ಸುದ್ದಿಒನ್, ಹಿರಿಯೂರು, ಆಗಸ್ಟ್. 14 : ನಗರಸಭೆ ಆಡಳಿತ ವತಿಯಿಂದ 2025 ಹಾಗೂ 2026ನೇ ಸಾಲಿನ ಹರ್ ಘರ್ ತಿರಂಗಾ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಬೈಕ್ ರ್ಯಾಲಿ ಕಾರ್ಯಕ್ರಮಕ್ಕೆ ನಗರಸಭೆ ಅಧ್ಯಕ್ಷ ಆರ್. ಬಾಲಕೃಷ್ಣ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು ಪ್ರತಿ ಮನೆಗಳ ಮೇಲೆ ತ್ರಿವರ್ಣ ಧ್ವಜ ಹಾರಾಟ ಮಾಡಬೇಕು. ಸ್ವಾತಂತ್ರ್ಯದ ಇತಿಹಾಸವನ್ನು ನಾವೆಲ್ಲರೂ ಅರಿತುಕೊಳ್ಳಬೇಕು. ಬ್ರಿಟಿಷರ ವಿರುದ್ಧ ನಡೆದ ಹೋರಾಟಗಳು ಮುಂದಿನ ಪೀಳಿಗೆಗೆ ತಿಳಿಸಬೇಕಿದೆ ಎಂದರು.
ಪೌರಾಯುಕ್ತ ಎ ವಾಸೀಂ ಮಾತನಾಡಿ ಸ್ವಾತಂತ್ರ್ಯ ಹೋರಾಟದಲ್ಲಿ ಅನೇಕ ಮಹನೀಯರ ತ್ಯಾಗ, ಬಲಿದಾನದಿಂದ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿದೆ. ಅದರ ನೆನಪಿಗಾಗಿ ಹರ್ ಘರ್ ತಿರಂಗಾ ಅಭಿಯಾನ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ನಾಗರಿಕರಲ್ಲಿ ಆಳವಾದ ದೇಶಭಕ್ತಿ ಪ್ರತಿಜ್ಞೆಯನ್ನು ಹುಟ್ಟು ಹಾಕುವುದು ಮತ್ತು ರಾಷ್ಟ್ರೀಯತೆಯ ಮಹತ್ವದ ಬಗ್ಗೆ ಹೆಚ್ಚಿನ ತಿಳುವಳಿಕೆಯನ್ನು ಉತ್ತೇಜಿಸುವುದು ಇದರ ಉದ್ದೇಶವಾಗಿದೆ ಎಂದು ತಿಳಿಸಿದರು.
ನಗರದ ಪ್ರಮುಖ ಬೀದಿಗಳಲ್ಲಿ ತಿರಂಗಾ ಟಿ ಶರ್ಟ್ ಧರಿಸಿ, ತ್ರಿವರ್ಣ ಧ್ವಜ ಹಿಡಿದು ಮಾನವ ಸರಪಳಿ ನಿರ್ಮಿಸಿ, ಬೈಕ್ ರ್ಯಾಲಿ ಜಾಥಾ ಕಾರ್ಯಕ್ರಮ ನಡೆಸಲಾಯಿತು. ಬಳಿಕ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ನಗರಸಭೆ ಉಪಾಧ್ಯಕ್ಷೆ ಮಂಜುಳಾ, ಸ್ಥಾಯಿ ಅಧ್ಯಕ್ಷರುಗಳಾದ ಎಂಡಿ ಸಣ್ಣಪ್ಪ, ರತ್ನಮ್ಮ, ಮಮತಾ, ಶಿವಕುಮಾರ್ ಸೇರಿದಂತೆ ನಗರಸಭೆ ಸದಸ್ಯರು ಹಾಗೂ ಸಿಬ್ಬಂದಿಗಳು ಇದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















