಿಯನ್ನು ನೀಡಬಹುದು ? ಚಿಕ್ಕ ವಯಸ್ಸಿನಲ್ಲಿ ಕುಡಿಯುವುದು ಅಪಾಯಕಾರಿಯೇ ?

ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…

1 hour ago

ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ

ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…

2 hours ago

ಫೈನಾನ್ಸ್ ಕಿರುಕುಳಕ್ಕೆ ದಾವಣಗೆರೆಯ ಶಿಕ್ಷಕಿ ಆತ್ಮಹತ್ಯೆ ಕೇಸ್ : ಉಲ್ಟಾ ಹೊಡೆದ ಪತಿ..!

ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…

11 hours ago

ಹುತಾತ್ಮರ ದಿನ : ಗಾಂಧೀಜಿಯವರಿಗೆ ಪುಷ್ಪ ನಮನ

ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…

11 hours ago

ಸರ್ಕಾರಿ ಶಾಲೆಗೆ ಭೇಟಿ ನೀಡಿ ಮಕ್ಕಳೊಂದಿಗೆ ಬಿಸಿಯೂಟ ಸವಿದ ಜಿ.ಪಂ ಸಿಇಒ

ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…

11 hours ago

ಮೈಕ್ರೋ ಫೈನಾನ್ಸ್ ಕಿರುಕುಳ ನೀಡಿದಲ್ಲಿ ಎಫ್.ಐ.ಆರ್ ದಾಖಲಿಸಿ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು  ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್‌ಐಆರ್…

11 hours ago