Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರಿನ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಮೂರು ಪ್ರಶಸ್ತಿಗಳು

---Advertisement---

ಸುದ್ದಿಒನ್, ಹಿರಿಯೂರು, ಸೆಪ್ಟೆಂಬರ್. 26 : 2024 ಮತ್ತು 2025ನೇ ಸಾಲಿನಲ್ಲಿ ಶಿವಮೊಗ್ಗ, ದಾವಣಗೆರೆ ಹಾಗೂ ಚಿತ್ರದುರ್ಗ ಹಾಲು ಒಕ್ಕೂಟದಂದ ವಿವಿಧ ಹಂತದ ಮೂರು ಪ್ರಶಸ್ತಿಗಳು ಹಿರಿಯೂರು ತಾಲ್ಲೂಕಿನ ಹಾಲು ಉತ್ಪಾದಕ ಸಹಕಾರ ಸಂಘಗಳಿಗೆ ಲಭಿಸಿವೆ.

ಶಿಮುಲ್ ಒಕ್ಕೂಟದಲ್ಲಿ ಹೆಚ್ಚು ಹಾಲು ಉತ್ಪಾದನೆ ಮಾಡಿದ ಸಂಘಗಳಿಗೆ ಪ್ರಶಸ್ತಿ ನೀಡುತ್ತಿದ್ದು, ಅದರಂತೆ ತಾಲ್ಲೂಕಿನ
ಧರ್ಮಪುರ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಚಾಂಪಿಯನ್ ಪ್ರಶಸ್ತಿ, ಮರಡಿಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅತ್ಯುತ್ತಮ ಬಿಎಂಸಿ ಕೇಂದ್ರ ಪ್ರಶಸ್ತಿ ಹಾಗೂ ಆರನಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ಅತ್ಯುತ್ತಮ ಗುಚ್ಛ ಕೃತಕ ಗರ್ಭಧಾರಣ ಕೇಂದ್ರ ಪ್ರಶಸ್ತಿ ಲಭಿಸಿದೆ.

ಜಿಲ್ಲೆಯಲ್ಲಿ ಹಾಲು ಉತ್ಪಾದನೆಯಲ್ಲಿ ಹಿರಿಯೂರು ಎರಡನೇ ಸ್ಥಾನ ಪಡೆದಿದೆ. ಕಳೆದ ವರ್ಷವೂ ಸಹ ಹಿರಿಯೂರು ತಾಲ್ಲೂಕಿಗೆ ಪ್ರಶಸ್ತಿಗಳು ಬಂದಿದ್ದವು. ಈ ವರ್ಷವೂ ಸಹ ಪ್ರಶಸ್ತಿಗೆ ಸಂಘಗಳು ಪಾತ್ರವಾಗಿವೆ. ಗುರುವಾರ ಶಿವಮೊಗ್ಗದ ಫೆಸೆಟ್ ಕಾಲೇಜು ಸಭಾಂಗಣದಲ್ಲಿ ನಡೆದ ವಾರ್ಷಿಕ ಮಹಾಸಭೆ ಕಾರ್ಯಕ್ರಮದಲ್ಲಿ ಹಿರಿಯೂರಿನ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರುಗಳಿಗೆ ಪ್ರಶಸ್ತಿ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಶಿಮುಲ್ ಅಧ್ಯಕ್ಷ ಹೆಚ್.ಎನ್. ವಿದ್ಯಾಧರ್, ಉಪಾಧ್ಯಕ್ಷ ಚೇತನ್ ನಾಡೀಗರ್, ಡಿಸಿಸಿ ಬ್ಯಾಂಕ್ ಅಧ್ಯಕ್ಷರು ಹಾಗೂ ಶಿಮುಲ್ ನಿರ್ದೇಶಕ ಮಂಜುನಾಥ್ ಗೌಡ, ವ್ಯವಸ್ಥಾಪಕ ನಿರ್ದೇಶಕರಾದ ಎಸ್.ಜಿ. ಶೇಖರ್, ಆಡಳಿತ ಮಂಡಳಿ ನಿರ್ದೇಶಕರಾದ ಬಿಸಿ. ಸಂಜೀವಮೂರ್ತಿ, ಬಿಆರ್. ರವಿಕುಮಾರ್, ಜಿಬಿ. ಶೇಖರ್ ಸೇರಿದಂತೆ ಮತ್ತಿತರರು ಇದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now