ಬೆಂಗಳೂರು : ಈ ಅನುಮಾನ ಶುರುವಾಗಿದ್ದು ಇಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಕ್ಕೆ. ರಮೇಶ್ ಜಾರಕಿಹೊಳಿ ಮತ್ತು ಸಿದ್ದರಾಮಯ್ಯ ರಹಸ್ಯವಾಗಿ ಭೇಟಿಯಾಗಿದ್ದಾರೆ. ಇದು ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಸಮ್ಮಿಶ್ರ ಸರ್ಕಾರ ಉರುಳುವುದಕ್ಕೆ, ಬಿಜೆಪಿ ಸರ್ಕಾರ ರಚನೆಯಾಗುವುದಕ್ಕೆ ರಮೇಶ್ ಜಾರಕಿಹೊಳಿ ಕೂಡ ದೊಡ್ಡ ಪಾತ್ರ ವಹಿಸಿದ್ದರು. ಇದೀಗ ಇದ್ದಕ್ಕಿದ್ದ ಹಾಗೇ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಭೇಟಿ ಸಹಜವಾಗಿಯೇ ಕುತೂಹಲ ಮೂಡಿಸಿದೆ.
ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ಸಿಡಿ ಕೇಸ್ ನಿಂದಾಗಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೆ ಅದರಿಂದ ಕ್ಲೀನ್ ಚಿಟ್ ಸಿಕ್ಕರು ಕೂಡ ಮರಳಿ ಸಚಿವ ಸ್ಥಾನ ಸಿಗುತ್ತಿಲ್ಲ. ಸಚಿವ ಸ್ಥಾನಕ್ಕಾಗಿ ಪಡುತ್ತಿರುವ ಕಷ್ಟವೂ ಅಷ್ಟಿಷ್ಟಲ್ಲ. ಆದರೂ ಹೈಕಮಾಂಡ್ ನಿಂದ ನಿರೀಕ್ಷಿಸಿದ ಉತ್ತರವೇನು ಸಿಗುತ್ತಿಲ್ಲ. ಹೀಗಾಗಿ ಮರಳಿ ಕಾಂಗ್ರೆಸ್ ಸೇರುತ್ತಾರಾ ಎಂಬ ಅನುಮಾನ ಈ ಭೇಟಿಯಿಂದ ವ್ಯಕ್ತವಾಗಿದೆ.
ಸಿದ್ದರಾಮಯ್ಯ ಅವರ ಜೊತೆಗೆ ಸುಮಾರು 1 ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ. ಆದ್ರೆ ರಮೇಶ್ ಜಾರಕಿಹೊಳಿ ಮತ್ತೆ ಕಾಂಗ್ರೆಸ್ ಸೇರುವುದಕ್ಕೆ ಡಿಕೆ ಶಿವಕುಮಾರ್ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ವಿರೋಧ ಇದ್ದೆ ಇದೆ. ಹೀಗಾಗಿ ಮೊದಲೇ ಪ್ಲ್ಯಾನ್ ಮಾಡಿ ರಮೇಶ್ ಜಾರಕಿಹೊಳಿ, ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ ಎನ್ನಲಾಗುತ್ತಿದೆ.