Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಚಿವ ಸ್ಥಾನ ಸಿಗದೆ ಬೇಸತ್ತು ಕಾಂಗ್ರೆಸ್ ಗೆ ಮರಳುತ್ತಾರಾ ರಮೇಶ್ ಜಾರಕಿಹೊಳಿ..?

Facebook
Twitter
Telegram
WhatsApp

 

ಬೆಂಗಳೂರು :  ಈ ಅನುಮಾನ ಶುರುವಾಗಿದ್ದು ಇಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಕ್ಕೆ. ರಮೇಶ್ ಜಾರಕಿಹೊಳಿ ಮತ್ತು ಸಿದ್ದರಾಮಯ್ಯ ರಹಸ್ಯವಾಗಿ ಭೇಟಿಯಾಗಿದ್ದಾರೆ. ಇದು ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಸಮ್ಮಿಶ್ರ ಸರ್ಕಾರ ಉರುಳುವುದಕ್ಕೆ, ಬಿಜೆಪಿ ಸರ್ಕಾರ ರಚನೆಯಾಗುವುದಕ್ಕೆ ರಮೇಶ್ ಜಾರಕಿಹೊಳಿ ಕೂಡ ದೊಡ್ಡ ಪಾತ್ರ ವಹಿಸಿದ್ದರು. ಇದೀಗ ಇದ್ದಕ್ಕಿದ್ದ ಹಾಗೇ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಭೇಟಿ ಸಹಜವಾಗಿಯೇ ಕುತೂಹಲ ಮೂಡಿಸಿದೆ.

ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ಸಿಡಿ ಕೇಸ್ ನಿಂದಾಗಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೆ ಅದರಿಂದ ಕ್ಲೀನ್ ಚಿಟ್ ಸಿಕ್ಕರು ಕೂಡ ಮರಳಿ ಸಚಿವ ಸ್ಥಾನ ಸಿಗುತ್ತಿಲ್ಲ. ಸಚಿವ ಸ್ಥಾನಕ್ಕಾಗಿ ಪಡುತ್ತಿರುವ ಕಷ್ಟವೂ ಅಷ್ಟಿಷ್ಟಲ್ಲ. ಆದರೂ ಹೈಕಮಾಂಡ್ ನಿಂದ ನಿರೀಕ್ಷಿಸಿದ ಉತ್ತರವೇನು ಸಿಗುತ್ತಿಲ್ಲ. ಹೀಗಾಗಿ ಮರಳಿ ಕಾಂಗ್ರೆಸ್ ಸೇರುತ್ತಾರಾ ಎಂಬ ಅನುಮಾನ ಈ ಭೇಟಿಯಿಂದ ವ್ಯಕ್ತವಾಗಿದೆ.

ಸಿದ್ದರಾಮಯ್ಯ ಅವರ ಜೊತೆಗೆ ಸುಮಾರು 1 ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ. ಆದ್ರೆ ರಮೇಶ್ ಜಾರಕಿಹೊಳಿ ಮತ್ತೆ ಕಾಂಗ್ರೆಸ್ ಸೇರುವುದಕ್ಕೆ ಡಿಕೆ ಶಿವಕುಮಾರ್ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ವಿರೋಧ ಇದ್ದೆ ಇದೆ. ಹೀಗಾಗಿ ಮೊದಲೇ ಪ್ಲ್ಯಾನ್ ಮಾಡಿ ರಮೇಶ್ ಜಾರಕಿಹೊಳಿ, ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ ಎನ್ನಲಾಗುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕನ್ನಡದ ಹಿರಿಯ ನಟ ದ್ವಾರಕೀಶ್ ನಿಧನ : ಗಣ್ಯರಿಂದ ಸಂತಾಪ

ಬೆಂಗಳೂರು, ಏಪ್ರಿಲ್. 16 : ಕನ್ನಡದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ನಿಧನರಾಗಿದ್ದಾರೆ. 81 ವರ್ಷದ ದ್ವಾರಕೀಶ್ ಅವರು, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ದ್ವಾರಕೀಶ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ

ಬೇಸಿಗೆಯಲ್ಲಿ ಮೊಟ್ಟೆ ತಿಂದರೆ ಏನಾಗುತ್ತೆ ಗೊತ್ತಾ ?

ಸುದ್ದಿಒನ್ : ಮೊಟ್ಟೆ ಆರೋಗ್ಯಕ್ಕೆ ಒಳ್ಳೆಯದು ಎನ್ನುತ್ತಾರೆ. ಮೊಟ್ಟೆ ಸೇವನೆ ಆರೋಗ್ಯಕ್ಕೆ ತುಂಬಾ ಉಪಯುಕ್ತ ಎಂದು ಹೇಳುತ್ತಾರೆ. ಮೊಟ್ಟೆಗಳಲ್ಲಿ ವಿಟಮಿನ್ ಎ, ವಿಟಮಿನ್ ಬಿ12, ವಿಟಮಿನ್ ಡಿ, ಪ್ರೊಟೀನ್, ಕ್ಯಾಲ್ಸಿಯಂ, ಸತು, ಫೋಲೇಟ್ ಮತ್ತು

ಶ್ರೀರಾಮನವಮಿಯಂದು 40 ಲಕ್ಷ ಭಕ್ತರು : ಮದುವಣಗಿತ್ತಿಯಂತೆ ಸಿಂಗಾರಗೊಂಡ ಅಯೋಧ್ಯಾ

ಸುದ್ದಿಒನ್ : 500 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಅಯೋಧ್ಯೆಯ ರಾಮಮಂದಿರದಲ್ಲಿ ಶ್ರೀರಾಮ ನವಮಿ ಆಚರಣೆ ನಡೆಯುತ್ತಿದೆ. ಅಯೋಧ್ಯೆ ರಾಮಮಂದಿರ ನಿರ್ಮಾಣದ ನಂತರ ಪ್ರಥಮ ಬಾರಿಗೆ ನಡೆಯುತ್ತಿರುವ ಶ್ರೀರಾಮ ಕಲ್ಯಾಣ ಮಹೋತ್ಸವವನ್ನು ಆಯೋಜಿಸಲು

error: Content is protected !!