ಸುದ್ದಿಒನ್,ನವದೆಹಲಿ,ಮೇ.23: ಮಹಿಳೆಯೊಬ್ಬರು ಬಟ್ಟೆ ಬಿಚ್ಚುವ ಅಥವಾ ಸ್ನಾನ ಮಾಡುವ ವಿಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುವುದಾಗಿ ಬೆದರಿಕೆ ಹಾಕುವುದು ಆಕೆಯ ಚಾರಿತ್ರ್ಯಕ್ಕೆ ಧಕ್ಕೆ ತರುವ ಕೃತ್ಯವಾಗಿದೆ. ಇದು ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 506 ರ ಅಡಿಯಲ್ಲಿ ‘ಕ್ರಿಮಿನಲ್ ಬೆದರಿಕೆ’ (Criminal Intimidation) ಅಪರಾಧ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಮಹತ್ವದ ತೀರ್ಪು ನೀಡಿದೆ.
ಮಹಿಳೆಯೊಬ್ಬರ ಖಾಸಗಿ ಸ್ನಾನದ ವಿಡಿಯೋವನ್ನು ಫೇಸ್ಬುಕ್ನಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿಯೊಬ್ಬನಿಗೆ ಐಪಿಸಿ ಸೆಕ್ಷನ್ 506 ರ (ಭಾಗ II) ಅಡಿಯಲ್ಲಿ ವಿಧಿಸಲಾಗಿದ್ದ ಶಿಕ್ಷೆಯನ್ನು ನ್ಯಾಯಮೂರ್ತಿಗಳಾದ ಸಂಜಯ್ ಕರೋಲ್ ಮತ್ತು ಎನ್. ಕೋಟೀಶ್ವರ್ ಸಿಂಗ್ ಅವರಿದ್ದ ನ್ಯಾಯಪೀಠವು ಎತ್ತಿಹಿಡಿದಿದೆ.

ಮಹಿಳೆಯರ ಲೈಂಗಿಕತೆಯ ಬಗ್ಗೆ ಬದಲಾಗುತ್ತಿರುವ ಇಂದಿನ ದೃಷ್ಟಿಕೋನವನ್ನು ಗಮನಿಸಿದರೆ, ಮಹಿಳೆ ಸ್ನಾನ ಮಾಡುವಾಗ ವಿಡಿಯೋ ರೆಕಾರ್ಡ್ ಮಾಡುವುದು ಮತ್ತು ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕುವುದು ಆಕೆಯ ಪವಿತ್ರತೆ ಮತ್ತು ಚಾರಿತ್ರ್ಯಕ್ಕೆ ಕಳಂಕ ತರುವ ಕೃತ್ಯವಾಗಿದೆ.ಪ್ರತಿಯೊಬ್ಬ ವ್ಯಕ್ತಿಗೂ ಸ್ನಾನದ ಗೃಹದಲ್ಲಿ (ಬಾತ್ರೂಮ್) ತನ್ನದೇ ಆದ ಗೌಪ್ಯತೆಯ ನಿರೀಕ್ಷೆ ಇರುತ್ತದೆ. ಅಂತಹ ದೃಶ್ಯಗಳನ್ನು ಸಾರ್ವಜನಿಕವಾಗಿ ಪ್ರಕಟಿಸುವುದು ಆಕೆಯ ಗೌಪ್ಯತೆ, ಘನತೆ ಮತ್ತು ಲೈಂಗಿಕ ಸ್ವಾಯತ್ತತೆಯನ್ನು ಉಲ್ಲಂಘಿಸಿದಂತಾಗುತ್ತದೆ.ಇಬ್ಬರ ನಡುವೆ ಯಾವುದೇ ಸಂಬಂಧವಿದ್ದರೂ (Relationship), ಆ ಸಂಬಂಧವು ಮಹಿಳೆಯ ಖಾಸಗಿ ವಿಷಯಗಳನ್ನು ಸಾರ್ವಜನಿಕವಾಗಿ ಹಂಚಿಕೊಳ್ಳುವ ಹಕ್ಕನ್ನು ಯಾರಿಗೂ ನೀಡುವುದಿಲ್ಲ.
ಈ ಪ್ರಕರಣದಲ್ಲಿ ಆರೋಪಿಯ ಮೊಬೈಲ್ ಫೋನ್ ಅಥವಾ ವಿಡಿಯೋ ಪತ್ತೆಯಾಗದ ಕಾರಣ ಆತನನ್ನು ಖುಲಾಸೆಗೊಳಿಸಬೇಕು ಎಂಬ ವಾದವನ್ನು ಕೋರ್ಟ್ ತಳ್ಳಿಹಾಕಿದೆ.ಅಪರಾಧಕ್ಕೆ ಬಳಸಿದ ವಸ್ತು ಅಥವಾ ಮೊಬೈಲ್ ಸಿಗದಿದ್ದರೆ ಪ್ರಕರಣವೇ ಮುಗಿದುಹೋಯಿತು ಎಂದಲ್ಲ. ಬೇರೆ ನಂಬಲರ್ಹ ಸಾಕ್ಷ್ಯಾಧಾರಗಳು ಇದ್ದರೆ, ಮೊಬೈಲ್ ಸಿಗದೇ ಇದ್ದರೂ ಆರೋಪಿಗೆ ಶಿಕ್ಷೆ ವಿಧಿಸಬಹುದು,” ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.
ಪ್ರಕರಣದ ಹಿನ್ನೆಲೆ:
ಆರೋಪಿಯು ಮದುವೆಯಾಗುವುದಾಗಿ ನಂಬಿಸಿ ತನ್ನೊಂದಿಗೆ ದೈಹಿಕ ಸಂಬಂಧ ಬೆಳೆಸಿದ್ದ ಮತ್ತು ತಾನು ಸ್ನಾನ ಮಾಡುತ್ತಿದ್ದಾಗ ರಹಸ್ಯವಾಗಿ ವಿಡಿಯೋ ಮಾಡಿ, ಅದನ್ನು ಫೇಸ್ಬುಕ್ನಲ್ಲಿ ಹಾಕುವುದಾಗಿ ಬೆದರಿಕೆ ಹಾಕುತ್ತಿದ್ದ ಎಂದು ಸಂತ್ರಸ್ತೆ ದೂರು ನೀಡಿದ್ದರು.
ವಿಚಾರಣೆ ನಡೆಸಿದ್ದ ಕೆಳ ನ್ಯಾಯಾಲಯವು ಅತ್ಯಾಚಾರದ ಆರೋಪದಿಂದ ಆತನನ್ನು ಮುಕ್ತಗೊಳಿಸಿತ್ತಾದರೂ, ಮಹಿಳೆಗೆ ಕ್ರಿಮಿನಲ್ ಬೆದರಿಕೆ ಒಡ್ಡಿದ ಆರೋಪದಡಿ (IPC 506 Part II) ದೋಷಿ ಎಂದು ತೀರ್ಪು ನೀಡಿತ್ತು. ಇದೀಗ ಸುಪ್ರೀಂ ಕೋರ್ಟ್ ಕೂಡ ಈ ಶಿಕ್ಷೆಯನ್ನು ಎತ್ತಿಹಿಡಿದಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















