ಬೆಂಗಳೂರು: ಮಕ್ಕಳ ಭವಿಷ್ಯ ಉದ್ದಾರ ಆಗಬೇಕು ಅಂದ್ರೆ ಬುನಾದಿಯಿಂದಾನೂ ಶಿಕ್ಷಣ ಚೆನ್ನಾಗಿ ಇರಲೇಬೇಕಾಗುತ್ತದೆ. ಅದುವೆ ಅಂಗನವಾಡಿಯಿಂದಾನೇ ಈ ಕೆಲಸವಾಗಬೇಕಾಗುತ್ತದೆ. ಅದಕ್ಕೆ ತಕ್ಕಂತೆ ಇದೀಗ ಅಂಗನವಾಡಿಯ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಹೋಗುವವರು ಈ ಶಿಕ್ಷಣವನ್ನು ಪಡೆದುಕೊಳ್ಳಲೇಬೇಕಾದ ಅನಿವಾರ್ಯತೆ ಇದೆ.
ಇದೀಗ ಅದಕ್ಕೆ ಸಂಬಂಧಿಸಿದಂತೆ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಪಿಯು ಹಾಗೂ ಎಸ್ಎಸ್ಎಲ್ಸಿ ಮಾಡಿರಲೇಬೇಕಾಗುತ್ತದೆ. ಪ್ರಾಥಮಿಕ ಹಂತದಲ್ಲಿಯೇ ಮಕ್ಕಳ ಕಲಿಕೆಯ ಗುಣಮಟ್ಟವನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಈ ಅರ್ಹತೆಯನ್ನು ನಿಗದಿ ಮಾಡಲಾಗಿದೆ.
NEP ಅನುಸಾರ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸುವುದಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಈ ನಿರ್ಧಾರ ಕೈಗೊಂಡಿದೆ. ಸರ್ಕಾರದ ಅಂಗೀಕೃತ ಸಂಸ್ಥೆಗಳಲ್ಲಿ ಇಸಿಸಿಇ ಡಿಪ್ಲೋಮಾ, ಜೆಒಸಿ, ಎನ್ ಟಿಟಿ ಸೇರಿದಂತೆ ಇನ್ನಿತರೆ ಶೈಕ್ಷಣಿಕ ತರಬೇತಿ ಪಡೆದವರಿಗೆ ಅವಕಾಶ ನೀಡಲಾಗುತ್ತದೆ.