Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಲಿಂಗಾಯತ ಶಾಸಕರಲ್ಲಿ ಒಬ್ಬರಿಗೆ ಮುಖ್ಯಮಂತ್ರಿ ಅಥವಾ ಉಪ ಮುಖ್ಯಮಂತ್ರಿ ಪದವಿ ನೀಡಿ : ಮಹೇಶ್

---Advertisement---

 

ವರದಿ ಮತ್ತು ಫೋಟೋ ಕೃಪೆ
                ಸುರೇಶ್ ಪಟ್ಟಣ್,                         
ಮೊ : 87220 22817

ಚಿತ್ರದುರ್ಗ,(ಮೇ.15) :  ರಾಜ್ಯದ ಕಾಂಗ್ರೆಸ್ ನೇತೃತ್ವದ ಸರ್ಕಾರದಲ್ಲಿ ಲಿಂಗಾಯತ ಶಾಸಕರಲ್ಲಿ ಒಬ್ಬರನ್ನು ಮುಖ್ಯಮಂತ್ರಿ ಅಥವಾ ಉಪ ಮುಖ್ಯಮಂತ್ರಿಯನ್ನಾಗಿ ಮಾಡುವಂತೆ ಕೆಪಿಸಿಸಿ ಅಧ್ಯಕ್ಷರನ್ನು ಅಖಿಲ ಭಾರತ ವೀರಶೈವ ಮಹಾ ಸಭಾದ ಚಿತ್ರದುರ್ಗ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮಹೇಶ್ ಒತ್ತಾಯಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಈ ಚುನಾವಣೆಯಲ್ಲಿ 54 ಜನ ಲಿಂಗಾಯತ ಶಾಸಕರು ಗೆಲುವನ್ನು ಸಾಧಿಸಿದ್ದಾರೆ. ಇದರಲ್ಲಿ ಕಾಂಗ್ರೆಸ್‍ನಿಂದ 34, ಬಿಜೆಪಿಯಿಂದ 18 ಜೆಡಿಎಸ್‍ನಿಂದ 02 ಇತರೆ ಇಬ್ಬರು ಗೆಲುವನ್ನು ಸಾಧಿಸಿದ್ದಾರೆ.

ಇದರಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚಿನ ಶಾಸಕರನ್ನು ಗೆದ್ದು ಅಧಿಕಾರವನ್ನು ಹಿಡಿಯಲು ಮುಂದಾಗಿದೆ. ವಿರೇಂದ್ರ ಪಾಟೀಲ್‍ರವರು ಕಾಂಗ್ರೆಸ್‍ನಿಂದ ಲಿಂಗಾಯತ ಮುಖ್ಯಮಂತ್ರಿಗಳಾಗಿದ್ದರು. ಆದ ಮೇಲೆ ಯಾರು ಆಗಿಲ್ಲ ಈಗ ಅವಕಾಶ ಇದೆ ಇದರಿಂದ ನಮ್ಮ ಲಿಂಗಾಯತ ಶಾಸಕರಲ್ಲಿ ಅವಕಾಶ ಇದ್ದರೆ ಯಾರನ್ನಾದರೂ ಒಬ್ಬರನ್ನು ಮುಖ್ಯಮಂತ್ರಿಗಳನ್ನಾಗಿ ಮಾಡಬೇಕು ಆಗಲಿಲ್ಲ ಪಕ್ಷದಲ್ಲಿ ಉಪ ಮುಖ್ಯಮಂತ್ರಿಯನ್ನಾದರೂ ಮಾಡುವಂತೆ ಕೆಪಿಸಿಸಿ ಅಧ್ಯಕ್ಷರನ್ನು ಆಗ್ರಹಿಸಿದ್ದಾರೆ.

ಈಗ ಲಿಂಗಾಯತ ಶಾಸಕರಲ್ಲಿ ಎಸ್.ಎಸ್.ಮಲ್ಲಿಕಾರ್ಜನ್, ಈಶ್ವರ್ ಖಂಡ್ರೆ, ಎಂ.ಬಿ.ಪಾಟೀಲ್, ಈಶ್ವರ ಖಂಡ್ರೆಯವರ ತಂದೆಯವರು ಅಖಲ ಭಾರತ ವೀರಶೈವ ಮಹಾಸಭಾವನ್ನು ಕಟ್ಟಿ ಬೆಳಸಿದ್ದಾರೆ. ಇವರಿಗೆ ಉಪ ಮುಖ್ಯಮಂತ್ರಿ ಸ್ಥಾನವನ್ನು ನಿಡಬೇಕೆಂದು ಮಹೇಶ್ ಒತ್ತಾಯಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಯುವ ಘಟಕದ ಅಧ್ಯಕ್ಷ ಕಾರ್ತಿಕ್, ವಾಣಿಜ್ಯ ಘಟಕದ ಉಪಾಧ್ಯಕ್ಷ ಟಿ.ದಯಾನಂದ ಪಾಟೀಲ್, ಖಜಾಂಚಿ ದಿವಾಕರ್ ಎಸ್.ಸಂಕೋಳ್, ಶಿವಾನಂದ ಅವರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...