ಚಿತ್ರದುರ್ಗದ ಮೂವರು ಯೋಗ ಶಿಕ್ಷಕರಿಗೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ
ಬೆಂಗಳೂರು, ಸೆಪ್ಟೆಂಬರ್, 04 : ಚಿತ್ರದುರ್ಗದ ಮೂವರು ಯೋಗ ಶಿಕ್ಷಕರಿಗೆ ಶಿಕ್ಷಕರ ದಿನಾಚರಣೆ ಅಂಗವಾಗಿ ರಾಜ್ಯ ಮಟ್ಟದ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ಬೆಂಗಳೂರಿನ ಪುಟ್ಟಣ್ಣಚೆಟ್ಟಿ ಪುರಭವನದಲ್ಲಿ (ಟೌನ್ ಹಾಲ್) ರೋಟರಿ ಬೆಂಗಳೂರು ಗ್ಲೋಬಲ್ ಯೋಗ, ರೋಟರಿ ಬೆಂಗಳೂರು ಕಲ್ಯಾಣ್ ಹಾಗೂ ಯೋಗ ಯುನಿವರ್ಸಿಟಿ ಆಫ್ ದಿ ಅಮೆರಿಕಾಸ್ ಇವರ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೂವರಿಗೂ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.
1) ಚಿತ್ರದುರ್ಗ ಜಿಲ್ಲಾ ಯೋಗಾಸನ ಕ್ರೀಡಾ ಸಾಂಸ್ಕೃತಿಕ ಸಂಸ್ಥೆಯ ಯೋಗಾಚಾರ್ಯ ಎಲ್.ಎಸ್.ಚಿನ್ಮಯಾನಂದ ಇವರಿಗೆ ಯೋಗ ಸಾಧನೆಗಾಗಿ ಜೀವಮಾನ ಶ್ರೇಷ್ಠ ಪ್ರಶಸ್ತಿ,ಯನ್ನು
2) ಮಲ್ಲಾಡಿಹಳ್ಳಿಯ ಯೋಗ ತರಬೇತುದಾರ ಸಂತೋಷ್ ಕುಮಾರ್ ಇವರಿಗೆ ಯೋಗ ರತ್ನ ಪ್ರಶಸ್ತಿಯನ್ನು ಮತ್ತು
3) ಚಿನ್ಮಯ ಮಯೂರ ಯೋಗ ಕ್ರೀಡಾ ಸಾಂಸ್ಕೃತಿಕ ಸಂಸ್ಥೆಯ ಯೋಗ ಚಿಕಿತ್ಸಕ ಎಂ.ಬಿ ಮುರುಳಿ ಇವರಿಗೆ ಯೋಗ ಜ್ಯೋತಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಗೌರಿಗದ್ದೆ ಅವಧೂತ ವಿನಯ್ ಕುಮಾರ್ ಗುರೂಜಿ, ವಿದ್ಯಾ ವಾಚಸ್ಪತಿ ಅರಳು ಮಲ್ಲಿಗೆ ಪಾರ್ಥ ಸಾರಥಿ, ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರ ಸಚಿವ ಹೆಚ್.ಎಂ. ರೇವಣ್ಣ, ರೋಟರಿ ಬೆಂಗಳೂರು ಗ್ಲೋಬಲ್ ಯೋಗ ಅಧ್ಯಕ್ಷ ಯೋಗಿ ದೇವರಾಜ್ ಮುಂತಾದ ಗಣ್ಯರು ಉಪಸ್ಥಿತರಿದ್ದರು.






