Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಯಡಿಯೂರಪ್ಪ ಅವರ ಕನಸಿನ ಯೋಜನೆ ಹೆಣ್ಣುಮಕ್ಕಳ ಕೈ ಸೇರುವ ಸಮಯ..!

---Advertisement---

ಬೆಂಗಳೂರು: ಈ ಹಿಂದೆ ಬಿಎಸ್ ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಭಾಗ್ಯಲಕ್ಷ್ಮೀ ಯೋಜನೆಯನ್ನು ಜಾರಿಗೆ ತಂದಿದ್ದರು. ಹುಟ್ಟಿದ ಮಗುವಿನ ಹೆಸರಿಗೆ ಹಣ ಡೆಪಾಸಿಟ್ ಮಾಡಿಸುವ ಯೋಜನೆ. ಇದೀಗ ಆ ಯೋಜನೆ ಮೆಚ್ಯುರಿಟಿ ಆಗುವ ಸಮಯ ಬಂದಿದೆ. ಅರ್ಹ ಹೆಣ್ಣು ಮಕ್ಕಳಿಗೆ ಆ ಯೋಜನೆಯ ಹಣ ಕೈ ಸೇರಲಿದೆ. ಈ ಬಗ್ಗೆ ಯಡಿಯೂರಪ್ಪ ಅವರು ಟ್ವೀಟ್ ಕೂಡ ಮಾಡಿದ್ದಾರೆ.

‘ಕುಟುಂಬದಲ್ಲಿ ಮತ್ತು ಸಮಾಜದಲ್ಲಿ ಹೆಣ್ಣುಮಗುವಿನ ಸ್ಥಾನ ಹೆಚ್ಚಿಸಲು ಹಾಗೂ ಬಡತನದ ರೇಖೆಗಿಂತ ಕೆಳಗಿರುವ ಕುಟುಂಬಗಳಲ್ಲಿ ಹೆಣ್ಣುಮಕ್ಕಳ ಜನನವನ್ನು ಉತ್ತೇಜಿಸಲು 2006-07ನೇ ಸಾಲಿನಲ್ಲಿ, ದೇಶದಲ್ಲೇ ಮೊದಲ ಬಾರಿಗೆ, ಹೆಣ್ಣು ಮಕ್ಕಳ ರಕ್ಷಣೆಗಾಗಿ “ಭಾಗ್ಯಲಕ್ಷ್ಮಿ” ಎಂಬ ಹೊಸ ಯೋಜನೆಯನ್ನು ಜಾರಿಗೆ ತಂದದ್ದು ನನ್ನ ರಾಜಕೀಯ ಜೀವನದ ಒಂದು ಸಂತೃಪ್ತಿಯ ಮೈಲಿಗಲ್ಲು. ಈ ಮಹತ್ವದ, ದೂರದೃಷ್ಟಿ ಯೋಜನೆಯ ಆರಂಭಿಕ ವರ್ಷದಲ್ಲಿ ನೋಂದಾಯಿಸಿದ್ದ ಸುಮಾರು 2.30 ಲಕ್ಷ ಫಲಾನುಭವಿಗಳು ಶೀಘ್ರದಲ್ಲಿ ಪರಿಪಕ್ವ ಮೊತ್ತ ಪಡೆಯಲಿರುವುದು ಅತ್ಯಂತ ಸಂತಸದ ಸಂಗತಿ. ಲಕ್ಷಾಂತರ ಬಡ ಹೆಣ್ಣುಮಕ್ಕಳ ಜೀವನವನ್ನು ಬೆಳಗುವ ಈ ಸಾರ್ಥಕ ಯೋಜನೆಯನ್ನು ರಾಜ್ಯ ಸರ್ಕಾರ ಮುಂದುವರಿಸಿಕೊಂಡು ಹೋಗಲಿ, ಬಡ ಹೆಣ್ಣುಮಕ್ಕಳ ಆತ್ಮಸ್ಥೈರ್ಯವನ್ನು ಹೆಚ್ಚಿಸುವ ತನ್ನ ಕರ್ತವ್ಯ ನಿರ್ವಹಿಸಲಿ ಎಂದು ಈ ಸಂದರ್ಭದಲ್ಲಿ ಒತ್ತಾಯಿಸುತ್ತೇನೆ’ ಎಂದು ಟ್ವೀಟ್ ಮಾಡಿದ್ದಾರೆ.

 

2006-2007ರಲ್ಲಿ ಈ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಹೆಣ್ಣು ಮಕ್ಕಳ ಭವಿಷ್ಯದ ಹಿತ ದೃಷ್ಟಿಯಿಂದ ಈ ಯೋಜನೆಯನ್ನು ಜಾರಿಗೆ ತಂದಿದ್ದರು. ಇದೀಗ ಮೊದಲ ಹಂತದಲ್ಲಿ ನೋಂಣಿಯಾದವರಿಗೆ ಈಗ ಹಣ ಸಿಗಲಿದೆ. 2.30 ಲಕ್ಷ ಮಂದಿ ಈ ಯೋಜನೆಯ ಫಲಾನುಭವಿಗಳಾಗಿದ್ದಾರೆ. ರಾಜ್ಯ ಸರ್ಕಾರವೂ ಈ ಯೋಜನೆಯನ್ನು ಅಂಚೆ ಕಚೇರಿಗೆ ವರ್ಗಾವಣೆ ಮಾಡಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...