Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಿವಮೊಗ್ಗದಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ..!

---Advertisement---

 

 

ಶಿವಮೊಗ್ಗ: ಒಂದೇ ಕುಟುಂಬದಲ್ಲಿ ಮೂವರು ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಶಿವಮೊಗ್ಗ ನಗರದ ಕ್ಲಾರ್ಕ್ ಪೇಟೆಯಲ್ಲಿ ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಭುವನೇಶ್ವರಿ, ಮಾರುತಿ ಹಾಗೂ ದರ್ಶನ್ ಮೃತರಾಗಿದ್ದಾರೆ. ಕೌಟುಂಬಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ಯವಾಗಿದೆ.

ಶಿವಮೊಗ್ಗದ ಒಟಿ ರಸ್ತೆಯ ವಿಜಯ ಗ್ಯಾರೇಜ್ ಬಳಿ ಭುವನೇಶ್ವರಿ ಅವರ ಮನೆ ಇದೆ. ಮನೆಯಲ್ಲಿಯೇ ನಿನ್ನೆ ಸೋಮವಾರ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆದರೆ ಈ ವಿಚಾರ ಯಾರಿಗೂ ಗೊತ್ತಾಗಿಲ್ಲ. ಮೃತರಿಗೆ ಸಂಬಂಧಿಕರು ಸಾಕಷ್ಟು ಸಲ ಕರೆ ಮಾಡಿದ್ದಾರೆ. ಆದರೂ ಯಾರೂ ಕರೆ ಸ್ವೀಕರಿಸಿಲ್ಲ. ಗಾಬರಿಯಾಗಿ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಭುವನೇಶ್ವರಿ ಅವರ ಜೊತೆಗೆ ಅವರ ತಮ್ಮ ಮಾರುತಿ ಹಾಗೂ ಮಗ ದರ್ಶನ್ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸದ್ಯ ಮೂವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಶಿವಮೊಗ್ಗದ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment