ಚಿತ್ರದುರ್ಗ, (ಫೆ.19) : ಸರ್ಕಾರಿ ನೌಕರರ ಸಮುದಾಯ ಭವನ ನಿರ್ಮಾಣಕ್ಕೆ ಸರ್ಕಾರಿ ಜಮೀನು ಮಂಜೂರು ಮಾಡಿಸಿ ಕೊಡುವಂತೆ
ಕರ್ನಾಟಕ ರಾಾಜ್ಯ ಸರ್ಕಾರಿ ನೌಕರರ ಸಂಘದ ಚಿತ್ರದುರ್ಗ ಘಟಕದ ವತಿಯಿಂದ ಜಿಲ್ಲಾಧ್ಯಕ್ಷ ಕೆ. ಮಂಜುನಾಥ್ ಅವರ ನೇತೃತ್ವದಲ್ಲಿ ಪ್ರವಾಸಿ ಮಂದಿರದಲ್ಲಿ ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ ಯವರಿಗೆ ಮನವಿಯನ್ನು ಸಲ್ಲಿಸಲಾಯಿತು.
ಚಿತ್ರದುರ್ಗ ಅತ್ಯಂತ ಹಿಂದುಳಿದ ಜಿಲ್ಲೆಯಾಗಿದ್ದು, ಸರಿಸುಮಾರು 28000 ಸಾವಿರ ಸರ್ಕಾರಿ ನೌಕರರು ವಿವಿಧ ಇಲಾಖೆಗಳಲ್ಲಿ ಸಾರ್ವಜನಿಕರ ಸೇವೆ ಸಲ್ಲಿಸುತ್ತಿರುವುದು ತಮಗೆ ತಿಳಿದಿರುವ ವಿಚಾರ ಜಿಲ್ಲೆಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿಯೂ ಸರ್ಕಾರಿ ನೌಕರರಿಗಾಗಿ ಈಗಾಗಲೇ ಸಮುದಾಯ ಭವನ ನಿರ್ಮಾಣ ಮಾಡಿ ನೌಕರರಿಗೆ ಮತ್ತು ನೌಕರರ ಕುಟುಂಬದವರಿಗೆ ಅನುಕೂಲ ಮಾಡಲಾಗಿದೆ.
ಆದರೆ ಚಿತ್ರದುರ್ಗದಲ್ಲಿ 100 ವರ್ಷಗಳ ಇತಿಹಾಸ ಹೊಂದಿರುವ ಸರ್ಕಾರಿ ನೌಕರರಿಗೆ ಇಲ್ಲಿವರೆಗೆ ಸಮುದಾಯ ಭವನ ನಿರ್ಮಾಣ ಮಾಡಲು ಜಮೀನು ಮಂಜೂರು ಮಾಡದೇ ಇರುವುದು ವಿಪರ್ಯಾಸ. ಹಿರಿಯ, ಮುತ್ಸದ್ದಿ ನಾಯಕರು, ಸ್ಥಳೀಯ ಜನಪ್ರತಿನಿಧಿಗಳು, ಹಾಗೂ ನೌಕರರ ಬಗ್ಗೆ ಅಪಾರ ಕಾಳಜಿ ಹೊಂದಿರುವ ತಾವುಗಳು ಸರ್ಕಾರಿ ನೌಕರರು ಶುಭ ಸಮಾರಂಭ ಕಾರ್ಯಕ್ರಮಗಳನ್ನು ನಡೆಸಲು ಸುಸಜ್ಜಿತ ಸೌಲಭ್ಯ ಸಹಿತ ಸಮುದಾಯ ಭವನದ ಅವಶ್ಯಕತೆ ಇರುವುದರಿಂದ ಅದಕ್ಕೆ ಸೂಕ್ತವಾದ ಸರ್ಕಾರಿ ಜಮೀನನ್ನು ಮಂಜೂರು ಮಾಡಲು ಮಾನ್ಯ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿ ತಮ್ಮ ನೇತೃತ್ವದಲ್ಲಿ ಸಮುದಾಯ ಭವನ ನಿರ್ಮಾಣ ಕಾರ್ಯಕ್ಕೆ ಸಹಕರಿಸಬೇಕೆಂದು ತಮ್ಮಲ್ಲಿ ಚಿತ್ರದುರ್ಗ ಜಿಲ್ಲೆಯ ಸಮಸ್ತ ಸರ್ಕಾರಿ ನೌಕರರ ಪರವಾಗಿ ವಿನಂತಿಸಲಾಗಿದೆ.
ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಚಳಿಯಲ್ಲೂ ಬೆವರುವಂತೆ ಮಾಡಿದ್ದಾರೆ. ಬೆಂಗಳೂರು, ರಾಯಚೂರು,…
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…