ಸುದ್ದಿಒನ್
ದೇಶಾದ್ಯಂತ ಟೊಮೆಟೊ ಬೆಲೆ ಗಗನಕ್ಕೇರುತ್ತಿದೆ. ಒಂದು ಕಿಲೋ ಟೊಮೆಟೊ ಬೆಲೆ ರೂ. 150 ರಿಂದ ರೂ. 200 ವರೆಗೂ ಮಾರಾಟವಾಗಿತ್ತಿದೆ. ಕೆಲವು ಪ್ರದೇಶಗಳಲ್ಲಿ ರೂ. 250ಕ್ಕಿಂತ ಹೆಚ್ಚಿನ ಬೆಲೆಗೆ ಟೊಮೇಟೊ ಮಾರಾಟವಾಗುತ್ತಿದೆ.
ಇತ್ತೀಚಿಗೆ ಚಿಕನ್ ಬೆಲೆ ಏರಿಕೆಯಾಗಿದೆ. ಕಿಲೋ ಚಿಕನ್ ಗೆ 150 ರಿಂದ 180 ರೂ.ವರೆಗೆ ಏರಿಕೆಯಾಗಿದೆ. ನೆಟ್ಟಿಗರು ಚಿಕನ್ ಗಿಂತ ಟೊಮೇಟೊ ದುಬಾರಿ ಎಂದು ಟ್ರೋಲ್ ಮಾಡುತ್ತಿದ್ದಾರೆ.
ಅಲ್ಲದೆ, ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳಿಂದ ತೀವ್ರ ಟೀಕೆಗಳ ಸುರಿಮಳೆಯಾಗುತ್ತಿದೆ. ಕೇಂದ್ರದ ಮೋದಿ ಸರಕಾರಕ್ಕೆ ಟೊಮೇಟೊ ಬೆಲೆ ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ ಎಂಬ ಆರೋಪಗಳಿವೆ. ಈ ಹಿನ್ನಲೆಯಲ್ಲಿ ಕೇಂದ್ರ ಸರಕಾರ ಟೊಮೇಟೊ ಬೆಲೆ ಇಳಿಕೆ ಮಾಡಿ ಎಲ್ಲರಿಗೂ ಸಿಗುವಂತೆ ಕ್ರಮಕೈಗೊಳ್ಳುತ್ತಿದೆ.
ಆದರೆ ಈ ಟೊಮೆಟೊ ಬೆಳೆಯನ್ನು ಹೆಚ್ಚಿನ ಸಂಖ್ಯೆಯಲ್ಲಿ ಸಂಗ್ರಹಿಸಿ ಗ್ರಾಹಕರಿಗೆ ಸಬ್ಸಿಡಿ ಮೇಲೆ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಬೆಲೆ ಕಡಿತದ ಕ್ರಮಗಳ ಭಾಗವಾಗಿ, ಹೆಚ್ಚು ಟೊಮೆಟೊಗಳನ್ನು ಬೆಳೆದ ರಾಜ್ಯಗಳಿಂದ ಬೆಳೆ ಸಂಗ್ರಹಿಸಲಾಗುತ್ತದೆ.
ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ ಈ ನಿಟ್ಟಿನಲ್ಲಿ ಕ್ರಮ ಕೈಗೊಂಡಿದೆ. ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಒಕ್ಕೂಟ – NAFED ಮತ್ತು ರಾಷ್ಟ್ರೀಯ ಸಹಕಾರಿ ಗ್ರಾಹಕ ಒಕ್ಕೂಟವು ಟೊಮೆಟೊ ಬೆಳೆ ಖರೀದಿಸಲು ಸೂಚನೆಗಳನ್ನು ನೀಡಿದೆ.
ಯಾವ ರಾಜ್ಯಗಳಲ್ಲಿ ಅತಿ ಹೆಚ್ಚು ಟೊಮೆಟೊ ಬೆಳೆಯುತ್ತಾರೆ ?
ಆದರೆ ದೇಶದ ಬಹುತೇಕ ಎಲ್ಲ ರಾಜ್ಯಗಳಲ್ಲಿ ರೈತರು ಟೊಮೆಟೊ ಬೆಳೆ ಬೆಳೆಯುತ್ತಾರೆ.
ಆದರೆ ಇತರ ರಾಜ್ಯಗಳಿಗೆ ಹೋಲಿಸಿದರೆ ಮಹಾರಾಷ್ಟ್ರ, ಕರ್ನಾಟಕ ಮತ್ತು ಆಂಧ್ರಪ್ರದೇಶದ ರೈತರು ಟೊಮೆಟೊ ಬೆಳೆಯನ್ನು ಹೆಚ್ಚು ಬೆಳೆಯುತ್ತಾರೆ. ದೇಶದಲ್ಲಿ ಬಳಕೆಯಾಗುವ ಟೊಮ್ಯಾಟೊದಲ್ಲಿ ಸುಮಾರು 58 ಪ್ರತಿಶತವು ಈ 3 ರಾಜ್ಯಗಳಿಂದ ಬರುತ್ತವೆ. ಇದರೊಂದಿಗೆ ಮಹಾರಾಷ್ಟ್ರ, ಕರ್ನಾಟಕ ಮತ್ತು ಆಂಧ್ರಪ್ರದೇಶದಿಂದ ಟೊಮೆಟೊ ಬೆಳೆ ಸಂಗ್ರಹಿಸಲು ಕೇಂದ್ರ ಆದೇಶ ಹೊರಡಿಸಿದೆ.
ಯಾವ ರಾಜ್ಯಗಳಲ್ಲಿ ಮಾರಾಟ ಮಾಡಲಾಗುತ್ತದೆ ?
ದೇಶದ ಬಹುತೇಕ ಎಲ್ಲ ರಾಜ್ಯಗಳಲ್ಲಿ ಟೊಮೇಟೊ ಬೆಲೆ ಏರಿಕೆ ಕಾಣುತ್ತಿದೆ. ಆದರೆ ಅದರಲ್ಲೂ ಉತ್ತರ ಭಾರತದ ರಾಜ್ಯಗಳಲ್ಲಿ ಟೊಮೆಟೊ ಬೆಲೆ ಹೆಚ್ಚು. ಸದ್ಯ ಭಾರೀ ಮಳೆ ಹಾಗೂ ಪ್ರವಾಹ ಉಂಟಾಗಿದ್ದು, ಅಲ್ಲಿನ ಪರಿಸ್ಥಿತಿ ತೀರಾ ಹದಗೆಟ್ಟಿದೆ. ಇದರೊಂದಿಗೆ ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಕಡಿಮೆ ಬೆಲೆಗೆ ಟೊಮೆಟೊ ಮಾರಾಟವಾಗಲಿದೆ. ಅದರಲ್ಲೂ ದೆಹಲಿ ಎನ್ ಸಿಆರ್ ಪ್ರದೇಶದಲ್ಲಿ ಟೊಮೇಟೊ ಬೆಲೆ ಹೆಚ್ಚಿರುವುದರಿಂದ ಗ್ರಾಹಕರಿಗೆ ಕಡಿಮೆ ಬೆಲೆಗೆ ನೀಡಲು ನಿರ್ಧರಿಸಲಾಗಿದೆ. ಈಗ ಮಹಾರಾಷ್ಟ್ರದ ಟೊಮೆಟೊ ಬೆಳೆ ಗುಜರಾತ್, ಮಧ್ಯಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ ಮಾರುಕಟ್ಟೆಗಳಿಗೆ ಪೂರೈಕೆಯಾಗುತ್ತಿದೆ. ವಿಶೇಷವಾಗಿ ಮಹಾರಾಷ್ಟ್ರದ ಸತಾರಾ, ನಾರಾಯಣಗಾಂವ್ ಮತ್ತು ನಾಸಿಕ್ ಪ್ರದೇಶಗಳಿಂದ ಜುಲೈ ಅಂತ್ಯದವರೆಗೆ ಟೊಮೆಟೊ ಬೆಳೆಯನ್ನು ಬೇರೆ ರಾಜ್ಯಗಳಿಗೆ ಸ್ಥಳಾಂತರಿಸಲಾಗುವುದು ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ ತಿಳಿಸಿದೆ. ಇದಲ್ಲದೇ ಕರ್ನಾಟಕದಿಂದ ದೆಹಲಿ ಎನ್‌ಸಿಆರ್, ಹಿಮಾಚಲ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಿಗೆ ಟೊಮೆಟೊ ರವಾನೆಯಾಗಲಿದೆ.
ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಚಳಿಯಲ್ಲೂ ಬೆವರುವಂತೆ ಮಾಡಿದ್ದಾರೆ. ಬೆಂಗಳೂರು, ರಾಯಚೂರು,…
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…