ಟಿಪ್ಪು ಎಕ್ಸ್‌ಪ್ರೆಸ್ ರೈಲು ಇನ್ನು ಮುಂದೆ ಒಡೆಯರ್ ಎಕ್ಸ್‌ಪ್ರೆಸ್ ಆಗಿ ಮರುನಾಮಕರಣ

1 Min Read

ಮೈಸೂರು: ನೈಋತ್ಯ ರೈಲ್ವೆ (SWR), ಹುಬ್ಬಳ್ಳಿ ಮೈಸೂರು-ಬೆಂಗಳೂರು ಟಿಪ್ಪು ಎಕ್ಸ್‌ಪ್ರೆಸ್ ರೈಲಿಗೆ ಒಡೆಯರ್ ಎಕ್ಸ್‌ಪ್ರೆಸ್ ಮತ್ತು ತಾಳಗುಪ್ಪ-ಮೈಸೂರು ಎಕ್ಸ್‌ಪ್ರೆಸ್ ರೈಲಿಗೆ ಕುವೆಂಪು ಎಕ್ಸ್‌ಪ್ರೆಸ್ ಎಂದು ಮರುನಾಮಕರಣ ಮಾಡಿ‌ ರೈಲ್ವೆ ಇಲಾಖೆ ಆದೇಶಿಸಿದೆ.

ಅಕ್ಟೋಬರ್ 7 ರಂದು, ಜನರಲ್ ಮ್ಯಾನೇಜರ್, ಎಸ್‌ಡಬ್ಲ್ಯೂಆರ್, ಹುಬ್ಬಳ್ಳಿ ಅವರ ಕಚೇರಿಯಿಂದ ಅಧಿಸೂಚನೆಯಲ್ಲಿ, ಕೇಂದ್ರ ರೈಲ್ವೆ ಸಚಿವಾಲಯದ ಆದೇಶದಂತೆ  ಎರಡು ಮಾರ್ಗಗಳ ರೈಲುಗಳಿಗೆ ಮರುನಾಮಕರಣ ಮಾಡಲಾಗಿದೆ.

ರೈಲು ಸಂಖ್ಯೆ 12613/12614 ಮೈಸೂರು-ಬೆಂಗಳೂರು ಟಿಪ್ಪು ಎಕ್ಸ್‌ಪ್ರೆಸ್ ಅನ್ನು ಒಡೆಯರ್ ಎಕ್ಸ್‌ಪ್ರೆಸ್ ಮತ್ತು

16221/16222 ತಾಳಗುಪ್ಪ-ಮೈಸೂರು ಎಕ್ಸ್‌ಪ್ರೆಸ್ ಅನ್ನು ಕುವೆಂಪು ಎಕ್ಸ್‌ಪ್ರೆಸ್ ಎಂದು ಮರುನಾಮಕರಣ ಮಾಡಲಾಗಿದೆ.

ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರು ಜುಲೈ ತಿಂಗಳಿನಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಸಲ್ಲಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *