Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಿಗ್ಗಾಂವಿಯಲ್ಲಿ ಬೊಮ್ಮಾಯಿ ಪುತ್ರನಿಗೆ ಟಿಕೆಟ್ : ಕಾಂಗ್ರೆಸ್ ನಿಂದ ಟಿಕೆಟ್ ಕೇಳಿದ ಲಾಯರ್ ಜಗದೀಶ್

---Advertisement---

ಶಿಗ್ಗಾಂವಿಯಲ್ಲಿ ಬೊಮ್ಮಾಯಿ ಪುತ್ರನಿಗೆ ಟಿಕೆಟ್ : ಕಾಂಗ್ರೆಸ್ ನಿಂದ ಟಿಕೆಟ್ ಕೇಳಿದ ಲಾಯರ್ ಜಗದೀಶ್

ಬಿಗ್ ಬಾಸ್ ನಿಂದ ಈಗಷ್ಟೇ ಮನೆಯಿಂದ ಹೊರ ಬಂದಿರುವ ಲಾಯರ್ ಜಗದೀಶ್ ರಾಜಕೀಯಕ್ಕೆ ಎಂಟ್ರಿಯಾಗುವ ಪ್ಲ್ಯಾನ್ ನಡೆಸುತ್ತಿದ್ದಾರೆ. ಶಿಗ್ಗಾಂವಿ, ಚನ್ನಪಟ್ಟಣ, ಸಂಡೂರು ಕ್ಷೇತ್ರಗಳಿಗೆ ಉಪಚುನಾವಣೆಯ ದಿನಾಂಕ ಅನೌನ್ಸ್ ಆಗಿದೆ. ಶಿಗ್ಗಾಂವಿಯಲ್ಲಿ ಬಸವರಾಜ್ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಇದೇ ಕ್ಷೇತ್ರದ ಮೇಲೆ ಲಾಯರ್ ಜಗದೀಶ್ ಕಣ್ಣಿಟ್ಟಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿಯುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಎರಡು ಕ್ಷೇತ್ರಗಳಿಗೂ ಟಿಕೆಟ್ ಅನೌನ್ಸ್ ಮಾಡಿದೆ. ಆದರೆ ಕಾಂಗ್ರೆಸ್ ಮಾತ್ರ ಯಾವ ಕ್ಷೇತ್ರಗಳಿಗೂ ಅನೌನ್ಸ್ ಮಾಡಿಲ್ಲ. ಹೀಗಾಗಿ ಶಿಗ್ಗಾಂವಿ ಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್ ನೀಡಿದರೆ ಭರತ್ ವಿರುದ್ಧ ಸ್ಪರ್ಧೆಗೆ ಸಿದ್ದ ಎಂದು ಲಾಯರ್ ಜಗದೀಶ್ ಹೇಳಿದ್ದಾರೆ. ‘ನನಗೆ ಕಾಂಗ್ರೆಸ್ ಹೈಕಮಾಂಡ್ ಯಾರೂ ಗೊತ್ತಿಲ್ಲ. ಅಕಾಸ್ಮಾತ್ ಕಾಂಗ್ರೆಸ್ ನನಗೆ ಟಿಕೆಟ್ ಕೊಟ್ಟರೆ ಸ್ಪರ್ಧಿಸುತ್ತೇನೆ. ಜನರ ಸೇವೆ ಮಾಡುವುದಕ್ಕೆ ಯಾವ ಕೆಲಸ ಕೊಟ್ಟರು ಮಾಡುತ್ತೇನೆ. ಕಾಂಗ್ರೆಸ್ ಹೈಕಮಾಂಡ್ ಕರೆದು ಕೆಲಸ ಕೊಟ್ಟರೆ ಅದನ್ನು ನಾನು ನಿರ್ವಹಿಸುತ್ತೇನೆ ‘ ಎಂದಿದ್ದಾರೆ.

ಬಿಗ್ ಬಾಸ್ ಸೀಸನ್ 11ರಿಂದ ಮಧ್ಯದಲ್ಲಿಯೇ ಹೊರ ಬಂದಿದ್ದಾರೆ ಜಗದೀಶ್. ಮನೆಯೊಳಗಿನ ಹೆಣ್ಣು ಮಕ್ಕಳ ನಡುವೆ ಅವಾಚ್ಯ ಶಬ್ದಗಳಿಂದ ಮಾತನಾಡುತ್ತಿದ್ದರು ಎಂಬ ಕಾರಣಕ್ಕೆ ಬಿಗ್ ಬಾಸ್ ಅವರನ್ನು ಹೊರ ಹಾಕಿದೆ. ಮತ್ತೆ ವಾಪಾಸ್ ಬಿಗ್ ಬಾಸ್ ಗೆ ಹೋಗಬಹುದು ಎಂಬ ಊಹೆ ಇತ್ತು. ಆದರೆ ಹೀಗೆ ರಾಜಕೀಯ ಪ್ರವೇಶಕ್ಕೂ ಆಸಕ್ತಿ ತೋರುತ್ತಿರುವುದನ್ನು ಗಮನಿಸಿದರೆ ಜಗದೀಶ್ ಬಿಗ್ ಬಾಸ್ ಗೆ ವಾಪಾಸ್ ಹೋಗುವುದು ಅನುಮಾನ ಎನ್ನಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment