ಸರ್ಕಾರಿ ನೌಕರರ ಸಮುದಾಯ ಭವನ ನಿರ್ಮಾಣಕ್ಕೆ ಸರ್ಕಾರಿ ಜಮೀನು ನೀಡುವಂತೆ ಶಾಸಕರಿ ಮನವಿ

ಚಿತ್ರದುರ್ಗ, (ಫೆ.19) : ಸರ್ಕಾರಿ ನೌಕರರ ಸಮುದಾಯ ಭವನ ನಿರ್ಮಾಣಕ್ಕೆ ಸರ್ಕಾರಿ ಜಮೀನು ಮಂಜೂರು ಮಾಡಿಸಿ ಕೊಡುವಂತೆ
ಕರ್ನಾಟಕ ರಾಾಜ್ಯ ಸರ್ಕಾರಿ ನೌಕರರ ಸಂಘದ ಚಿತ್ರದುರ್ಗ ಘಟಕದ ವತಿಯಿಂದ ಜಿಲ್ಲಾಧ್ಯಕ್ಷ ಕೆ. ಮಂಜುನಾಥ್ ಅವರ ನೇತೃತ್ವದಲ್ಲಿ ಪ್ರವಾಸಿ ಮಂದಿರದಲ್ಲಿ ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ ಯವರಿಗೆ ಮನವಿಯನ್ನು ಸಲ್ಲಿಸಲಾಯಿತು.

ಚಿತ್ರದುರ್ಗ ಅತ್ಯಂತ ಹಿಂದುಳಿದ ಜಿಲ್ಲೆಯಾಗಿದ್ದು, ಸರಿಸುಮಾರು 28000 ಸಾವಿರ ಸರ್ಕಾರಿ ನೌಕರರು ವಿವಿಧ ಇಲಾಖೆಗಳಲ್ಲಿ ಸಾರ್ವಜನಿಕರ ಸೇವೆ ಸಲ್ಲಿಸುತ್ತಿರುವುದು ತಮಗೆ ತಿಳಿದಿರುವ ವಿಚಾರ   ಜಿಲ್ಲೆಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿಯೂ ಸರ್ಕಾರಿ ನೌಕರರಿಗಾಗಿ ಈಗಾಗಲೇ ಸಮುದಾಯ ಭವನ ನಿರ್ಮಾಣ ಮಾಡಿ ನೌಕರರಿಗೆ ಮತ್ತು ನೌಕರರ ಕುಟುಂಬದವರಿಗೆ ಅನುಕೂಲ ಮಾಡಲಾಗಿದೆ.

ಆದರೆ ಚಿತ್ರದುರ್ಗದಲ್ಲಿ 100 ವರ್ಷಗಳ ಇತಿಹಾಸ ಹೊಂದಿರುವ ಸರ್ಕಾರಿ ನೌಕರರಿಗೆ ಇಲ್ಲಿವರೆಗೆ ಸಮುದಾಯ ಭವನ ನಿರ್ಮಾಣ ಮಾಡಲು ಜಮೀನು ಮಂಜೂರು ಮಾಡದೇ ಇರುವುದು ವಿಪರ್ಯಾಸ. ಹಿರಿಯ, ಮುತ್ಸದ್ದಿ ನಾಯಕರು, ಸ್ಥಳೀಯ ಜನಪ್ರತಿನಿಧಿಗಳು, ಹಾಗೂ ನೌಕರರ ಬಗ್ಗೆ ಅಪಾರ ಕಾಳಜಿ ಹೊಂದಿರುವ ತಾವುಗಳು ಸರ್ಕಾರಿ ನೌಕರರು ಶುಭ ಸಮಾರಂಭ ಕಾರ್ಯಕ್ರಮಗಳನ್ನು ನಡೆಸಲು ಸುಸಜ್ಜಿತ ಸೌಲಭ್ಯ ಸಹಿತ ಸಮುದಾಯ ಭವನದ ಅವಶ್ಯಕತೆ ಇರುವುದರಿಂದ ಅದಕ್ಕೆ ಸೂಕ್ತವಾದ ಸರ್ಕಾರಿ ಜಮೀನನ್ನು ಮಂಜೂರು ಮಾಡಲು ಮಾನ್ಯ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿ ತಮ್ಮ ನೇತೃತ್ವದಲ್ಲಿ ಸಮುದಾಯ ಭವನ ನಿರ್ಮಾಣ ಕಾರ್ಯಕ್ಕೆ ಸಹಕರಿಸಬೇಕೆಂದು ತಮ್ಮಲ್ಲಿ ಚಿತ್ರದುರ್ಗ ಜಿಲ್ಲೆಯ ಸಮಸ್ತ ಸರ್ಕಾರಿ ನೌಕರರ ಪರವಾಗಿ ವಿನಂತಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!