Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯೋತ್ಸವ ಪ್ರಶಸ್ತಿಯ ಮಾನದಂಡ ಬದಲಾವಣೆಗೆ ಕೆ.ಎಂ. ಶಿವಸ್ವಾಮಿ ಒತ್ತಾಯ

Facebook
Twitter
Telegram
WhatsApp

 

ಚಿತ್ರದುರ್ಗ, (ಅ.31) : ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಸಾಹಿತ್ಯ, ಸಾಂಸ್ಕøತಿಕ ಪ್ರಶಸ್ತಿಗಳನ್ನು ಆಯಾ ಜಿಲ್ಲೆಯಲ್ಲಿ ನೆಲೆಸಿರುವ ಹಾಗೂ ಜಿಲ್ಲೆಯ ಜೊತೆಗೆ ಒಡನಾಟ ಹೊಂದಿರುವ ವ್ಯಕ್ತಿಗಳಿಗೆ ನೀಡಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಂ. ಶಿವಸ್ವಾಮಿ ಒತ್ತಾಯಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಸಾಹಿತ್ಯ, ಸಾಂಸ್ಕೃತಿಕ ಪ್ರಶಸ್ತಿಗಳನ್ನು ನೀಡುವಾಗ ಚಿತ್ರದುರ್ಗವನ್ನು ಕಡೆಗಣಿಸಲಾಗಿದೆ. ಜಿಲ್ಲೆಯಲ್ಲಿ ನೆಲೆಸಿರುವ ಹಾಗೂ ಜಿಲ್ಲೆಯ ಜೊತೆಗೆ ಒಡನಾಟ ಹೊಂದಿರುವವರನ್ನು ಪ್ರಶಸ್ತಿಗಳಿಗೆ ಪರಿಗಣಿಸಬೇಕು. ಆಧಾರ್ ಕಾರ್ಡ್ ಮತ್ತು ಚುನಾವಣೆಯ ಗುರುತಿನ ಚೀಟಿ ವಾಸಸ್ಥಳದ ಪ್ರಮುಖ ದಾಖಲೆಗಳಾಗಿವೆ. ಇವುಗಳನ್ನು ಆದರಿಸಿ ಪ್ರಶಸ್ತಿಗಳನ್ನು ನೀಡಬೇಕು. ಆಯಾ ಜಿಲ್ಲೆಗಳಲ್ಲಿ ವಾಸವಾಗಿರುವ ಸಾಹಿತಿ, ಕಲಾವಿದರು, ಸಮಾಜ ಸೇವರನ್ನು ಮಾತ್ರ ಪ್ರಶಸ್ತಿಗೆ ಪರಿಗಣಿಸಬೇಕು.

ಚಲನಚಿತ್ರ ರಂಗಕ್ಕೆ ಸಂಬಂಧಿಸಿದಂತೆ ದತ್ತಣ್ಣನವರಿಗೆ ಪ್ರಶಸ್ತಿ ನೀಡಿರುವುದನ್ನು ಕಸಾಪ ಸ್ವಾಗತಿಸುತ್ತಿದೆ. ಅವರು ಅತ್ಯುತ್ತಮ ಪೋಷಕರ ನಟರಾಗಿದ್ದು ಇಡೀ ರಾಜ್ಯದಲ್ಲಿ ಮನೆ ಮಾತಾಗಿದ್ದಾರೆ. ಆದರೆ ಅವರನ್ನು ಚಿತ್ರದುರ್ಗ ಜಿಲ್ಲೆಗೆ ಸೀಮಿತಗೊಳಿಸುವುದು ಸರಿಯಲ್ಲ.

ಜಿಲ್ಲೆಯಲ್ಲಿ ಸಾಹಿತ್ಯ, ಸಂಸ್ಕೃತಿ ಮತ್ತು ಕಲೆಗೆ ಸಂಬಂಧಿಸಿದ  ಹಲವಾರು ಜನರಿದ್ದಾರೆ. ಜಿಲ್ಲೆಯಲ್ಲಿ ನೆಲೆಸಿರುವ ಹಾಗೂ ನಿಕಟ ಸಂಬಂಧವನ್ನು ಹೊಂದಿರುವವರನ್ನು  ಪರಿಗಣಿಸಿದೇ ಬೆಂಗಳೂರಿನಲ್ಲಿ ನೆಲೆಸಿರುವವರನ್ನು ಪರಿಗಣಿಸುವುದು ಸರಿಯಲ್ಲ. ಇದರಿಂದ ಜಿಲ್ಲೆಯ ಪ್ರತಿಭಾವಂತ ಸಾಹಿತಿ, ಸಾಧಕರು ಅವಕಾಶ ವಂಚಿತರಾಗುತ್ತಾರೆ. ಅಕಾಡೆಮಿಗಳ ಸದಸ್ಯತ್ವದಲ್ಲೂ ಇದೇ ರೀತಿಯ ಅವಗಣನೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಚಿತ್ರದುರ್ಗ ಜಿಲ್ಲೆಗೆ ಹೆಚ್ಚಿನ ಅವಕಾಶಗಳನ್ನು ನೀಡುವಂತೆ
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರನ್ನು ಕಸಾಪ ಜಿಲ್ಲಾಧ್ಯಕ್ಷ ಕೆ.ಎಂ ಶಿವಸ್ವಾಮಿ ಒತ್ತಾಯಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?

ಈಗಂತು ಯಾರ ಕೈನಲ್ಲಿ ನೋಡಿದರು ಐಫೋನ್ ಗಳದ್ದೇ ಹಬ್ಬ. ಹಣ ಜಾಸ್ತಿ ಆದ್ರೂ ಐಫೋನ್ ಇರಲೇಬೇಕು ಅಂತಾರೆ. ಅದರಲ್ಲೂ ಐಫೋನ್ ತರಹೇವಾರಿ ಮಾಡೆಲ್ ಗಳನ್ನ ರಿಲೀಸ್ ಮಾಡ್ತಾ ಇರುತ್ತೆ. ಆದ್ರೆ ಐಫೋನ್ ಪ್ರಿಯರಿಗಾಗಿಯೇ ಬಿಗ್ಗೆಸ್ಟ್

Watermelon vs Muskmelon : ಕಲ್ಲಂಗಡಿ vs ಕರ್ಬೂಜ |  ಬೇಸಿಗೆಯಲ್ಲಿ ಆರೋಗ್ಯಕ್ಕೆ ಯಾವುದು ಉತ್ತಮ ?

  ಸುದ್ದಿಒನ್ : ಕಲ್ಲಂಗಡಿ ಮತ್ತು ಕರ್ಬೂಜ ಎರಡೂ ಬೇಸಿಗೆಯಲ್ಲಿ ಬಹಳ ಜನಪ್ರಿಯವಾದ ಹಣ್ಣುಗಳಾಗಿವೆ.  ಎರಡನ್ನೂ ಇಷ್ಟಪಡುವ ಅನೇಕ ಜನರಿದ್ದಾರೆ. ಆದರೆ ಈಗ ಇವೆರಡರಲ್ಲಿ ಯಾವುದು ಆರೋಗ್ಯಕ್ಕೆ ಒಳ್ಳೆಯದು. ಅದರ ಬಗ್ಗೆ ತಿಳಿದುಕೊಳ್ಳೋಣ. ಕಲ್ಲಂಗಡಿ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ, ಈ ಪಂಚ ರಾಶಿಗಳಿಗೆ ಆಕಸ್ಮಿಕ ಧನ ಲಾಭ ಪ್ರಾಪ್ತಿ,   ಗುರುವಾರ ರಾಶಿ ಭವಿಷ್ಯ ಏಪ್ರಿಲ್-25,2024 ಸೂರ್ಯೋದಯ: 05:57, ಸೂರ್ಯಾಸ್ತ : 06:30 ಶಾಲಿವಾಹನ

error: Content is protected !!