Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ತೀರ್ಥಹಳ್ಳಿಯಲ್ಲಿ ಒಂದೇ ಕುಟುಂಬದ ಮೂವರು ಸಜೀವ ದಹನ : ಆಕಸ್ಮಿಕವೋ..? ಆತ್ಮಹತ್ಯೆಯೋ..?

---Advertisement---

 

 

ಶಿವಮೊಗ್ಗ: ಇಂದು ಬೆಳ್ಳಂಬೆಳಗ್ಗೆ ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ, ಒಂದೇ ಕುಟುಂಬದ ಮೂವರು ಸಜೀವ ದಹನವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಸಮೀಪದ ಅರಳಸುರುಳಿಯ ಕೆಕೊಡ್ ನಲ್ಲಿ ನಡೆದಿದೆ. ಗಂಡ – ಹೆಂಡತಿ, ಒಬ್ಬ ಮಗ ಸಾವನ್ನಪ್ಪಿದ್ದು, ಒಬ್ಬ ಮಗ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತಪಟ್ಟ ರಾಘವೇಂದ್ರ ಕೆಕೊಡ್ ಕುಟುಂಬ ಅರ್ಚಕ ವೃತ್ತಿಯನ್ನು ನಡೆಸುತ್ತಿತ್ತು. ಮನೆಯಲ್ಲಿ ಇದ್ದಕ್ಕಿದ್ದ ಹಾಗೇ ಬೆಂಕಿ ಹೊತ್ತುಕೊಂಡಿದ್ದು, 65 ವರ್ಷದ ರಾಘವೇಂದ್ರ, 55 ವರ್ಷದ ನಾಗರತ್ನಾ, ಹಿರಿಯ ಮಗ 30 ವರ್ಷದ ಶ್ರೀರಾಮ ಸಾವನ್ನಪ್ಪಿದ್ದಾರೆ. 28 ವರ್ಷದ ಮಗನಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮನೆಯ ಒಳಗೆ ಕಟ್ಟಿಗೆಗಳನ್ನು ಇಟ್ಟುಕೊಂಡಿದ್ದರು. ಈ ಕಟ್ಟಿಗೆಗೆ ಬೆಂಕಿ ತಾಕಿ ಈ ದುರ್ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಬೆಂಕಿ ಹೊತ್ತುಕೊಂಡಿದ್ದನ್ನು ಗಮನಿಸಿದ ಗ್ರಾಮಸ್ಥರು, ತಕ್ಷಣ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿದ್ದಾರೆ. ಸದ್ಯ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಸ್ಥಳೀಯರು ಕೂಡ ಒಳಗಿದ್ದವರು ಹೊರ ತರಲು ಸಹಾಯ ಮಾಡಿದ್ದಾರೆ.

ಇನ್ನು ಈ ಸಾವಿನ ಸುತ್ತ ಹಲವು ಅನುಮಾನದ ಹುತ್ತ ಬೆಳೆದಿದೆ. ಕೌಟುಂಬಿಕ ಸಮಸ್ಯೆ ಕೂಡ ಇತ್ತು ಎನ್ನಲಾಗುತ್ತಿದೆ. ಹೀಗಾಗಿ ಇದು ಆತ್ಮಹತ್ಯೆಯೋ, ಆಕಸ್ಮಿಕವೋ ಎಂಬ ಅನುಮಾನ ಉಂಟಾಗಿದೆ. ಸದ್ಯ ಶಿವಮೊಗ್ಗ ಎಸ್ಪಿ ಜಿಕೆ ಮಿಥುನ್ ಕುಮಾರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರಿಂದ ಮಾಹಿತಿಯನ್ನು ಪಡೆಯುತ್ತಿದ್ದಾರೆ. ಮಾಜಿ ಸಚಿವ ಆರಗ ಜ್ಞಾನೇಂದ್ರ ಅವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment