ಬೆಂಗಳೂರು: ವರ್ತೂರು ಸಂತೋಷ್ ತಮ್ಮ ಕೊರಳಲ್ಲಿ ಹುಲಿ ಉಗುರಿನ ಲಾಕೆಟ್ ಧರಿಸಿದ್ದರು. ಈ ಸಂಬಂಧ ಅವರನ್ನು ಬಂಧಿಸಲಾಗಿದೆ. ಇದಾದ ಬಳಿಕ ಸಾಕಷ್ಟು ಪ್ರಕರಣಗಳು ಬೆಳಕಿಗೆ ಬಂದವು. ಹುಲಿ ಉಗುರು ಧರಿಸಿದ್ದ ಸೆಲೆಬ್ರೆಟಿಗಳ ಮನೆಯನ್ನು ಅರಣ್ಯಾಧಿಕಾರಿಗಳು ಪರಿಶೀಲನೆ ಮಾಡುವುದಕ್ಕೆ ಶುರು ಮಾಡಿದರು. ಅದರಲ್ಲಿ ನಟ ಜಗ್ಗೇಶ್ ಅವರ ಮನೆಯನ್ನು ಪರಿಶೀಲನೆ ಮಾಡಲಾಯಿತು. ಜಗ್ಗೇಶ್ ಅವರೇ ಆ ಲಾಕೆಟ್ ಅನ್ನು ಅರಣ್ಯಾಧಿಕಾರಿಗಳಿಗೆ ನೀಡಿದ್ದಾರೆ.
ಆ ಲಾಕೆಟ್ ಪರಿಶೀಲಿಸಲು ಅರಣ್ಯಾಧಿಕಾರಿಗಳು ಎಫ್ಎಸ್ಎಲ್ ಗೆ ಕಳುಹಿಸಲಿದ್ದಾರೆ. ಇದರ ಬೆನ್ನಲ್ಲೇ ನಟ ಜಗ್ಗೇಶ್ ಹೈಕೋರ್ಟ್ ಮೊರೆ ಹೋಗಿದ್ದಾರೆ. ಅಧಿಕಾರಿಗಳ ವಿರುದ್ಧವೇ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಅಧಿಕಾರಿಗಳು ನೋಟೀಸ್ ನೀಡದೆ ಮನೆಯಲ್ಲಿ ಶೋಧ ನಡೆಸಿದ್ದಾರೆ. ಮನೆಯೆನ್ನೆಲ್ಲಾ ಚೆಲ್ಲಾಪಿಲ್ಲಿ ಮಾಡಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನ ಮಾತುಗಳನ್ನೇ ಆಧರಿಸಿ, ತೇಜೋವಧೆ ಮಾಡಲಾಗಿದೆ. ಅರಣ್ಯಾಧಿಕಾರಿಗಳ ಕ್ರಮ ಕಾನೂನು ಬಾಹಿರವೆಂದು ಘೋಷಣೆ ಮಾಡಬೇಕು ಎಂದು ಜಗ್ಗೇಶ್ ಪರ ವಕೀಲರು ಮನವಿ ಮಾಡಿದ್ದಾರೆ.
‘ನನಗೆ 61 ಮುಂದೆ 100 ಆದರು ನನ್ನ ಅಮ್ಮ ನನ್ನ ದೇವರು,ನಾನು ಏನು ಕಳೆದುಕೊಂಡರು ಸಂಕಟಪಡೋಲ್ಲಾ ಆದರೆ ನನ್ನ ಅಮ್ಮನ ಕಡೆಪ್ರೀತಿ ಕಳೆದುಕೊಂಡದ್ದು ಶೂನ್ಯದಂತೆ ಆಯಿತು..ತಂದೆತಾಯಿ ಹೃದಯದಲ್ಲಿ ಇರಿಸಿಕೊಂಡ ನನಗೆ ತಂದೆತಾಯಿ ಅನಾಥಶ್ರಮಕ್ಕೆ ಅಟ್ಟುವ ಈ ಕಾಲದ ಕಾಲಜ್ನಾನಿಗಳಿಗೆ ಪ್ರೀತಿ ಅರಿವಾಗದು.
ದೇವರಿದ್ದಾನೆ ಉತ್ತರಿಸಲು ಕಾಲಬರುತ್ತದೆ ನಿಮಗು’ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…