ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188
ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 14 : ತಾಲೂಕಿನ ಕಲ್ಕುಂಟೆ ಗ್ರಾಮದ ಸಮೀಪದ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಇಂದು(ಮಂಗಳವಾರ, ಏಪ್ರಿಲ್.14) ಬೆಳಗ್ಗೆ ಸುಮಾರು 3 ಗಂಟೆ ವೇಳೆಗೆ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಎರಡು ಲಾರಿಗಳ ನಡುವೆ ನಡೆದ ಈ ದುರ್ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಚಿತ್ರದುರ್ಗ ಕಡೆಯಿಂದ ದಾವಣಗೆರೆ ಕಡೆಗೆ ಹೋಗುತ್ತಿದ್ದ ಲಾರಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ದಾಟಿ ದಾವಣಗೆರೆಯಿಂದ ಚಿತ್ರದುರ್ಗಕ್ಕೆ ಬರುತ್ತಿದ್ದ ಮತ್ತೊಂದು ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಲಾರಿಗಳಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಇಬ್ಬರು ತೀವ್ರ ಗಾಯಗೊಂಡಿದ್ದಾರೆ.
ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದ್ದು, ಮಾಹಿತಿ ತಿಳಿದ ಕೂಡಲೇ ಭರಮಸಾಗರ ಪೊಲೀಸರು ಅಪಘಾತ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದಾರೆ. ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.








