ಪಾಟ್ನಾ : ನಿನ್ನೆ ರಿಲಯನ್ಸ್ ಫಂಡೇಷನ್ ಆಸ್ಪತ್ರೆಗೆ ಕರೆ ಮಾಡಿ ಕೊಲೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಬಿಹಾರ ಪೊಲೀಸರು ಬಂಧಿಸಿದ್ದಾರೆ. ರಾಕೇಶ್ ಮಿಶ್ರಾ ಎಂಬುವವನು ಬಂಧಿತ ಆರೋಪಿಯಾಗಿದ್ದಾನೆ. ಬಂಧಿತನಿಂದ ಕರೆ ಮಾಡಿದ್ದ ಮೊಬೈಲ್ ಅನ್ನು ವಶಕ್ಕೆ ಪಡೆಯಲಾಗಿದೆ. ಬಿಹಾರದ ದರ್ಭಾಂಗ ಜಿಲ್ಲೆಯಲ್ಲಿ ಈತನನ್ನು ಬಂಧಿಸಲಾಗಿದೆ.
ನಿನ್ನೆ ಮಧ್ಯಾಹ್ನ ಸುಮಾರು 12.57ಕ್ಕೆ ರಿಲಯನ್ಸ್ ಫೌಂಡೇಶನ್ಸ್ ಆಸ್ಪತ್ರೆಯ ಸಂಖ್ಯೆಗೆ ಒಂದು ಅಪರಿಚಿತ ಸಂಖ್ಯೆಯಿಂದ ಕರೆಯೊಂದು ಬಂದಿತ್ತು. ರಿಲಯನ್ಸ್ ಆಸ್ಪತ್ರೆಯನ್ನು ಸ್ಪೋಟಿಸುವುದಾಗಿ ಹೇಳಿದ ವ್ಯಕ್ತಿ, ಮುಖೇಶ್ ಅಂಬಾನಿ ಹಾಗೂ ನೀತಾ ಅಂಬಾನಿಯನ್ನು ಕೊಲ್ಲುವುದಾಗಿ ಹೇಳಿದ್ದ. ಇದೀಗ ಆ ವ್ಯಕ್ತಿಯನ್ನು ಬಿಹಾರ ಪೊಲೀಸರು ಬಂಧಿಸಿದ್ದಾರೆ.
ಇನ್ನು ಡಿಬಿ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿದೆ. ಮುಂಬೈ ಪೊಲೀಸರು ಇನ್ನು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಈ ಹಿಂದೆಯೂ ಮುಖೇಶ್ ಅಂಬಾನಿ ಕುಟುಂಬಕ್ಕೆ ಕೊಲೆ ಬೆದರಿಕೆ ಕರೆಗಳು ಬಂದಿದ್ದವು. ಆಗಸ್ಟ್ 15ರಂದು ಒಟ್ಟು ಎಂಟು ಬದರಿಕೆ ಕರೆಗಳು ಬಂದಿದೆ ಎಂದು ಆಸ್ಪತ್ರೆಯವರು ಡಿ ಬಿ ಮಾರ್ಗ್ ಪೊಲೀಸ್ ಠಾಣೆಗೆ ತಿಳಿಸಿದ್ದಾರೆ.