ಬೆಂಗಳೂರು: ನಾಡಗೀತೆಯ ವಿಚಾರಕ್ಕೆ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಜಯ ಭಾರತ ಜನನಿಯ ತನುಜಾತೆ ಎಂದು ಆರಂಭವಾಗುವ ನಾಡಗೀತೆಯನ್ನು ಎಷ್ಟು ನಿಮಿಷದ ತನಕ ಹೇಳಬೇಕು ಎಂಬ ಗೊಂದಲ ಹಾಗೆಯೇ ಇತ್ತು. ಇದೀಗ ರಾಜ್ಯ ಸರ್ಕಾರ ನಾಡಗೀತೆಗೆ ಕಾಲಮಿತಿ ನಿಗದಿ ಮಾಡಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್, ಕುವೆಂಪು ವಿರಚಿತ ನಾಡಗೀತೆ”ಜಯಭಾರತ ಜನನಿಯ ತನುಜಾತೆ” ಗೆ ದಾಟಿ ಹಾಗೂ ಕಾಲಮಿತಿಯನ್ನು ನಿಗದಿ ಮಾಡಲಾಗಿದೆ ಎಂಬುದನ್ನು ತಿಳಿಸಲು ಹರ್ಷವೆನಿಸುತ್ತಿದೆ. ಎಸ್.ಆರ್.ಲೀಲಾವತಿ ಅಧ್ಯಕ್ಷತೆಯ ಸಮಿತಿ ಶಿಫಾರಸು ಮಾಡಿದ ಪ್ರಕಾರ ಮೈಸೂರು ಅನಂತಸ್ವಾಮಿ ರಾಗಸಂಯೋಜನೆಯಲ್ಲಿ ಇನ್ನು ಎರಡು ನಿಮಿಷ ಮೂವತ್ತು ಸೆಕೆಂಡ್ ನಲ್ಲಿ ನಾಡಗೀತೆಯನ್ನು ಹಾಡಲಾಗುತ್ತದೆ ಎಂದಿದ್ದಾರೆ.