Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮುಂಬೈನಲ್ಲಿ ಭಾರಿ ಮಳೆಗೆ ಮೂರು ಅಂತಸ್ತಿನ ಕಟ್ಟಡ ಕುಸಿತ; 5 ಮಕ್ಕಳು ಸೇರಿ ಆರು ಮಂದಿ ದುರ್ಮರಣ!

---Advertisement---

ಮುಂಬೈ.ಜುಲೈ.06: ಮಹಾರಾಷ್ಟ್ರದ ಮುಂಬೈನಲ್ಲಿ ಸುರಿಯುತ್ತಿರುವ ಭಾರಿ ಮಳೆಯ ನಡುವೆಯೇ ಭಾನುವಾರ (ಜುಲೈ 5) ರಾತ್ರಿ ಮಂಖುರ್ದ್ ಪ್ರದೇಶದಲ್ಲಿ ಮೂರು ಅಂತಸ್ತಿನ ಚಾಲ್ನ ಮನೆಗಳು ಕುಸಿದು ಬಿದ್ದಿದ್ದು, ಘಟನೆಯಲ್ಲಿ ಐದು ಮಕ್ಕಳು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ.

ಮುಂಬೈನ ಜನತಾ ನಗರ ಚಾಲ್ನಲ್ಲಿ ಭಾನುವಾರ ರಾತ್ರಿ ಸುಮಾರು 8:30ರ ವೇಳೆಗೆ ಈ ದುರಂತ ಸಂಭವಿಸಿದೆ. ಮೂರು ಅಂತಸ್ತಿನ ಕಟ್ಟಡದ ಎರಡು-ಮೂರು ಮನೆಗಳು ಹಠಾತ್ತನೆ ಕುಸಿದು ಬಿದ್ದಿವೆ ಎಂದು ಬೃಹನ್ಮುಂಬೈ ಮಹಾನಗರ ಪಾಲಿಕೆ (BMC) ಅಧಿಕಾರಿಗಳು ತಿಳಿಸಿದ್ದಾರೆ.

ದುರಂತದ ಸುದ್ದಿ ತಿಳಿಯುತ್ತಿದ್ದಂತೆಯೇ ಮುಂಬೈ ಅಗ್ನಿಶಾಮಕ ದಳ, ಪೊಲೀಸ್ ಸಿಬ್ಬಂದಿ, ಬಿಎಂಸಿ ವಾರ್ಡ್ ಸಿಬ್ಬಂದಿ ಮತ್ತು ಆಂಬ್ಯುಲೆನ್ಸ್ಗಳು ಸ್ಥಳಕ್ಕೆ ಧಾವಿಸಿದ್ದು, ತಕ್ಷಣವೇ ರಕ್ಷಣಾ ಕಾರ್ಯಾಚರಣೆ ಆರಂಭಿಸಿವೆ. ಅವಶೇಷಗಳಡಿ ಸಿಲುಕಿದ್ದ ಗಾಯಾಳುಗಳನ್ನು ರಕ್ಷಿಸಿ ಸ್ಥಳೀಯ ರಾಜಾವಾಡಿ ಮತ್ತು ಶತಾಬ್ದಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಆಸ್ಪತ್ರೆಯ ಮೂಲಗಳ ಪ್ರಕಾರ, ಶತಾಬ್ದಿ ಆಸ್ಪತ್ರೆಗೆ ಕರೆತಂದ ಐವರನ್ನು ಈಗಾಗಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ. ಮೃತರಲ್ಲಿ 32 ವರ್ಷದ ಮಹಿಳೆ ಹಾಗೂ 2 ರಿಂದ 14 ವರ್ಷದೊಳಗಿನ ನಾಲ್ಕು ಮಕ್ಕಳು ಸೇರಿದ್ದಾರೆ. ಇನ್ನು ರಾಜಾವಾಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 7 ವರ್ಷದ ಬಾಲಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಘಟನೆಯಲ್ಲಿ ಗಾಯಗೊಂಡಿರುವ 24 ವರ್ಷದ ಯುವಕನೊಬ್ಬನ ಪರಿಸ್ಥಿತಿ ಸದ್ಯ ಸ್ಥಿರವಾಗಿದೆ ಎಂದು ವರದಿಯಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now